Homeಮುಖಪುಟ'ಅನ್ನಪೂರಣಿ' ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

‘ಅನ್ನಪೂರಣಿ’ ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

- Advertisement -
- Advertisement -

ನಯನತಾರಾ ಮತ್ತು ಜೈ ಸಂಪತ್‌ ನಟನೆಯ ಚಲನಚಿತ್ರ ‘ಅನ್ನಪೂರಣಿ’ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ,  ‘ಲವ್ ಜಿಹಾದ್’ ಪರ ಪ್ರಚಾರ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದಾರೆ.

‘ಅನ್ನಪೂರಣಿ’ಯನ್ನು ಜತಿನ್ ಸೇಥಿ ಮತ್ತು ಆರ್ ರವೀಂದ್ರನ್ ಜಂಟಿಯಾಗಿ ನಿರ್ಮಿಸಿದ್ದಾರೆ. ನಯನತಾರಾ, ಜೈ ಸಂಪತ್‌, ಸತ್ಯರಾಜ್, ರೆಡಿನ್ ಕಿಂಗ್ಸ್ಲಿ, ಸುರೇಶ್ ಚಕ್ರವರ್ತಿ, ರೇಣುಕಾ ಮತ್ತು ಕೆಎಸ್ ರವಿಕುಮಾರ್ ಸಹ ನಟಿಸಿದ್ದಾರೆ. ತಮನ್ ಎಸ್ ಸಂಗೀತ ಸಂಯೋಜಿಸಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ.

‘ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌ನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...