Homeಮುಖಪುಟಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ರಾಹುಲ್ ಪ್ರಿಯಾಂಕಾ ಇಬ್ಬರನ್ನು ಬಂಧಿಸಿ ಸ್ವಲ್ಪ ಸಮಯದವರೆಗೆ ಅತಿಥಿ ಗೃಹದಲ್ಲಿ ಇರಿಸಲಾಗಿತ್ತು. ನಂತರ, ಅವರನ್ನು ಯುಪಿ ಪೊಲೀಸರು ಬಿಡುಗಡೆ ಮಾಡಿ ಮತ್ತೆ ದೆಹಲಿಗೆ ಕರೆದೊಯ್ದಿದ್ದರು.

- Advertisement -
- Advertisement -

ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಪಾದಯಾತ್ರೆ ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂತರ ಕಾಯ್ದುಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್‌ಐಆರ್ ಹಾಕಲಾಗಿದೆ ಎಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಹೇಳಿದ್ದಾರೆ.

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಹತ್ರಾಸ್‌‌: ರಾಹುಲ್ ಗಾಂಧಿ ಮೇಲಿನ ಪೊಲೀಸ್‌ ದೌರ್ಜನ್ಯ ಖಂಡಿಸಿದ ಕುಮಾರಸ್ವಾಮಿ

ರಾಹುಲ್ ಪ್ರಿಯಾಂಕಾ ಇಬ್ಬರನ್ನು ಬಂಧಿಸಿ ಸ್ವಲ್ಪ ಸಮಯದವರೆಗೆ ಅತಿಥಿ ಗೃಹದಲ್ಲಿ ಇರಿಸಲಾಗಿತ್ತು. ನಂತರ, ಅವರನ್ನು ಯುಪಿ ಪೊಲೀಸರು ಬಿಡುಗಡೆ ಮಾಡಿ ಮತ್ತೆ ದೆಹಲಿಗೆ ಕರೆದೊಯ್ದಿದ್ದರು.

ಸದ್ಯ ಗೌತಮ್ ಬುದ್ದ ನಗರ ಪೊಲೀಸರು ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 188 (ಸಾರ್ವಜನಿಕ ಸೇವಕರಾಗಿದ್ದುಕೊಂಡು ಆದೇಶ ಪಾಲನೆ ಮಾಡದಿರುವುದು), ಸೆಕ್ಷನ್ 269 (ಕಾನೂನುಬಾಹಿರ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಯಾವುದೇ ರೋಗದ ಸೋಂಕನ್ನು ಹರಡುವುದು), ಸೆಕ್ಷನ್ 270 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಗೌತಮ್ ಬುದ್ಧ ನಗರದ ಪೊಲೀಸರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ‘ಪಕ್ಷದ ಕೆಲವು ಕಾರ್ಯಕರ್ತರು ಹಲ್ಲೆ ನಡೆಸಿದ ಕಾರಣ ಮಹಿಳಾ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ. ಅಲ್ಲದೆ ಮಹಿಳಾ ಸಬ್ ಇನ್ಸ್‌ಪೆಕ್ಟರ್‌ನ ಸಮವಸ್ತ್ರ ಹರಿದುಹೋಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂಧನವನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ವಿವಿಧ ಪಕ್ಷಗಳ ಮುಖಂಡರು ಟ್ವೀಟ್ ಮಾಡಿ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.


ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ, ರಾಹುಲ್ ಗಾಂಧಿ ಮೇಲೆ ಹಲ್ಲೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್: ಪಂಜಿನ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...