Homeಕರ್ನಾಟಕಯಶ್ ನಟನೆಯ 'ಟಾಕ್ಸಿಕ್' ಸಿನಿಮಾಕ್ಕಾಗಿ ಮರ ಕಡಿದ ಆರೋಪ : ಎಫ್‌ಐಆರ್ ದಾಖಲು

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ : ಎಫ್‌ಐಆರ್ ದಾಖಲು

- Advertisement -
- Advertisement -

ನಟ ಯಶ್ ಅಭಿನಯದ ಮುಂಬರುವ ಚಿತ್ರ ‘ಟಾಕ್ಸಿಕ್‌’ಗೆ ಕಾನೂನು ಸಂಕಷ್ಟ ಎದುರಾಗಿದೆ. ಸಿನಿಮಾ ಶೂಟಿಂಗ್‌ಗಾಗಿ ಬೆಂಗಳೂರಿನ ಹೆಚ್‌ಎಂಟಿ ಅರಣ್ಯ ಭೂಮಿಯಲ್ಲಿನ ಮರಗಳನ್ನು ಕಡಿದ ಆರೋಪ ಸಂಬಂಧ ಹಲವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

‘ಟಾಕ್ಸಿಕ್’ ಚಿತ್ರ ನಿರ್ಮಾಣ ಸಂಸ್ಥೆಯಾದ ವೆಂಕಟ್ ಕೆ. ನಾರಾಯಣ್ ಮಾಲೀಕತ್ವದ ಕೆವಿಎನ್‌ ಪ್ರೊಡಕ್ಷನ್‌, ಯಶ್‌ ಸಹ ಮಾಲೀಕತ್ವ ಹೊಂದಿರುವ ಚಿತ್ರ ನಿರ್ಮಾಣ ಸಂಸ್ಥೆ ಮಾನ್‌ಸ್ಟರ್‌ ಮೈಂಡ್‌ ಕ್ರಿಯೇಷನ್ಸ್‌ , ಬಳ್ಳಾರಿ ರಸ್ತೆ ಕೆನರಾ ಬ್ಯಾಂಕ್ ಶಾಖೆಯ ಜನರಲ್ ಮ್ಯಾನೇಜರ್, ಬಳ್ಳಾರಿ ರಸ್ತೆ ಹೆಚ್‌ಎಂಟಿ ಸಂಸ್ಥೆಯ ಜನರಲ್ ಮ್ಯಾನೇಜರ್ ಮತ್ತು ಇತರರ ವಿರುದ್ದ ಅರಣ್ಯ ಇಲಾಖೆ ಕರ್ನಾಟಕ ಅರಣ್ಯ ಕಾಯ್ದೆ 1963 ಸೆಕ್ಷನ್‌ 24(ಜಿ) ಅಡಿ ಶನಿವಾರ (ನ.9) ಎಫ್‌ಐಆರ್‌ ದಾಖಲಿಸಿದೆ.

ಎಫ್‌ಐಆರ್ ಪ್ರತಿ

ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿನ ಮರಗಳನ್ನು ಕಾನೂನು ಬಾಹಿರವಾಗಿ ಕತ್ತರಿಸಿರುವ ಆರೋಪದ ಸಂಬಂಧ ಟಾಕ್ಸಿಕ್ ಚಿತ್ರ ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನವೆಂಬರ್‌ 6 ರಂದು ಆದೇಶಿಸಿತ್ತು.

ಪೀಣ್ಯಾ ಪ್ರದೇಶದಲ್ಲಿರುವ ಸರ್ವೇ ನಂಬರ್‌ 2ರಲ್ಲಿನ ಜಾಗವು ಸಂರಕ್ಷಿತ ಅರಣ್ಯವಾಗಿದ್ದು, ಅಲ್ಲಿ ಬೆಳೆದಿದ್ದ ಮರಗಳನ್ನು ಅಕ್ರಮವಾಗಿ ಕತ್ತರಿಸಲಾಗಿದೆ ಎಂದು ಪೀಣ್ಯಾ ವಲಯದ ಅರಣ್ಯಾಧಿಕಾರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಎಂಟನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿ ದೀಪಾ ಅವರು, ಕಾನೂನು ಕ್ರಮಕ್ಕೆ ಸೂಚಿಸಿದ್ದರು.

“ಹೆಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್‌ಗಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದೆ. ಈ ಅಕ್ರಮ ಕೃತ್ಯದ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದು ಅಕ್ಟೋಬರ್ 29ರಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಪಿಸಿದ್ದರು.

ಇದನ್ನೂ ಓದಿ : ರ‍್ಯಾಪಿಡೋ ಪ್ರಕರಣ | ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...