Homeಮುಖಪುಟಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ಬಿಜೆಪಿಯು ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿತ್ತು. ಇದರಲ್ಲಿ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.

- Advertisement -
- Advertisement -

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಸೋಮವಾರ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರಾದ ಕೈಲಾಶ್ ವಿಜಯವರ್ಗಿಯಾ, ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್, ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಸೇರಿದಂತೆ ಇತರ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ, ಸಾರ್ವಜನಿಕ ಸೇವಕರ ಮೇಲೆ ಹಲ್ಲೆ ಸೇರಿದಂತೆ ಜಾಮೀನು ರಹಿತ ಪ್ರಕರಣಗಳ ವಿಭಾಗಗಳ ಅಡಿಯಲ್ಲಿ ಬಿಜೆಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಪ್ರಜಾಪ್ರಭುತ್ವ ಕಗ್ಗೊಲೆ ಎಂದ ತೇಜಸ್ವಿ ಸೂರ್ಯ

“ಪ್ರತಿಭಟನೆಯ ವೇಳೆ ಪೊಲೀಸರು ಹಾಕಿದ ಬ್ಯಾರಿಕೇಡ್‌ಗಳನ್ನು ಬಿಜೆಪಿ ಕಾರ್ಯಕರ್ತರು ಕಿತ್ತುಹಾಕಿ, ಬೆಂಕಿ ಹಚ್ಚಿ ಕಲ್ಲು ತೂರಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲ ಫಿರಂಗಿಗಳನ್ನು ಮತ್ತು ಟಿಯರ್ ಗ್ಯಾಸ್‌ ಅನ್ನು ಬಳಸಿದರು” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಭಟನೆಯ ಸಮಯದಲ್ಲಿ ಬಿಜೆಪಿ ಬೆಂಬಲಿಗ ಉಲೆನ್ ರಾಯ್ ಗಾಯಗೊಂಡಿದ್ದರು. ಪೊಲೀಸ್ ಗುಂಡಿನ ದಾಳಿಯಲ್ಲಿ ರಾಯ್ ಕೊಲ್ಲಲ್ಪಟ್ಟರು ಎಂದು ಬಿಜೆಪಿ ಆರೋಪಿಸಿದ್ದರು. ಉಲೆನ್ ರಾಯ್ ಸಾವಿಗೆ ಶಾಟ್‌ಗನ್ ದಾಳಿಯೇ ಕಾರಣ ಎಂದು ವೈದ್ಯಕೀಯ ವರದಿ ಹೇಳಿತ್ತು. ಆದರೆ ಪೊಲೀಸರು ಶಾಟ್‌ಗನ್ ಬಳಸಿಯೇ ಇಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ಬಿಜೆಪಿಯು ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿತ್ತು. ಇದರಲ್ಲಿ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು. ಇಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು.

ಇದನ್ನೂ ಓದಿ:  ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

“ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗಿದೆ” ಎಂದು ತೇಜಸ್ವಿ ಸೂರ್ಯ ಕಿಡಿ ಕಾರಿದ್ದಾರೆ.

“ಬಿಜೆಪಿ ಅನಗತ್ಯವಾಗಿ ಹಿಂಸೆಯನ್ನು ಪ್ರಚೋದಿಸುತ್ತದೆ. ಅವರು ಶಾಂತಿಯುತ ಪ್ರತಿಭಟನೆ ನಡೆಸಬಹುದಿತ್ತು” ಎಂದು ಟಿಎಂಸಿ ಸಂಸದ ಪ್ರೊಫೆಸರ್ ಸೌಗತಾ ರಾಯ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇನ್ನೇನು ಚುನಾವಣೆ ಬರುತ್ತಿದ್ದು, ಇದರ ಭಾಗವಾಗಿಯೇ ಬಿಜೆಪಿ ಇಂತಹ ತಂತ್ರಗಳನ್ನು ಆಶ್ರಯಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಇದನ್ನೂ ಓದಿ:  ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

“ಜೊತೆಗೆ ಕಳೆದ ಎರಡು ವಾರಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅಮಾನವೀಯ ಮತ್ತು ಅಸಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸಹ ಈ ಬಿಜೆಪಿ ನಾಯಕರು ಯಾರೂ ತುಟಿಬಿಚ್ಚಲಿಲ್ಲ. ಆದರೆ ಈಗ ತಮ್ಮ ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಕ್ಕೆ ಪ್ರಜಾಪ್ರಭುತ್ವ ಸತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಹಲವರು ಬಿಜೆಪಿಯ ವರ್ತನೆಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ಪೊಲೀಸರಿಂದ ಬೂಟು ನೆಕ್ಕಿಸುತ್ತೇವೆ ಎಂದ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...