Homeಮುಖಪುಟಮಧ್ಯಪ್ರದೇಶ ಸರ್ಕಾರದ ಮೇಲೆ 50% ಭ್ರಷ್ಟಾಚಾರ ಆರೋಪ ಮಾಡಿದ ಪ್ರಿಯಾಂಕಾ ಗಾಂಧಿ ವಿರುದ್ಧ 41 ಜಿಲ್ಲೆಗಳಲ್ಲಿ...

ಮಧ್ಯಪ್ರದೇಶ ಸರ್ಕಾರದ ಮೇಲೆ 50% ಭ್ರಷ್ಟಾಚಾರ ಆರೋಪ ಮಾಡಿದ ಪ್ರಿಯಾಂಕಾ ಗಾಂಧಿ ವಿರುದ್ಧ 41 ಜಿಲ್ಲೆಗಳಲ್ಲಿ FIR

- Advertisement -
- Advertisement -

ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ಸಂಬಂಧ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ ಖಾತೆಗಳ “ಹ್ಯಾಂಡ್ಲರ್” ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮಧ್ಯ ಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು ಕಮಿಷನ್‌ ಆರೋಪ ಮಾಡಿರುವ ಹಿನ್ನೆಲೆ ಕೇಸ್‌ ದಾಖಲಿಸಲಾಗಿದೆ.

ಶುಕ್ರವಾರ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಧ್ಯ ಪ್ರದೇಶದ ಗುತ್ತಿಗೆದಾರರ ಒಕ್ಕೂಟವು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದು, 50% ಕಮಿಷನ್ ಪಾವತಿಸಿದ ನಂತರವೇ ತಮ್ಮ ಪಾವತಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ದೂರಿದ್ದಾರೆ ಎಂದು ಎಕ್ಸ್‌ (ಈ ಹಿಂದಿನ ಟ್ವಿಟ್ಟರ್‌( ನಲ್ಲಿ ಪೋಸ್ಟ್‌ ಮಾಡಿದ್ದಾರೆ.

”ಕರ್ನಾಟಕದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ 40% ಕಮಿಷನ್ ಸಂಗ್ರಹಿಸುತ್ತಿತ್ತು, ಮಧ್ಯ ಪ್ರದೇಶದಲ್ಲಿ ಬಿಜೆಪಿ ಭ್ರಷ್ಟಾಚಾರದ ತನ್ನದೇ ದಾಖಲೆಯನ್ನು ಮುರಿದು ಮುನ್ನಡೆದಿದೆ. 40% ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕಿತ್ತೊಗೆದರು. ಈಗ ಮಧ್ಯ ಪ್ರದೇಶದ ಜನರು 50% ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ” ಎಂದು ಅವರು ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಇನ್ನು, ಕಮಲ್‌ ನಾಥ್‌ ಮತ್ತು ಅರುಣ್‌ ಯಾದವ್ ಕೂಡ ಇದೇ ರೀತಿಯ ಪೋಸ್ಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಭೂಮಿ, ವಸತಿ ಹಕ್ಕು ಸಿಗುವವರೆಗೂ ಹೋರಾಟ ನಿಲ್ಲದು: ದೊರೆಸ್ವಾಮಿ ಹೆಸರಿನಲ್ಲಿ ಭೂಮಿ ವಂಚಿತರಿಂದ ಪ್ರತಿಜ್ಞೆ

ಇನ್ನೊಂದೆಡೆ, ಪ್ರಿಯಾಂಕಾ ಗಾಂಧಿಯವರ ಆರೋಪವನ್ನು ಸುಳ್ಳು ಎಂದು ಹೇಳಿದ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಕಾಂಗ್ರೆಸ್‌ ನಾಯಕಿಯ ಆರೋಪ ಬೆಂಬಲಿಸುವ ಪುರಾವೆಯನ್ನು ಕೇಳಿದರು. ಇಲ್ಲದಿದ್ದರೆ ಕಾನೂನು ಕ್ರಮಕ್ಕಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿಯ ಮುಂದೆ ಆಯ್ಕೆಗಳು ತೆರೆದಿರುತ್ತವೆ ಎಂದು ಗೃಹ ಸಚಿವರು ಹೇಳಿದ್ದಾರೆ.

ವಿರೋಧ ಪಕ್ಷ ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಶುಕ್ರವಾರ ಸಂಜೆ ಗ್ವಾಲಿಯರ್ ಪೊಲೀಸರು ಸಹ ಪ್ರಿಯಾಂಕಾ ಗಾಂಧಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ತಡರಾತ್ರಿ ಜ್ಞಾನೇಂದ್ರ ಅವಸ್ಥಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡಲಾಗುತ್ತಿದೆ. ಇದು ನಕಲಿ ಪತ್ರವಾಗಿದೆ ಎಂದು ಸ್ಥಳೀಯ ಬಿಜೆಪಿಯ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ದೂರಿದ್ದಾರೆ ಎಂದು ಹೇಳಿದರು.

ಇಂದೋರ್‌ ನಗರದ ಸಂಯೋಗಿತಗಂಜ್ ಪೊಲೀಸ್ ಠಾಣೆಯಲ್ಲಿ ಜ್ಞಾನೇಂದ್ರ ಅವಸ್ಥಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕಮಲ್‌ ನಾಥ್ ಮತ್ತು ಅರುಣ್ ಯಾದವ್ ಅವರ ‘ಎಕ್ಸ್’ ಖಾತೆಗಳ “ಹ್ಯಾಂಡ್ಲರ್” ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇಂದೋರ್‌ ನಗರದ ಸಂಯೋಗಿತಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಮಲ್‌ ನಾಥ್ ಮತ್ತು ಅರುಣ್ ಯಾದವ್ ಅವರ ಟ್ವಿಟ್ಟರ್‌ ಹ್ಯಾಂಡಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಾಮ್ಸನೇಹಿ ಮಿಶ್ರಾ ಮಾಹಿತಿ ನೀಡಿದ್ದರು. ನಿಮೇಶ್ ಪಾಠಕ್ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 420 (ವಂಚನೆ) ಮತ್ತು 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ನಕಲಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದೂ ಅವರು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...