Homeಮುಖಪುಟಬಂಧಿತ ಐಎಎಸ್‌ ಅಧಿಕಾರಿ ಜೊತೆ ಅಮಿತ್ ಶಾ ಇರುವ ಹಳೆಯ ಪೋಟೋ ಪೋಸ್ಟ್‌ ಮಾಡಿದ್ದಕ್ಕೆ ನಿರ್ದೇಶಕನ...

ಬಂಧಿತ ಐಎಎಸ್‌ ಅಧಿಕಾರಿ ಜೊತೆ ಅಮಿತ್ ಶಾ ಇರುವ ಹಳೆಯ ಪೋಟೋ ಪೋಸ್ಟ್‌ ಮಾಡಿದ್ದಕ್ಕೆ ನಿರ್ದೇಶಕನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಬಂಧಿಸಿರುವ ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿರುವ ಫೋಟೋವನ್ನು ಹಂಚಿಕೊಂಡ ಆರೋಪದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದ (ಡಿಸಿಬಿ) ಘಟಕವು ಚಲನಚಿತ್ರ ನಿರ್ದೇಶಕ ಅವಿನಾಶ್ ದಾಸ್ ವಿರುದ್ಧ ಪ್ರಕರಣ ದಾಖಲಿಸಿದೆ.

2017ರಲ್ಲಿ ರಾಂಚಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅಮಿತ್ ಶಾ ಮತ್ತು ಸಿಂಘಾಲ್ ಪರಸ್ಪರ ಮಾತನಾಡುತ್ತಿರುವ ಫೋಟೋವನ್ನು ಅವಿನಾಶ್ ದಾಸ್‌ ಹಂಚಿಕೊಂಡಿದ್ದು ಜನರನ್ನು ದಾರಿತಪ್ಪಿಸಲು ಮತ್ತು ‌ಅಮಿತ್ ಶಾ ಅವರ ಪ್ರತಿಷ್ಠೆಗೆ ಕುಂದುತರಲು ಯತ್ನಿಸಿದ್ದಾರೆಂದು ಪೊಲೀಸರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜವನ್ನು ಧರಿಸಿರುವ ಮಹಿಳೆಯ ಚಿತ್ರವನ್ನು ಶೇರ್ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆಯೂ ‘ಅನಾರ್ಕಲಿ ಆಫ್ ಆರಾಹ್’ ಚಿತ್ರದ ನಿರ್ದೇಶಕ ದಾಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2009-10ರ ಅವಧಿಯಲ್ಲಿ ರಾಜ್ಯದ ಖುಂಟಿ ಜಿಲ್ಲೆಯಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದ ಅವಧಿಯಲ್ಲಿ ನರೇಗ ನಿಧಿಯನ್ನು ಬೇರೆಡೆಗೆ ತಿರುಗಿಸಿದ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಗಣಿ ಕಾರ್ಯದರ್ಶಿ ಸಿಂಘಾಲ್ ಅವರನ್ನು ಇ.ಡಿ. ಬುಧವಾರ ಬಂಧಿಸಿತ್ತು. ಜಾರ್ಖಂಡ್‌ನಲ್ಲಿ ಸಿಂಘಾಲ್‌ಗೆ ಸಂಬಂಧವಿದೆ ಎನ್ನಲಾದ ಚಾರ್ಟರ್ಡ್ ಅಕೌಂಟೆಂಟ್‌ನ ಮನೆಯಿಂದ 18 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿರಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

“ಮಹಿಳೆಯ ಮೇಲೆ ತ್ರಿವರ್ಣ ಧ್ವಜವನ್ನು ತೋರಿಸುವ ಅಶ್ಲೀಲ ಚಿತ್ರವನ್ನು ಮಾರ್ಚ್ 17 ರಂದು ಅವಿನಾಶ್ ದಾಸ್ ಎಂಬ ವ್ಯಕ್ತಿ ಹಂಚಿಕೊಂಡಿದ್ದಾರೆ ಎಂದು ಡಿಸಿಬಿಯ ತಾಂತ್ರಿಕ ಪಿಎಸ್ಐ ಕೆ ಪಿ ಪಟೇಲ್ ಅವರ ಗಮನಕ್ಕೆ ತರಲಾಯಿತು. ಹೆಚ್ಚುವರಿಯಾಗಿ, ಮೇ 8 ರಂದು ದಾಸ್ ಅವರ ಟ್ವಿಟ್ಟರ್ ಖಾತೆಯಲ್ಲಿ ಜನರನ್ನು ದಾರಿತಪ್ಪಿಸುವ ಉದ್ದೇಶದಿಂದ, ಶಾ ಅವರ ಪ್ರತಿಷ್ಠೆಗೆ ಹಾನಿ ಮಾಡುವ ಸಲುವಾಗಿ ಮತ್ತೊಂದು ಪೋಸ್ಟ್‌ ಮಾಡಲಾಯಿತು. ಐಎಎಸ್ ಪೂಜಾ ಸಿಂಘಾಲ್ ಅವರೊಂದಿಗೆ ಅಮಿತ್ ಶಾ ಅವರಿರುವ ಸುಮಾರು ಐದು ವರ್ಷಗಳ ಹಳೆಯ ಚಿತ್ರವನ್ನು ಹಂಚಿಕೊಳ್ಳಲಾಯಿತು. ಆ ನಿಟ್ಟಿನಲ್ಲಿ ದಾಸ್ ವಿರುದ್ಧ ಐಪಿಸಿ ಸೆಕ್ಷನ್‌ 469, ಐಟಿ ಕಾಯ್ದೆಯ ಸೆಕ್ಷನ್ 67, ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಅಹಮದಾಬಾದ್ ಡಿಸಿಬಿ ಘಟಕ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...