ಗಣರಾಜ್ಯೋತ್ಸವ

ಮಂಗಳವಾರ ದೆಹಲಿಯ ರೈತ ಗಣರಾಜ್ಯೋತ್ಸವದಲ್ಲಿ ನಡೆದ ಗದ್ದಲದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಮಾರು 200 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಸರಿಯಾದ ಪರಿಶೀಲನೆ ನಡೆಸಿದ ನಂತರ ಬಂಧನಗಳನ್ನು ಮಾಡುತ್ತಿದ್ದೇವೆ ಮತ್ತು ಈವರೆಗೆ 22 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ದೆಹಲಿ ಪೊಲೀಸರು ರೈತ ಹೋರಾಟದ ಮುಂಚೂಣಿಯಲ್ಲಿರುವ, ದರ್ಶನ್ ಪಾಲ್, ರಾಜೀಂದರ್‌ ಸಿಂಗ್, ಬಲ್‌‌ಬೀರ್‌ ಸಿಂಗ್ ರಾಜೇವಾಲ್, ಬೂಟಾ ಸಿಂಗ್ ಬುರ್ಜ್‌ಗಿಲ್, ಜೋಗೀಂದರ್‌ ಸಿಂಗ್‌, ರಾಕೇಶ್ ಟಿಕಾಯತ್‌, ಯೋಗೇಂದ್ರ ಯಾದವ್ ಸೇರಿದಂತೆ ಹತ್ತು ರೈತ ಮುಖಂಡರ ಹೆಸರನ್ನು ನಮೂದಿಸಿ ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಕೆಂಪು ಕೋಟೆಯಲ್ಲಿ ಧ್ವಜ ಹಾರಿಸುವಾಗ ಅಲ್ಲೇ ಇದ್ದ ದೀಪ್ ಸಿಧು ಅವರ ಮೇಲೆ ಯಾವುದೆ ಎಫ್‌ಐಆರ್‌ ದಾಖಲಾಗಿಲ್ಲ.

ಇದನ್ನೂ ಓದಿ: ಸಿಖ್ ಧ್ವಜ ಹಾರಿಸಿದ ಗುಂಪನ್ನು ಕೆಂಪುಕೋಟೆಯವರೆಗೆ ಹೋಗಲು ಪೊಲೀಸರು ಬಿಟ್ಟಿದ್ದೇಕೆ? – ರೈತ ಮುಖಂಡರ ಪ್ರಶ್ನೆ

ಘಟನೆಯಲ್ಲಿ 300 ಪೊಲೀಸರು ಗಾಯಗೊಂಡಿದ್ದಾರೆ, ಸಂಘರ್ಷದಲ್ಲಿ ಭಾಗಿಯಾಗಿರುವ ರೈತರನ್ನು ಗುರುತಿಸಲು ಅನೇಕ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾಗಿ ದಿಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಭಾಗವಹಿಸಿದ ರೈತ ಗುಂಪೊಂದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು, ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಪೊಲೀಸರು ಕೂಡಾ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿದ್ದರು.

ಇದನ್ನೂ ಓದಿ: ಗಣರಾಜ್ಯೋತ್ಸವ ಆಚರಣೆ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಘಟನೆಯ ಬಗ್ಗೆ ವಿಚಾರಣೆ ನಡೆಸಲು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಕೆಯಾಗಿದೆ. ಹಿಂಸಾಚಾರಕ್ಕೆ ಕಾರಣವಾದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ಮಾಡುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ಮಾಡುವಂತೆ ಮನವಿಯಲ್ಲಿ ಕೋರಲಾಗಿದೆ.

ಕೇಂದ್ರದ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಎರಡು ತಿಂಗಳಿನಿಂದ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರು. ಕೇಂದ್ರ ಸರ್ಕಾರ ರೈತರೊಂದಿಗೆ ಇರುವರೆಗೂ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಇವೆಲ್ಲವೂ ಮುರಿದು ಬಿದ್ದಿದೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಧ್ವಜ ಹಾರಾಟ – ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಮತ್ತು ಮಾಧ್ಯಮಗಳು

LEAVE A REPLY

Please enter your comment!
Please enter your name here