Homeಕರ್ನಾಟಕಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

- Advertisement -
- Advertisement -

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್, ದಲಿತ ಸಂಘಟನೆಯ ಮರಿಯಪ್ಪ, ದುಡಿಯುವ ಜನರ ಪರ ವೇದಿಕೆಯ ಮುಖಂಡ ಇಸಾಕ್ ಮತ್ತು ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಹೆಡ್‌ ಕಾನ್‌ಸ್ಟೇಬಲ್ ಶಂಕರ್ ನಾಯ್ಕ್ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.

2025 ಡಿಸೆಂಬರ್ 20ರಂದು ಕೋಗಿಲು ಬಡಾವಣೆಯ ಸರ್ವೆ ನಂ. 99ರಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳು ತೆರವು ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸ್ಥಳದಲ್ಲಿ ಬಂದೋಬಸ್ತ್‌ ಕೆಲಸಕ್ಕೆ ನಮ್ಮನ್ನು ನೇಮಿಸಲಾಗಿತ್ತು. ಅಂದು ಬೆಳಿಗ್ಗೆ 11.30ರ ಸುಮಾರಿಗೆ ಏಕಾಏಕಿ ಸ್ಥಳಕ್ಕೆ ಬಂದಿದ್ದ ನಾಲ್ವರು, ಸ್ಥಳದಲ್ಲಿದ್ದವರನ್ನು ಶಾಲಾ ಆವರಣಕ್ಕೆ ಕರೆದೊಯ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಗಳು ಅನುಮತಿ ಪಡೆಯದೆ ಸುಮಾರು 200 ಜನರನ್ನು ಸರ್ಕಾರಿ ಶಾಲೆಯ ಆವರಣದಲ್ಲಿ ಸೇರಿಸಿಕೊಂಡು ಮೈಕ್ ಮೂಲಕ ತೆರವು ಕಾರ್ಯಾಚರಣೆ ವಿರುದ್ದ ದಿಕ್ಕಾರ ಕೂಗಿದ್ದಾರೆ. ಮುಂದೆ ಉಗ್ರ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ನಾವು ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವ ಬಗ್ಗೆ ಮತ್ತು ಹೈಕೋರ್ಟ್‌ ಆದೇಶದ ಬಗ್ಗೆ ತಿಳಿಸಿದರೂ ಕೇಳದೆ, ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹೇಳಲಾಗಿದೆ.

ಇತರ ನಾಲ್ವರ ವಿರುದ್ದ ಎಫ್‌ಐಆರ್

ಇನ್ನೊಂದೆಡೆ ಹಣ ಪಡೆದು ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣಕ್ಕೆ ಸಹಕರಿಸಿದ್ದಾರೆಂಬ ಆರೋಪದಡಿ ನಾಲ್ವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಜಯ್‌, ವಸೀಂ ಉಲ್ಲಾ ಬೇಗ್‌, ಮುನಿ ಆಂಜಿನಪ್ಪ, ರಾಬಿನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಂಜಿನಿಯರ್ ನೀಡಿದ ದೂರು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...