Homeಮುಖಪುಟಬೋರ್ಡ್‌ ಮೇಲೆ 'ಜೈ ಶ್ರೀರಾಮ್' ಎಂದು ಬರೆದ ವಿದ್ಯಾರ್ಥಿಗೆ ಥಳಿಸಿದ್ದಕ್ಕೆ ಪ್ರಾಂಶುಪಾಲರು, ಶಿಕ್ಷಕರ ವಿರುದ್ಧ FIR...

ಬೋರ್ಡ್‌ ಮೇಲೆ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗೆ ಥಳಿಸಿದ್ದಕ್ಕೆ ಪ್ರಾಂಶುಪಾಲರು, ಶಿಕ್ಷಕರ ವಿರುದ್ಧ FIR ದಾಖಲು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ತರಗತಿಯ ಬೋರ್ಡ್‌ ಮೇಲೆ ”ಜೈ ಶ್ರೀರಾಮ್” ಎಂದು ಬರೆದ ವಿದ್ಯಾರ್ಥಿಯೊಬ್ಬನನ್ನು ಪ್ರಾಂಶುಪಾಲರು ಮತ್ತು ಶಿಕ್ಷಕರು ಥಳಿಸಿದ್ದಾರೆ ಎನ್ನುವ ಆರೋಪದ ಮೇಲೆ ಶನಿವಾರ ಪ್ರಕರಣ ದಾಖಲಿಸಲಾಗಿದೆ.

ಶುಕ್ರವಾರ ಬನಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉರ್ದು ಶಿಕ್ಷಕ ಫಾರೂಕ್ ಅಹ್ಮದ್ ಮತ್ತು ಶಾಲೆಯ ಪ್ರಾಂಶುಪಾಲ ಮೊಹಮ್ಮದ್ ಹಫೀಜ್ ತನ್ನ ಮಗನನ್ನು ಥಳಿಸಿದ್ದಾರೆ ಎಂದು ಬಾಲಕನ ತಂದೆ ಕುಲದೀಪ್ ಸಿಂಗ್ ಅವರು ದೂರು ನೀಡಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ, ಕಥುವಾ ಜಿಲ್ಲೆಯ ಬಾನಿ, ಬಸೋಹ್ಲಿ, ದುಗ್ಗನ್ ಮತ್ತು ಇತರ ಸ್ಥಳಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

”10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನನ್ನು ಶಿಕ್ಷಕ ಫಾರೂಕ್ ಅಹ್ಮದ್ ಅವರು ಪ್ರಾಂಶುಪಾಲರ ಕಚೇರಿವರೆಗೆ ಎಳೆದೊಯ್ದು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಧಾರ್ಮಿಕ ಘೋಷಣೆಯನ್ನು ಬರೆದಿದ್ದಕ್ಕಾಗಿ ವಿದ್ಯಾರ್ಥಿಯನ್ನು ಥಳಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಆ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಿಕ್ಷಕ ಮತ್ತು ಪ್ರಾಂಶುಪಾಲರ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 342 (ತಪ್ಪಾದ ಬಂಧನ), 504 (ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಮತ್ತು ಬಾಲಾಪರಾಧಿಗಳ ಸೆಕ್ಷನ್ 75 (ಮಗುವಿಗೆ ಕ್ರೌರ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿಕ್ಷಕನನ್ನು ಶನಿವಾರ ಬಂಧಿಸಲಾಗಿದ್ದು, ಪ್ರಾಂಶುಪಾಲರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಥುವಾ ಜಿಲ್ಲಾಧಿಕಾರಿ ರಾಕೇಶ್ ಮಿನ್ಹಾಸ್ ಅವರು ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...