Homeಮುಖಪುಟಪ್ರತಿಭಟನೆ ನಡೆಸಿದ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್‌ ದಾಖಲು

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಬಂಧಿಸುವಂತೆ ಭಾನುವಾರ ಬೆಳಿಗ್ಗೆ ಬೀದಿಗಿಳಿದಿದ್ದ ಖ್ಯಾತ ಕುಸ್ತಿಪಟುಗಳ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ಆಯೋಜಕರು ಮತ್ತು ಕುಸ್ತಿಪಟುಗಳ ವಿರುದ್ಧ ಬಾರಾಖಂಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರತಿಭಟನೆ ವೇಳೆ ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದರು. ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ನೂಕಾಟ ನಡೆದಿತ್ತು. ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧನ ಮಾಡಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಕಿದ್ದ ತಾತ್ಕಾಲಿಕ ಟೆಂಟ್‌ಗಳನ್ನೂ ತೆರವು ಮಾಡಿದರು.

ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯನಿರತ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ), 332 (ಸಾರ್ವಜನಿಕ ಸೇವಕರ ಕರ್ತವ್ಯ ತಡೆದು ಸ್ವಯಂಪ್ರೇರಣೆಯಿಂದ ಅಡ್ಡಿ) ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದರ ನಡುವೆ ಹರಿಯಾಣದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಸೇರಿದಂತೆ ಹಲವಾರು ರೈತ ಮುಖಂಡರನ್ನು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ. ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿ ರೈತರು ದೆಹಲಿಗೆ ಮೆರವಣಿಗೆ ಹೊರಡಲಿದ್ದರು.

ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಖ್ಯಾತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಜರುಗಿಸಿರುವ ಕ್ರಮದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

“ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭವೆಂದು ಪರಿಗಣಿಸಿದ್ದಾರೆ. ಪಟ್ಟಾಭಿಷೇಕ ಮುಗಿದಿದೆ – ದುರಹಂಕಾರಿ ರಾಜ ಬೀದಿಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾನೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ಬಿಜೆಪಿ ಸರ್ಕಾರದ ದುರಹಂಕಾರವು ಎಷ್ಟು ಹೆಚ್ಚಾಗಿದೆ ಎಂದರೆ- ಸರ್ಕಾರವು ನಮ್ಮ ಮಹಿಳಾ ಆಟಗಾರರ ಧ್ವನಿಯನ್ನು ನಿರ್ದಯವಾಗಿ ಬೂಟಿನ ಕೆಳಗೆ ಹಾಕಿ ತುಳಿಯುತ್ತಿದೆ” ಎಂದು ಟೀಕಿಸಿದ್ದಾರೆ.

“ಕ್ರೀಡಾಪಟುಗಳ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ” ಎಂದು ಅವರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...