Homeಕರ್ನಾಟಕರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

- Advertisement -
- Advertisement -

‌‌ರೈತ ಮುಖಂಡ ರಾಕೇಶ್ ಟಿಕಾಯತ್‌ ಅವರ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲಾಗಿದೆ ಎಂದು ಬುಧವಾರ ವರದಿಯಾಗಿದೆ. ನಗರದಲ್ಲಿ ನಡೆದಿದ್ದ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಈ ಪ್ರಕರಣದ ದಾಖಲಾಗಿದೆ.

ಮಾರ್ಚ್ 20 ರ ಶನಿವಾರದಂದು ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ ಶಿವಮೊಗ್ಗದಲ್ಲಿ ನಡೆದಿತ್ತು. ಈ ಮಹಾಪಂಚಾಯತ್‌ಗೆ ರೈತ ಮುಖಂಡರಾದ ರಾಕೇಶ್ ಟೀಕಾಯತ್‌, ದರ್ಶನ್ ಪಾಲ್, ಯುದ್ದವೀರ್‌ ಸಿಂಗ್, ಚುಕ್ಕಿ ನಂಜುಂಡಸ್ವಾಮಿ, ಕೋಡಿಹಳ್ಳಿ ಚಂದ್ರಶೇಖರ್‌ ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

ಶಿವಮೊಗ್ಗದಲ್ಲಿ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಹೇಳಿದ್ದೇನು? ಇಲ್ಲಿ ಕ್ಲಿಕ್ ಮಾಡಿ

ಈ ವೇಳೆ ಮಾತನಾಡಿದ್ದ ರಾಕೇಶ್ ಟೀಕಾಯತ್‌, “ಇಂದು ದೇಶದ ಬಡವರ ಹಸಿವಿನ ಮೇಲೆ ವ್ಯಾಪಾರ ನಡೆಯುತ್ತಿದೆ. ದೊಡ್ಡ ಬಂಡವಾಳಶಾಹಿಗಳು ರೈತರ ರೊಟ್ಟಿ, ಅನ್ನವನ್ನು ತಮ್ಮ ತಿಜೋರಿಗಳಲ್ಲಿ ಬಂಧಿಸಿಡಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು, ಅದಕ್ಕಾಗಿ ರೈತ ಹೋರಾಟ ತೀವ್ರಗೊಳಿಸಬೇಕು” ಎಂದು ಕರೆ ನೀಡಿದ್ದರು.

“ಯುವಜನರನ್ನು ಭೂಮಿ ಜೊತೆ ಬೆಸೆಯುವ ಕೆಲಸ ಮಾಡಬೇಕು. ಅವರು ಮಣ್ಣನ್ನು ಮೈಗಂಟಿಸಿಕೊಳ್ಳಬೇಕು. ಅವರು ತಮ್ಮ ಭೂಮಿಯ ಮಣ್ಣನ್ನು ಕೈಲಿಡಿದು ರೈತ ಹೋರಾಟಕ್ಕೆ ಬರಬೇಕು. ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾತನಾಡಿದರೆ ಏನಾಗುತ್ತದೆ ಎಂದು ಸರ್ಕಾರ ಯೋಚಿಸಬೇಕು. ಯುವಜನರು ರೊಚ್ಚಿಗೇಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬೇರೆ ಸರ್ಕಾರವಾಗಿದ್ದರೆ ಎಚ್ಚೆತ್ತುಕೊಳ್ಳುತ್ತಿತ್ತು. ಆದರೆ ಈ ಸರ್ಕಾರವನ್ನು ಕಾರ್ಪೊರೇಟ್ ಕುಳಗಳೇ ನಡೆಸುತ್ತಿದ್ದಾರೆ. ಅದನ್ನು ಕಿತ್ತೊಗೆಯುವ ಕೆಲಸ ನಮ್ಮದು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...