ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಾ ಭೇಟಿಯ ವೇಳೆ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಛತ್ತೀಸ್‌ಗಢದ ಕೆಲವು ಭಾಗದಲ್ಲಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮೂರು ಪ್ರಕರಣಗಳಲ್ಲಿ ಎರಡು ಪ್ರಕರಣಗಳು ಗುರುವಾರ ದಾಖಲಾಗಿದ್ದು, ಅದರಲ್ಲಿ ಒಂದು ರಾಜಧಾನಿ ರಾಯ್‌ಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಂದು ಬಿಲಾಸ್‌ಪುರ ಜಿಲ್ಲೆಯ ಬಿಲಾಸ್‌ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶುಕ್ರವಾರ ಮತ್ತೊಂದು ಪ್ರಕರಣ ದಾಖಲಾಗಿದ್ದು ದುರ್ಗ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಿಜೆಪಿ ಮುಖಂಡರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಾಜ್ಯದ ಇತರ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿಯೂ ರಾಜ್ಯದ ಆಡಳಿತ ಪಕ್ಷದ ನಾಯಕರಿಂದ ಇದೇ ರೀತಿಯ ದೂರುಗಳನ್ನು ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಮಲಯಾಳಂ ಚಲನಚಿತ್ರೋದ್ಯಮಕ್ಕೆ ಮಾರ್ಗಸೂಚಿ ರಚಿಸುವಂತೆ ‘ವುಮೆನ್ಸ್ ಇನ್ ಸಿನಿಮಾ ಕಲೆಕ್ಟಿವ್’ ಆಗ್ರಹ
ಎಲ್ಲಾ ಪ್ರಕರಣಗಳಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299 (ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಉದ್ದೇಶದಿಂದ ಅಥವಾ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 302 (ಉದ್ದೇಶಪೂರ್ವಕವಾಗಿ ಪದಗಳು, ಶಬ್ದಗಳು, ಸನ್ನೆಗಳು ಅಥವಾ ವಸ್ತುಗಳಿಂದ ಇನ್ನೊಬ್ಬರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯ ಬಿಜೆಪಿ ವಕ್ತಾರ ಅಮರ್‌ಜೀತ್ ಸಿಂಗ್ ಛಾಬ್ರಾ, ರಾಯ್‌ಪುರದಲ್ಲಿ ಸಲ್ಲಿಸಿದ ದೂರಿನಲ್ಲಿ, ಸಿಖ್ಖರಿಗೆ ಪೇಟವನ್ನು ಧರಿಸಲು ಅಥವಾ ‘ಕಡಾ’ ಧರಿಸಲು ಮತ್ತು ಭಾರತದಲ್ಲಿ ಗುರುದ್ವಾರಕ್ಕೆ ಹೋಗಲು ಅನುಮತಿ ಇರುವ ಬಗ್ಗೆ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅವರ ಹೇಳಿಕೆಯು ಭಾರತದ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಛಾಬ್ರಾ ದೂರಿನಲ್ಲಿ ತಿಳಿಸಿದ್ದಾರೆ.
“ಇಡೀ ಪ್ರಪಂಚದಲ್ಲಿ ಮತ್ತು ಭಾರತದಲ್ಲಿಯೂ ಸಹ, ಸಿಖ್ ಸಮುದಾಯವು ಪೇಟ, ಕಡ ಧರಿಸುವುದನ್ನು ಮತ್ತು ಗುರುದ್ವಾರಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿಲ್ಲ. ಪ್ರಧಾನಿ ಕೂಡ ಪೇಟ ಧರಿಸಿ ಗುರುದ್ವಾರಕ್ಕೆ ಭೇಟಿ ನೀಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ದುರ್ಗ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಬಿಜೆಪಿಯ ದುರ್ಗ್ ಜಿಲ್ಲಾ ಘಟಕದ ಮುಖ್ಯಸ್ಥ ಜಿತೇಂದ್ರ ವರ್ಮಾ ದಾಖಲಿಸಿದ್ದಾರೆ. ದುರ್ಗ್, ಸುರ್ಗುಜಾ ಮತ್ತು ಇತರ ಕೆಲವು ಜಿಲ್ಲೆಗಳ ಇತರ ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ನಾಯಕರು ಇದೇ ವಿಷಯದ ಬಗ್ಗೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
“ಅವರ ಹೇಳಿಕೆಯು ಶಾಂತಿಪ್ರಿಯ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶವನ್ನು ಹೊಂದಿದೆ. ಇದು ಸಮಾಜದ ಇತರ ಧರ್ಮಗಳೊಂದಿಗೆ ತಾರತಮ್ಯ ಮತ್ತು ದ್ವೇಷವನ್ನು ಉಂಟುಮಾಡಬಹುದು” ಎಂದು ಅವರು ಪ್ರತಿಪಾದಿಸಿದ್ದಾರೆ.
ಸೆಪ್ಟೆಂಬರ್ 9 ರಂದು ವಾಷಿಂಗ್ಟನ್ ಡಿಸಿಯ ವರ್ಜೀನಿಯಾ ಉಪನಗರವಾದ ಹೆರ್ಂಡನ್‌ನಲ್ಲಿ ನೂರಾರು ಭಾರತೀಯ ಅಮೆರಿಕನ್ನರ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಗಾಂಧಿಯವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ವಿಡಿಯೊ ನೋಡಿ: ಬಾಲಗೋಪಾಲ್ ಅವರ ಬಹಳಷ್ಟು ಲೇಖನಗಳು ಕನ್ನಡಕ್ಕೆ ಬರುವ ಅಗತ್ಯವಿದೆ: ಬಂಜಗೆರೆ ಜಯಪ್ರಕಾಶ


