Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

- Advertisement -
- Advertisement -

ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ (ಅ.5) ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಎಸ್‌ಎಂಎಸ್‌ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದ್ದು, ರಾತ್ರಿ 11.20ರ ಸುಮಾರಿಗೆ ಬೆಂಕಿ ದುರಂತ ನಡೆದಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ರೋಗಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಐಸಿಯು ವಾರ್ಡ್‌ನ ಸ್ಟೋರ್‌ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಲ್ಲಿ ಕಾಗದಗಳು, ವೈದ್ಯಕೀಯ ಉಪಕರಣಗಳು ಮತ್ತು ರಕ್ತದ ಮಾದರಿ ಕೊಳವೆಗಳನ್ನು ಇರಿಸಲಾಗಿತ್ತು.

ಬೆಂಕಿ ಹತ್ತಿಕೊಂಡ ತಕ್ಷಣ ಸಂಪೂರ್ಣ ವಾರ್ಡ್‌ಗೆ ಆವರಿಸಿದೆ ಮತ್ತು ಹೊಗೆ ತುಂಬಿಕೊಂಡಿದೆ. ಹಾಗಾಗಿ, ಐಸಿಯುನಲ್ಲಿದ್ದ ರೋಗಿಗಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಒಟ್ಟು 18 ರೋಗಿಗಳು ಐಸಿಯು ಮತ್ತು ಸೆಮಿ-ಐಸಿಯುನಲ್ಲಿ ದಾಖಲಾಗಿದ್ದರು. ಅವರಲ್ಲಿ 11 ರೋಗಿಗಳು ಬೆಂಕಿ ಕಾಣಿಸಿಕೊಂಡ ವಾರ್ಡ್‌ನಲ್ಲೇ ಇದ್ದರು.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿತ್ತು. ಆದರೆ, ಬೆಂಕಿ ಮತ್ತು ವಿಷಕಾರಿ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕುಟುಂಬ ಸದಸ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಹಾಯದಿಂದ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಅನೇಕ ರೋಗಿಗಳನ್ನು ರಕ್ಷಿಸಲಾಯಿತು. ರೋಗಿಗಳನ್ನು ತಕ್ಷಣ ಬೀದಿಯಲ್ಲಿ ಹಾಸಿಗೆಗಳ ಮೇಲೆ ಇರಿಸಿ ಆಮ್ಲಜನಕ ಮತ್ತು ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ವರದಿಗಳು ವಿವರಿಸಿವೆ.

ಬೆಂಕಿ ಹತ್ತಿಕೊಂಡ ನಂತರ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಐಸಿಯುಗೆ ದಾಖಲಾಗಿದ್ದ ಗಂಭೀರ ರೋಗಿಗಳನ್ನು ಸ್ಥಳಾಂತರಿಸಲು ಸಿಬ್ಬಂದಿ ಹೆಣಗಾಡಿದರು. ಬೆಂಕಿ ನಿಯಂತ್ರಿಸಲು ಒಂದರಿಂದ ಒಂದೂವರೆ ಗಂಟೆ ಬೇಕಾಯಿತು. ಎಲ್ಲಾ ರೋಗಿಗಳನ್ನು ಅವರ ಹಾಸಿಗೆಗಳ ಜೊತೆಗೆ ಹೊರಗಿನ ಬೀದಿಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ಹೇಳಿವೆ.

“ಒಂದು ಐಸಿಯುನಲ್ಲಿ 11 ರೋಗಿಗಳಿದ್ದರು. ಅವರಲ್ಲಿ ಕೆಲವರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು. ಪಕ್ಕದ ಐಸಿಯುನಲ್ಲಿ 13 ರೋಗಿಗಳಿದ್ದರು. ಬೆಂಕಿ ಹರಡುತ್ತಿದ್ದಂತೆ ಆರು ರೋಗಿಗಳು ಒಳಗೆ ಸಿಲುಕಿಕೊಂಡರು” ಎಂದು
ಟ್ರಾಮಾ ಸೆಂಟರ್‌ನ ನೋಡಲ್ ಅಧಿಕಾರಿ ಡಾ. ಅನುರಾಗ್ ಧಕಾಡ್ ತಿಳಿಸಿದ್ದಾರೆ.

ಘಟನೆಯ ನಂತರ ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬೆಂಕಿ ಹತ್ತಿಕೊಂಡ ಆರಂಭಿಕ ನಿಮಿಷಗಳಲ್ಲಿ ಅಗ್ನಿಶಾಮಕ ಎಚ್ಚರಿಕೆ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಮತ್ತು ಆಮ್ಲಜನಕ ಮಾರ್ಗವನ್ನು ಸ್ಥಗಿತಗೊಳಿಸುವಲ್ಲಿ ವಿಳಂಬವಾಯಿತು ಎಂದು ಜನರು ಆರೋಪಿಸಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಅಗ್ನಿಶಾಮಕ ಸುರಕ್ಷತಾ ಸಾಧನಗಳ ಕೊರತೆಯಿತ್ತು, ಇದು ಬೆಂಕಿಯ ಹರಡುವಿಕೆಯನ್ನು ಮತ್ತಷ್ಟು ವೇಗಗೊಳಿಸಿತು ಎಂದಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಎಂಎಸ್ ಟ್ರಾಮಾ ಸೆಂಟರ್ ಹೊರಗೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಆರೋಪ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

“ಇದು ತುಂಬಾ ದುಃಖಕರ ಮತ್ತು ಆತಂಕಕಾರಿ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, ಜೈಪುರ ಕಲೆಕ್ಟರ್ ಜಿತೇಂದ್ರ ಸೋನಿ ಮತ್ತು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರಿಂದ ಘಟನೆಯ ಕುರಿತು ವಿವರವಾದ ವರದಿಯನ್ನು ಸಿಎಂ ಕೋರಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ದುರಂತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಮತ್ತು ಆಸ್ಪತ್ರೆಯ ಅಗ್ನಿಶಾಮಕ ಉಪಕರಣಗಳು ಮತ್ತು ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಸಮಿತಿ ತನಿಖೆ ಮಾಡಲಿದೆ.

ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...