Homeಮುಖಪುಟರಾಜ್ ಕೋಟ್ ಗೇಮ್ ಝೋನ್‌ನಲ್ಲಿ ಅಗ್ನಿ ಅವಘಡ; ಸತ್ತವರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ

ರಾಜ್ ಕೋಟ್ ಗೇಮ್ ಝೋನ್‌ನಲ್ಲಿ ಅಗ್ನಿ ಅವಘಡ; ಸತ್ತವರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ

- Advertisement -
- Advertisement -

ರಾಜ್‌ಕೋಟ್ ನಗರದ ಗೇಮ್ ಝೋನ್‌ನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 27 ಜನರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸದಸ್ಯರು, ಸ್ಥಳೀಯ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಅವರ ಗುರುತು ಪತ್ತೆಗಾಗಿ ಮೃತದೇಹ ಮತ್ತು ಬಲಿಪಶುಗಳ ಸಂಬಂಧಿಕರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಭಾನುವಾರ ಬೆಳಗ್ಗೆ ನಾನಾ-ಮಾವಾ ರಸ್ತೆಯಲ್ಲಿ ಘಟನಾ ಸ್ಥಳಕ್ಕೆ ಮತ್ತು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿದರು. ಗೇಮಿಂಗ್ ಝೋನ್ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಬೇಸಿಗೆ ರಜೆಯ ವಿಹಾರವನ್ನು ಆನಂದಿಸುತ್ತಿದ್ದ ಜನರಿದ್ದ ಆವರಣದಲ್ಲಿ ಭಾರೀ ಬೆಂಕಿ ಆವರಿಸಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ 12 ವರ್ಷದೊಳಗಿನ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸಿ 72 ಗಂಟೆಗಳಲ್ಲಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿದ್ದ ಐವರು ಸದಸ್ಯರ ಎಸ್‌ಐಟಿ ಶನಿವಾರ ತಡರಾತ್ರಿ ರಾಜ್‌ಕೋಟ್ ತಲುಪಿ ಸ್ಥಳೀಯ ಆಡಳಿತದೊಂದಿಗೆ ಸಭೆ ನಡೆಸಿತು. ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಕೂಡ ಶನಿವಾರ ತಡರಾತ್ರಿ ರಾಜ್‌ಕೋಟ್‌ಗೆ ಆಗಮಿಸಿ ಸಭೆಯಲ್ಲಿ ಭಾಗವಹಿಸಿದ್ದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸುಭಾಷ್ ತ್ರಿವೇದಿ ಅವರು ಶನಿವಾರ ರಾತ್ರಿ ಸಭೆಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ದುರದೃಷ್ಟಕರ ಮತ್ತು ದುಃಖಕರವಾಗಿದೆ. ಇದಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಖಚಿತಪಡಿಸಿಕೊಳ್ಳಲು ತಕ್ಷಣವೇ ವಿಚಾರಣೆಯನ್ನು ಪ್ರಾರಂಭಿಸಲಾಗುವುದು” ಎಂದು ಅವರು ಹೇಳಿದರು.

“ನಾವು ಘಟನೆಯ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತೇವೆ ಮತ್ತು ಅವುಗಳನ್ನು ಕೂಲಂಕಷವಾಗಿ ತನಿಖೆ ಮಾಡುತ್ತೇವೆ… ನಾವು ಬದ್ಧತೆ ಮತ್ತು ಸಂಪೂರ್ಣ ಪ್ರಾಮಾಣಿಕತೆ, ಸಮಗ್ರತೆಯಿಂದ ತಮ್ಮ ಪ್ರಾಣ ಕಳೆದುಕೊಂಡ ಮಕ್ಕಳಿಗೆ ನ್ಯಾಯ ಒದಗಿಸಲು ಕೆಲಸ ಮಾಡುತ್ತೇವೆ” ಎಂದು ತ್ರಿವೇದಿ ಹೇಳಿದರು.

ಘಟನಾ ಸ್ಥಳದಿಂದ 27 ಶವಗಳನ್ನು ಹೊರತೆಗೆದು ನಗರದ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಎಸಿಪಿ) ವಿನಾಯಕ್ ಪಟೇಲ್ ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

“ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಗುರುತಿಸಲು ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆಯನ್ನು ನಾವು ಪೂರ್ಣಗೊಳಿಸಿದ್ದೇವೆ. ಮೃತರ ಗುರುತನ್ನು ಸ್ಥಾಪಿಸಬಹುದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ; ದೆಹಲಿಯ ಮಕ್ಕಳ ಆಸ್ಪತ್ರೆ ಅಗ್ನಿ ದುರಂತದಲ್ಲಿ 7 ನವಜಾತ ಶಿಶುಗಳ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...