ಅಹಮದಾಬಾದ್ ಖಾಸಗಿ ಕೊರೊನಾ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಎಂಟು ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬಲಿಯಾದವರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.
ಅವರು ಅಹಮದಾಬಾದ್‌ನ ನವರಂಗಪುರ ಪ್ರದೇಶದ ಕೊರೊನಾಗಾಗಿ ಗೊತ್ತುಪಡಿಸಿದ ಶ್ರೇ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಗುರುವಾರ ಮುಂಜಾನೆ 3.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿದ್ದ ಸುಮಾರು 40 ಇತರ ಕೊರೊನಾ ರೋಗಿಗಳನ್ನು ರಕ್ಷಿಸಿ ನಗರದ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.
ಶ್ರೇ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ದಾಖಲಾದ ಎಂಟು ಕೊರೊನಾ ವೈರಸ್ ರೋಗಿಗಳು ಬೆಂಕಿಯಿಂದ ಸಾವನ್ನಪ್ಪಿದ್ದಾರೆ ಎಂದು ಅಹಮದಾಬಾದ್ ಅಗ್ನಿಶಾಮಕ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ ಎಂದರು.
ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!


