Homeಅಂತರಾಷ್ಟ್ರೀಯಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

- Advertisement -
- Advertisement -

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ “ಲೆ ಕಾನ್ಸ್ಟೆಲೇಷನ್” ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ ಡೆಕನ್ ಹೆರಾಲ್ಡ್ ವರದಿ ಮಾಡಿದೆ. 

ಸ್ವಿಸ್‌ನ ರೆಸಾರ್ಟ್ ಪಟ್ಟಣದಲ್ಲಿ ಹೊಸ ವರ್ಷದ ಮುನ್ನಾದಿನದ ಪಾರ್ಟಿಯಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 40 ಜನರು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ತಿಳಿಸಿದ್ದಾರೆ ಎಂದು ಇಟಾಲಿಯನ್ ವಿದೇಶಾಂಗ ಸಚಿವಾಲಯ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ. ಉದ್ದೇಶಪೂರ್ವಕವಾಗಿ ಇಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಬೇಕಿಲ್ಲ ಎಂದು ತಮ್ಮ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದೆ. 

ಸ್ವಿಟ್ಜರ್ಲೆಂಡ್‌ನ ಬಾರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ನಂತರ “100 ಕ್ಕೂ ಹೆಚ್ಚು” ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರು “ಗಂಭೀರವಾಗಿ ಗಾಯಗೊಂಡಿದ್ದಾರೆ” ಎಂದು ವಲೈಸ್ ಕ್ಯಾಂಟೋನಲ್ ಪೊಲೀಸ್ ಕಮಾಂಡರ್ ಫ್ರೆಡೆರಿಕ್ ಗಿಸ್ಲರ್ ಹೇಳಿರುವುದಾಗಿ ವರದಿಯಾಗಿದೆ.

ಸ್ಕೈ ನ್ಯೂಸ್ ಪ್ರಕಾರ, ನಿರ್ದಿಷ್ಟ ಅಂಕಿಅಂಶಗಳನ್ನು ಒದಗಿಸದೆ “ಹಲವಾರು ಡಜನ್” ಜನರು ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಕರ್ತರ ದೊಡ್ಡ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿ ಹಲವಾರು ಸಂತ್ರಸ್ತರಿಗೆ ಸಹಾಯ ಮಾಡಿತು” ಎಂದು ಅದು ವರದಿಯಲ್ಲಿ ಹೇಳಲಾಗಿದೆ. 

ಕಾರ್ಯಾಚರಣೆ ಮುಂದುವರೆದಿದ್ದು, ಸ್ವಿಸ್ ದಿನಪತ್ರಿಕೆ ಬ್ಲಿಕ್, ಘಟನಾ ಸ್ಥಳದಲ್ಲಿದ್ದ ವೈದ್ಯರನ್ನು ಉಲ್ಲೇಖಿಸಿ, ಸಾವಿನ ಸಂಖ್ಯೆ “ಡಜನ್‌ಗಟ್ಟಲೆ” ಇರಬಹುದು ಎಂದು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....