Homeಮುಖಪುಟಮುಂಬೈ; ಪ್ರತಿಷ್ಠಿತ ಹೊಟೇಲ್‌ನಲ್ಲಿ ಅಗ್ನಿ ದುರಂತ; ಮೂವರು ಸಾವು

ಮುಂಬೈ; ಪ್ರತಿಷ್ಠಿತ ಹೊಟೇಲ್‌ನಲ್ಲಿ ಅಗ್ನಿ ದುರಂತ; ಮೂವರು ಸಾವು

- Advertisement -
- Advertisement -

ಮುಂಬೈನ  ಪ್ರತಿಷ್ಠಿತ ಹೊಟೇಲ್‌ ಗ್ಯಾಲಕ್ಸಿಯಲ್ಲಿ ಭಾನುವಾರ  ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಹೋಟೆಲ್‌ನ ಎರಡನೇ ಮಹಡಿಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. 8 ಜನರನ್ನು ಹೋಟೆಲ್‌ನಿಂದ ರಕ್ಷಿಸಿ ಕೂಪರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಕಟ್ಟಡದೊಳಗೆ ಸಿಲುಕಿಕೊಂಡಿದ್ದವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಮತ್ತು ಹೆಚ್ಚಿನ ನೀರಿನ ಟ್ಯಾಂಕರ್‌ಗಳನ್ನು  ಹೊಟೇಲ್ ಗೆ ತರಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC)  ಘಟನೆಯನ್ನು ದೃಢಪಡಿಸಿದ್ದು, ಮೃತರನ್ನು  ರೂಪಲ್ (25), ಕಿಶನ್ (28) ಮತ್ತು ಕಾಂತಿಲಾಲ್ ಗೋರ್ಧನ್ (48) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಅಲ್ಫಾ ವಖಾರಿಯಾ (19) ಮತ್ತು ಮಂಜುಳಾ ವಖಾರಿಯಾ (49)  ಎಂದು ಗುರುತಿಸಲಾಗಿದೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಬೆಂಕಿಯನ್ನು  ನಂದಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...