Homeಮುಖಪುಟಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

- Advertisement -
- Advertisement -

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮುಂಜಾನೆ 3 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಆಸ್ಪತ್ರೆಗೆ ಭೇಟಿ ನೀಡಿ ಸಾವು ನೋವುಗಳ ಬಗ್ಗೆ ದೃಢಪಡಿಸಿದ್ದಾರೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಸಿಎಂ ಹೇಳಿಕೆ ಪ್ರಕಾರ, ಏಳು ರೋಗಿಗಳು ಐಸಿಯು ಒಳಗೆ ಸಾವನ್ನಪ್ಪಿದ್ದು, ಇತರ ಮೂವರು ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಇತರ ವಾರ್ಡ್‌ಗಳಿಗೆ ಸ್ಥಳಾಂತರಿಸುವಾಗ ಕೊನೆಯುಸಿರೆಳೆದಿದ್ದಾರೆ.

ಆಘಾತ ಆರೈಕೆ ತೀವ್ರ ನಿಗಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆವರಿಸಿಕೊಂಡಿರುವ ಶಂಕೆಯನ್ನು ಸಿಎಂ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಆಸ್ಪತ್ರೆ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಧಾವಿಸಿದ್ದರಿಂದ ಹಲವಾರು ರೋಗಿಗಳನ್ನು ರಕ್ಷಿಸಿ ಸುರಕ್ಷಿತ ವಾರ್ಡ್‌ಗಳಿಗೆ ಸ್ಥಳಾಂತರಿಸಲು ಸಾಧ್ಯವಾಗಿದೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 11 ಉದ್ಯೋಗಿಗಳಿಗೆ ಹೊಗೆ ಸೇವನೆ ಮತ್ತು ಇತರ ಕಾರಣಗಳಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಘಡದ ಕುರಿತು ನ್ಯಾಯಾಂಗ ತನಿಖೆಗೆ ಸಿಎಂ ಮಾಝಿ ಆದೇಶಿಸಿದ್ದಾರೆ. ಯಾರೇ ತಪ್ಪಿತಸ್ಥರಿದ್ದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. “ತನಿಖೆಯಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಮಾಝಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...