Homeಮುಖಪುಟಜಾರ್ಖಂಡ್‌ನ ಇಂಡಿಯನ್ ಆಯಿಲ್ ಡಿಪೋ ಬಳಿ ಬೆಂಕಿ ಅವಘಡ; ಹತ್ತಿರದ ಗ್ರಾಮ ಸ್ಥಳಾಂತರ

ಜಾರ್ಖಂಡ್‌ನ ಇಂಡಿಯನ್ ಆಯಿಲ್ ಡಿಪೋ ಬಳಿ ಬೆಂಕಿ ಅವಘಡ; ಹತ್ತಿರದ ಗ್ರಾಮ ಸ್ಥಳಾಂತರ

- Advertisement -
- Advertisement -

ಜಾರ್ಖಂಡ್‌ನ ದೇವ್‌ಘರ್‌ನಲ್ಲಿರುವ ಇಂಡಿಯನ್ ಆಯಿಲ್ ಟರ್ಮಿನಲ್ ಬಳಿ ಮಂಗಳವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಹತ್ತಿರದ ಹಳ್ಳಿಯ ಜನರನ್ನು ಸ್ಥಳಾಂತರಿಸಲಾಗಿದ್ದು, ಸ್ಥಳಕ್ಕೆ ಹತ್ತಿರದಲ್ಲಿರುವ ಜಸಿಧ್ ನಿಲ್ದಾಣದಲ್ಲಿ ಸರಕು ಮತ್ತು ಪ್ರಯಾಣಿಕ ರೈಲನ್ನು ಸ್ಥಳಾಂತರಿಸಲಾಗಿದೆ.

ದೇವ್‌ಘರ್‌ನ ಜಸಿದಿಹ್‌ನ ಬದಲಾದಿಹ್ ಗ್ರಾಮದ ಪೊದೆಗಳಲ್ಲಿ ಬೆಂಕಿ ಕಾಣಿಸಿಕೊಂಡು ದೊಡ್ಡ ಪ್ರದೇಶಕ್ಕೆ ಹರಡಿತು. ಜಸಿದಿಹ್ ಕೈಗಾರಿಕಾ ಪ್ರದೇಶದಲ್ಲಿ ಇಂಡಿಯನ್ ಆಯಿಲ್ ಟರ್ಮಿನಲ್ ಇದೆ, ಬೆಂಕಿ ಹೊತ್ತಿಕೊಂಡ ಸ್ಥಳಕ್ಕೆ ಸಮೀಪದಲ್ಲಿದೆ. ಇಂಡಿಯನ್ ಆಯಿಲ್ ಡಿಪೋ ಆವರಣಕ್ಕೂ ಬೆಂಕಿ ಹರಡಿದೆ. ಬೆಂಕಿ ಹೊತ್ತಿಕೊಂಡ ಸ್ಥಳದಿಂದ ಕೆಲವು ಗ್ಯಾಸ್ ಪೈಪ್‌ಗಳು ದೂರದಲ್ಲಿವೆ ಎಂದು ವರದಿಯಾಗಿದೆ.

ಸ್ಥಳದಲ್ಲಿ ಅಗ್ನಿಶಾಮಕ ಯಂತ್ರಗಳನ್ನು ನಿಯೋಜಿಸಲಾಗಿದೆ; ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಹ ಬೆಂಕಿ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಗ್ಯಾಸ್ ಪೈಪ್‌ಗಳನ್ನು ಬೆಂಕಿಯಿಂದ ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತೈಲ ಡಿಪೋ ಬಳಿ ಇರುವ ಸಂತಾಲ್ದಿಹ್ ಗ್ರಾಮದ ಜನರನ್ನು ಸ್ಥಳಾಂತರಿಸಲು ತಿಳಿಸಲಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕೈಗಾರಿಕಾ ಪ್ರದೇಶದಲ್ಲಿ ಪೆಟ್ರೋಲಿಯಂ ಸಂಗ್ರಹ ಮತ್ತು ವಿತರಣಾ ಕೇಂದ್ರವನ್ನು ಹೊಂದಿದೆ. ಜಾರ್ಖಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿತರಣೆಗಾಗಿ ಪೆಟ್ರೋಲ್, ಡೀಸೆಲ್ ಮತ್ತು ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತದೆ.

ಇಂಡಿಯನ್ ಆಯಿಲ್‌ನ ಸಂಗ್ರಹಣಾಗಾರದ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಡಿಪೋ ಕಡೆಗೆ ದಟ್ಟವಾದ ಕಪ್ಪು ಹೊಗೆ ಆವರಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ, ಹತ್ತಿರದ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳು ಹಾಜರಿದ್ದು, ಅನಾಹುತವನ್ನು ತಪ್ಪಿಸಲು ಜನರನ್ನು ಬೇಗನೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದಾರೆ. ಗ್ರಾಮಸ್ಥರು ಹಲವಾರು ಅಗ್ನಿಶಾಮಕ ಸಾಧನಗಳೊಂದಿಗೆ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಉತ್ತರ ಪ್ರದೇಶ| 40 ವರ್ಷಗಳ ಹಿಂದೆ 24 ದಲಿತರನ್ನು ಕೊಂದಿದ್ದ ಮೂವರಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...