Homeಮುಖಪುಟಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಬೆಂಕಿ - ನಸುಕಿನಲ್ಲೇ 10 ನವಜಾತ ಶಿಶುಗಳು ಸಾವು

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಬೆಂಕಿ – ನಸುಕಿನಲ್ಲೇ 10 ನವಜಾತ ಶಿಶುಗಳು ಸಾವು

- Advertisement -
- Advertisement -

ಇಂದು (ಜ.9) ನಸುಕಿನಲ್ಲಿ ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಿಗ್ಗೆ 2 ಗಂಟೆ ಸುಮಾರಿಗೆ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ವಾರ್ಡ್‌ ಅನ್ನು ವ್ಯಾಪಿಸಿತು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಸುಮಾರು 10 ಮಕ್ಕಳು ಸಾವನ್ನಪ್ಪಿದ್ದು, 7 ಮಕ್ಕಳನ್ನು ರಕ್ಷಿಸಲಾಗಿದೆ.

“ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಈ ಕುರಿತು ತನಿಖೆ ನಡೆಸಲಾಗುವುದು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

ಈ ಕುರಿತು ಎಎನ್‌ಐ ವರದಿ‌ ಮಾಡಿದ್ದು, “ಇಂದು ಬೆಳಿಗ್ಗೆ 2 ಗಂಟೆಗೆ ಭಂಡಾರ ಜಿಲ್ಲಾ ಆಸ್ಪತ್ರೆಯ ಸಿಕ್ ನವಜಾತ ಆರೈಕೆ ಘಟಕದಲ್ಲಿ (ಎಸ್‌ಎನ್‌ಸಿಯು) ಸಂಭವಿಸಿದ ಬೆಂಕಿಯಲ್ಲಿ ಹತ್ತು ಮಕ್ಕಳು ಮೃತಪಟ್ಟಿದ್ದಾರೆ. ಏಳು ಮಕ್ಕಳನ್ನು ಘಟಕದಿಂದ ರಕ್ಷಿಸಲಾಗಿದೆ ಎಂದು ಸಿವಿಲ್ ಸರ್ಜನ್ ಪ್ರಮೋದ್ ಖಂಡಟೆ ಹೇಳಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಒಂದೋ ಗೆಲ್ಲುತ್ತೇವೆ ಇಲ್ಲ ಸಾಯುತ್ತೇವೆ: ರೈತರ ತೀರ್ಮಾನ

ಈ ಘಟನೆಯ ಕುರಿತು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು, “ಮಹಾರಾಷ್ಟ್ರದ ಭಂಡಾರಾದಲ್ಲಿ ನಾವು ಅಮೂಲ್ಯವಾದ ಎಳೆ ಜೀವಗಳನ್ನು ಕಳೆದುಕೊಂಡಿದ್ದೇವೆ. ಎಲ್ಲಾ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹಲವು ನಾಯಕರು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ಶೇ. 7.7 ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ಅಂದಾಜು: ತೀವ್ರವಾಗಿ ಕುಸಿಯಲಿರುವ 2020-21ರ ಆರ್ಥಿಕತೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...