Homeಮುಖಪುಟನೇಪಾಳ ಪೊಲೀಸರ ಗುಂಡಿನ ದಾಳಿ; ಬಿಹಾರ ಗಡಿಯಲ್ಲಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

ನೇಪಾಳ ಪೊಲೀಸರ ಗುಂಡಿನ ದಾಳಿ; ಬಿಹಾರ ಗಡಿಯಲ್ಲಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

- Advertisement -
- Advertisement -

ಭಾರತ – ನೇಪಾಳ ಗಡಿಭಾಗವಾದ ಬಿಹಾರ ರಾಜ್ಯದ ಸೀತಾಮರ್ಹಿ ಜಿಲ್ಲೆಯಲ್ಲಿ ನೇಪಾಳ ಪೊಲೀಸರು ನಡೆಸಿರುವ ಗುಂಡಿನ ದಾಳಿಗೆ ಓರ್ವ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ ರಾಜ್ಯದ ಸೀತಾಮರ್ಹಿ ಜಿಲ್ಲೆಯ ಸೋನೆಬರ್ಶ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾ ಪಾರ್ಸೇನ್ ಪಂಚಾಯಿತಿಯ ಲಾಲ್‌ಬಂದಿ-ಜಾಂಕಿ ನಗರ ಗಡಿಯಲ್ಲಿ ಭಾರತೀಯರು ಮತ್ತು ನೇಪಾಳ ಪೊಲೀಸರ ನಡುವೆ ಘರ್ಷಣೆ ನಡೆದ ನಂತರ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯರು ಮತ್ತು ನೇಪಾಳದ ಸಶಸ್ತ್ರ ಪೊಲೀಸ್ ಪಡೆ (ಎಪಿಎಫ್) ನಡುವೆ ಈ ಚಕಮಕಿ ನಡೆದಿದೆ ಎಂದು ಪಾಟ್ನಾ ಗಡಿನಾಡಿನ ಸಶಸ್ತ್ರ ಪಡೆಯ ಇನ್ಸ್‌ಪೆಕ್ಟರ್ ಜನರಲ್ ಸಂಜಯ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ವಿಕೇಶ್ ಕುಮಾರ್ ರಾಯ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಮೇಶ್ ರಾಮ್ ಮತ್ತು ಉದಯ್ ಠಾಕೂರ್ ಅವರು ಕೃಷಿ ಕೆಲಸ ಮಾಡುತ್ತಿದ್ದಾಗ ಗುಂಡು ತಗುಲಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇನ್ನೊಬ್ಬ ವ್ಯಕ್ತಿ ಲಗಾನ್ ರೈ ಅವರನ್ನು ನೇಪಾಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೀತಾಮರ್ಹಿ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಗಡಿ ದಾಟಲು ಯತ್ನಿಸುತ್ತಿರುವ ಡಜನ್‌ಗಟ್ಟಲೆ ಭಾರತೀಯರನ್ನು ಚದುರಿಸಲು ಮೇ 17 ರಂದು ನೇಪಾಳ ಪೊಲೀಸರು ಗಸ್ತು ಸುತ್ತುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಸೀತಮಾರ್ಹಿ ಪೊಲೀಸ್ ವರಿಷ್ಠಾಧಿಕಾರಿ ಧಾವಿಸಿದ್ದಾರೆ.

ನೇಪಾಳವು ಭಾರತದೊಂದಿಗೆ 1,850 ಕಿಲೋಮೀಟರ್ (1,150 ಮೈಲಿ) ಮುಕ್ತ ಗಡಿಯನ್ನು ಹಂಚಿಕೊಂಡಿದೆ ಮತ್ತು ಜನರು ಕೆಲಸಕ್ಕಾಗಿ ಮತ್ತು ಕುಟುಂಬವನ್ನು ಭೇಟಿ ಮಾಡಲು ಗಡಿಯಾದ್ಯಂತ ಪ್ರಯಾಣಿಸುತ್ತಾರೆ. ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ನೇಪಾಳವು ಮಾರ್ಚ್ 22 ರಂದು ತನ್ನ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಿತ್ತು.

ಅಂತರರಾಷ್ಟ್ರೀಯ ಗಡಿಯ ಸಮೀಪವಿರುವ ಪ್ರದೇಶವನ್ನು ಪ್ರವೇಶಿಸುವ ಸೀತಾಮಾರ್ಹಿ ಜಿಲ್ಲೆಯ ಸ್ಥಳೀಯರು ಮತ್ತು ನೇಪಾಳದ ಎಪಿಎಫ್ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ಶುರುವಾಗಿದೆ. ನಂತರ ಇದು ದೊಡ್ಡ ಗಲಾಟೆಯಾಗಿ ಬದಲಾಗಿದೆ. ಹೀಗಾಗಿ ನೇಪಾಳದ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಭಾರತೀಯ ವ್ಯಕ್ತಿ ಸಾವನ್ನಪ್ಪಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಈ ವಿಚಾರ ಪಾಟ್ನಾ ಗಡಿನಾಡಿನ ಸೀಮಾ ಪಡೆ ಭಾಗಿಯಾಗಿಲ್ಲ ಎಂದು ಬಿಹಾರದ ಐಜಿ ತಿಳಿಸಿದ್ದಾರೆ.

ಘಟನೆಯ ಬಳಿಕ ಸ್ಥಳೀಯ ಪೊಲೀಸರು ಮತ್ತು ಎಸ್‌ಎಸ್‌ಬಿಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...