Homeಮುಖಪುಟಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

- Advertisement -
- Advertisement -

ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದು, 38 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ, ಪಾಕಿಸ್ತಾನದ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ನಾಗರಿಕ ಮೇಲೆ ದಾಳಿ ಮಾಡಿವೆ.

ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“2025ರ ಮೇ 6-7ರ ರಾತ್ರಿ, ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆಯಾದ್ಯಂತ ಮತ್ತು ಜಮ್ಮು ಮತ್ತು ಕಾಶ್ಮೀರದ ಐಬಿ ಪೋಸ್ಟ್‌ಗಳಿಂದ ಫಿರಂಗಿ ಶೆಲ್ ಸೇರಿದಂತೆ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದೆ” ಎಂದು ಭಾರತೀಯ ಸೇನೆ ತಿಳಿಸಿದೆ.

“ಅನಿಯಂತ್ರಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ ಮೂವರು ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.

ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ವಾಯು ದಾಳಿ ನಡೆಸಿದೆ. ಭಯೋತ್ಪಾದಕ ತಾಣಗಳ ಮೇಲಿನ ಈ ನಿಖರವಾದ ದಾಳಿಗೆ ‘ಕ್ಷಿಪಣಿ’ಗಳನ್ನು ಬಳಸಲಾಗಿದೆ ಎಂದು ಸೇನೆ ಹೇಳಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್ಪುರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಕೇಂದ್ರ ಮತ್ತು ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮುರಿಡ್ಕೆ ಸೇರಿದಂತೆ ಆರು ಸ್ಥಳಗಳನ್ನು ಗುರಿಯಾಗಿರಿಸಿ ಭಾರತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.

ಭಾರತವು ಪಾಕ್ ಮೇಲೆ ದಾಳಿ ಮಾಡಿದರೆ, ಚೀನಾದೊಂದಿಗೆ ಸೇರಿ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳುತ್ತೇವೆ: ಬಾಂಗ್ಲಾದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...