Homeಕರೋನಾ ತಲ್ಲಣಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ

ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ

- Advertisement -
- Advertisement -

ದೇಶದಾದ್ಯಂತ ಸಾಂಕ್ರಮಿಕ ಹರಡಿ ಸುಮಾರು ಒಂದು ವರ್ಷಗಳ ನಂತರ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಪ್ರಕರಣ ಸೋಮವಾರ ವರದಿಯಾಗಿದೆ.

ಇಂಡಿಯಾ ರಿಸರ್ವ್ ಬೆಟಾಲಿಯನ್‌ಗೆ ಸೇರಿದ ವ್ಯಕ್ತಿಯೊಬ್ಬರು ಜನವರಿ 3 ರಂದು ಕೊಚ್ಚಿಯಿಂದ ಹಡಗಿನಲ್ಲಿ ಲಕ್ಷದ್ವೀಪದ ಕವರಟ್ಟಿಗೆ ತೆರಳಿದ್ದರು. ಅವರು ಸೋಮವಾರ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ. ಆದರೆ ಪಾಸಿಟಿವ್ ಆಗಿರುವ ವ್ಯಕ್ತಿಯು ಲಕ್ಷದ್ವೀಪದ ನಿವಾಸಿ ಅಲ್ಲ ಎಂದು ತಿಳಿದು ಬಂದಿದೆ.

ಲಕ್ಷದ್ವೀಪ
PC: Gozo Cabs

ಇದನ್ನೂ ಓದಿ: ಲಕ್ಷದ್ವೀಪ: ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಕೊಚ್ಚಿಯಿಂದ ಆಗಮಿಸುವವರಿಗೆ ಕಡ್ಡಾಯವಾದ ಸಂಪರ್ಕತಡೆಯನ್ನು ಇಲ್ಲವಾಗಿಸುವ ಮೂಲಕ ಲಕ್ಷದ್ವೀಪ ಆಡಳಿತವು ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಪರಿಷ್ಕರಿಸಿದ ಎರಡೇ ವಾರಗಳಲ್ಲಿ ಈ ಪ್ರಕರಣ ವರದಿಯಾಗಿದೆ. ಲಕ್ಷದ್ವೀಪದಲ್ಲಿ ಇಲ್ಲಿಯವರೆಗೆ ಒಂದೇ ಕೊರೊನಾ ಪ್ರಕರಣ ವರದಿಯಾಗಿರಲಿಲ್ಲ.

ಪ್ರಸ್ತುತ ಪಾಸಿಟಿವ್ ಆಗಿರುವ ವ್ಯಕ್ತಿಯಿಂದ ವೈರಸ್ ಹರಡುವುದನ್ನು ತಡೆಗಟ್ಟಲು ಲಕ್ಷದ್ವೀಪ ಆಡಳಿತವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಾಸಿಟಿವ್‌ ಆಗಿರುವ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಸಂಪರ್ಕತಡೆ ಮುಂದುವರಿಸಲು ನಿರ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.

ಮೊದಲ ಕೊರೊನಾ ಪಾಸಿಟಿವ್ ವರದಿಯಾಗುತ್ತಿದ್ದಂತೆ ಮಂಗಳವಾರದಿಂದ ಹಡಗುಗಳು ಸೇರಿದಂತೆ ಲಕ್ಷದ್ವೀಪ ಸಮುಚ್ಚಯದ ಎಲ್ಲಾ ಅಂತರ ದ್ವೀಪಗಳ ಚಲನೆಯನ್ನು ಆಡಳಿತವು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...