Homeಮುಖಪುಟಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧು ಕೊರೊನಾಗೆ ಬಲಿ, 80 ಸಾಧುಗಳಿಗೆ ಸೋಂಕು ದೃಢ

ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧು ಕೊರೊನಾಗೆ ಬಲಿ, 80 ಸಾಧುಗಳಿಗೆ ಸೋಂಕು ದೃಢ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧುವೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇತರ 80 ಮಂದಿ ಸಾಧುಗಳಿಗೆ ಕೊರೊನಾ ದೃಢಪಟ್ಟಿದೆ. ಲಕ್ಷಾಂತರ ಮಂದಿ ಸೇರುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ನಂತರ ಕೊರೊನಾ ಸೋಂಕು ಹರಡಿದೆ.

ಲಕ್ಷಾಂತರ ಯಾತ್ರಾರ್ಥಿಗಳು ಭಾಗವಹಿಸುತ್ತಿರುವ ಕುಂಭಮೇಳದಲ್ಲಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಮಾಸ್ಕ್, ದೈಹಿಕ ಅಂತರ ಕಣ್ಮರೆಯಾಗಿವೆ. ಈಗಾಗಲೇ 3 ಸಾವಿರದಷ್ಟು ಪ್ರಕರಣಗಳು ವರದಿಯಾಗುತ್ತಿವೆ.

ಕಳೆದ 24 ಗಂಟೆಗಳಲ್ಲಿ ಭಾರತವು 2,17,000 ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದೆ. ಉತ್ತರಾಖಂಡದ ಹರಿದ್ವಾರದ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು ಒಂದು ಸಾವು ಮತ್ತು 80 ಮಂದಿ ಸಾಧುಗಳಿಗೆ ಕೊರೊನಾ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ಕುಂಭಮೇಳ ಉತ್ಸವದ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಕೆಯನ್ನು ನೀಡುತ್ತಲೇ ಇದ್ದಾರೆ. ಕುಂಭಮೇಳಕ್ಕೆ ದೇಶಾದ್ಯಂತದ ಯಾತ್ರಾರ್ಥಿಗಳು ಬಂದು ತಮ್ಮ ರಾಜ್ಯಗಳಿಗೆ ​​ಮತ್ತು ಹಳ್ಳಿಗಳಿಗೆ ಮರಳುತ್ತಿರುವುದರಿಂದ ಇದು “ಸೂಪರ್-ಸ್ಪ್ರೆಡರ್” ಆಗಿ ಬದಲಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಹಿಂದೂ ಅಖಾರ ಮಂಡಳಿಗಳ ಮುಖ್ಯಸ್ಥ ಮಹಾಮಂಡಲೇಶ್ವರ ಕಪಿಲ್ ದೇವ್ ದಾಸ್ (65) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುರುವಾರ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಮತ್ತು ಕೊರೊನಾ ವೈರಸ್ ತಡೆಗಟ್ಟುವ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಜನರನ್ನು ಒತ್ತಾಯಿಸುತ್ತಿದ್ದೇವೆ. 600 ಹೆಕ್ಟೇರ್ (1,500 ಎಕರೆ) ಸ್ಥಳದಲ್ಲಿ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಿದ್ದೇವೆ. ಕೊರೊನಾ ನೆಗೆಟಿವ್ ಪ್ರಮಾಣಪತ್ರಗಳು ಸೇರಿದಂತೆ ಸರ್ಕಾರದ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಡುವೆ ಉತ್ತರಪ್ರದೇಶದ ಬಿಜೆಪಿ ನಾಯಕ ಸುನಿಲ್ ಭಾರಲಾ ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದು ಹೇಳಿಕೆ ನೀಡಿದ್ದಾರೆ.

ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಿರುವ ಜನಸಮೂಹ ಮತ್ತು ಬೃಹತ್ ಧಾರ್ಮಿಕ ಸಭೆಯನ್ನು ಸಮರ್ಥಿಸಿಕೊಂಡ ಯುಪಿ ಬಿಜೆಪಿ ನಾಯಕ ಸುನಿಲ್ ಭಾರಲಾ, ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, “ಕುಂಭ ಕಿ ಆಸ್ತಾ ಕೊರೊನಾ ವೈರಸ್ ಸೇ ಬಹುತ್ ಬಡಿ ಹೈ” (ಕುಂಭಮೇಳದದ ನಂಬಿಕೆ ಕೊರೊನಾ ವೈರಸ್‌ಗಿಂತ ತುಂಬಾ ದೊಡ್ಡದು) ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದ ಬಿಜೆಪಿ ನಾಯಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರೆಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರೆಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರೆಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...