Homeಮುಖಪುಟತೆಲಂಗಾಣ: ಮೊದಲ ದಿನವೇ 6 ಗ್ಯಾರಂಟಿಗಳಿಗೆ ಅಂಕಿತ ಹಾಕಿದ ರೇವಂತ್ ರೆಡ್ಡಿ, ವಿಶೇಷ ಚೇತನ ಮಹಿಳೆಗೆ...

ತೆಲಂಗಾಣ: ಮೊದಲ ದಿನವೇ 6 ಗ್ಯಾರಂಟಿಗಳಿಗೆ ಅಂಕಿತ ಹಾಕಿದ ರೇವಂತ್ ರೆಡ್ಡಿ, ವಿಶೇಷ ಚೇತನ ಮಹಿಳೆಗೆ ಉದ್ಯೋಗ

- Advertisement -
- Advertisement -

ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರೇವಂತ್ ರೆಡ್ಡಿ ಎರಡು ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ಒಂದು ಚುನಾವಣಾ ಪೂರ್ವ ಘೋಷಿಸಿದ್ದ ಆರು ಗ್ಯಾರಂಟಿಗಳ ಅನುಷ್ಠಾನ ಖಡತ, ಮತ್ತೊಂದು ವಿಶೇಷ ಚೇತನ ಮಹಿಳೆಯೊಬ್ಬರಿಗೆ ಉದ್ಯೋಗ ಒದಗಿಸುವುದು ಎಂದು ವರದಿಗಳು ಹೇಳಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ಮೊದಲ ದಿನವೇ ಆರು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಚುನಾವಣಾ ಪ್ರಚಾರದ ವೇಳೆ ರೇವಂತ್ ರೆಡ್ಡಿ ಘೋಷಣೆ ಮಾಡಿದ್ದರು. ಅಲ್ಲದೆ, ವಾರ್ಷಿಕ ಉದ್ಯೋಗ ಕ್ಯಾಲೆಂಡರ್ ಪರಿಚಯಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ 6 ಗ್ಯಾರಂಟಿಗಳ ಜಾರಿ ಪ್ರಕ್ರಿಯೆಗೆ ಮೊದಲ ದಿನವೇ ಚಾಲನೆ ನೀಡಿದ್ದಾರೆ.

ವಿಶೇಷ ಚೇತನ ಮಹಿಳೆಗೆ ಉದ್ಯೋಗ :

ವಿಶೇಷ ಚೇತನ ಮಹಿಳೆ ರಜನಿ ಕಳೆದ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನ ಗಾಂಧಿ ಭವನದಲ್ಲಿ ರೇವಂತ್ ರೆಡ್ಡಿಯವರನ್ನು ಭೇಟಿಯಾಗಿದ್ದರು. ಎಂಕಾಂ ಪದವಿ ಮುಗಿಸಿದ್ದರೂ ಖಾಸಗಿ ಅಥವಾ ಸರ್ಕಾರಿ ವಲಯದಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಸಂಕಷ್ಟವನ್ನು ವಿವರಿಸಿದ್ದರು. ರಜನಿ ಅವರ ಕಷ್ಟ ಆಲಿಸಿದ್ದ ರೇವಂತ್ ರೆಡ್ಡಿ ಅವರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಿದ್ದರು. ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ದಿನವೇ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ರಜನಿ ಅವರಿಗೆ ರೇವಂತ್ ರೆಡ್ಡಿ ಕೆಲಸ ಕೊಟ್ಟಿದ್ದಾರೆ.

ತನ್ನ ಪ್ರಮಾಣ ವಚನ ಸಮಾರಂಭಕ್ಕೆ ಬರುವಂತೆ ರಜನಿ ಅವರಿಗೆ ರೇವಂತ್ ರೆಡ್ಡಿ ಆಹ್ವಾನ ನೀಡಿದ್ದರು. ಗುರುವಾರ ಪ್ರಮಾಣ ವಚನ ಸ್ವೀಕಾರದ ನಂತರ ರಜನಿ ಅವರನ್ನು ವೇದಿಕೆಗೆ ಆಹ್ವಾನಿಸಲಾಯಿತು. ಅಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ನೇಮಕಾತಿ ಪತ್ರದೊಂದಿಗೆ ಸಿದ್ಧರಾಗಿದ್ದರು. ಸಾವಿರಾರು ಜನರ ಮುಂದೆ ರೇವಂತ್ ರೆಡ್ಡಿ ವೇದಿಕೆಯಲ್ಲೇ ರಜನಿ ಅವರಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದರು.

ಆರು ಗ್ಯಾರಂಟಿ ನೀಡಿದ ಕಾಂಗ್ರೆಸ್ :

ಕರ್ನಾಟಕದಲ್ಲಿ ಐದು ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್, ತೆಲಂಗಾಣದಲ್ಲಿ ಅರು ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಿಸಿತ್ತು. ಅವುಗಳು ಹೀಗಿವೆ..

1.ಮಹಾಲಕ್ಷ್ಮಿ: ಪ್ರತಿ ತಿಂಗಳು ಮನೆಯ ಯಜಮಾನಿಗೆ ₹2,500, ರೂ. ₹500ಕ್ಕೆ ಗ್ಯಾಸ್ ಸಿಲಿಂಡರ್, ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

2.ರೈತ ಭರೋಸಾ: ಪ್ರತಿ ವರ್ಷ ರೈತರಿಗೆ, ಗೇಣಿದಾರ ರೈತರಿಗೆ ಎಕರೆಗೆ ₹15,000, ಕೃಷಿ ಕಾರ್ಮಿಕರಿಗೆ ವರ್ಷಕ್ಕೆ ₹12,000,ಭತ್ತದ ಬೆಳೆಗೆ ವರ್ಷಕ್ಕೆ ₹500 ಬೋನಸ್

3.ಗೃಹ ಜ್ಯೋತಿ: ಈ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್

4. ಇಂದಿರಮ್ಮ ಇಂಡ್ಲು: ಎಲ್ಲಾ ತೆಲಂಗಾಣ ಚಳುವಳಿ ಹೋರಾಟಗಾರರಿಗೆ ವಸತಿ, ಸ್ವಂತ ಮನೆ ಇಲ್ಲದವರಿಗೆ ಮನೆ, ನಿವೇಶನ ಮತ್ತು ಬಡವರಿಗೆ ಮನೆ ನಿರ್ಮಾಣಕ್ಕೆ ₹5 ಲಕ್ಷ

5. ಯುವ ವಿಕಾಸಂ: ವಿದ್ಯಾರ್ಥಿಗಳಿಗೆ ₹5 ಲಕ್ಷ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್, ಪ್ರತಿ ಮಂಡಲದಲ್ಲಿ ತೆಲಂಗಾಣ ಅಂತಾರಾಷ್ಟ್ರೀಯ ಶಾಲೆಗಳನ್ನು ಸ್ಥಾಪಿಸುವುದು

6. ಚೇಯುತ: ಹಿರಿಯ ನಾಗರಿಕರಿಗೆ ₹4,000 ಮಾಸಿಕ ಪಿಂಚಣಿ, ರಾಜೀವ್ ಆರೋಗ್ಯಶ್ರೀ ವಿಮೆಯಡಿ ₹10 ಲಕ್ಷದ ವಿಮೆ

ಈ ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಸಿಎಂ ರೇವಂತ್ ರೆಡ್ಡಿ ಭರವಸೆ ನೀಡಿದ್ದಾರೆ.

ಪ್ರಗತಿ ಭವನದ ಬೇಲಿ ತೆರವು, ಹೆಸರು ಬದಲು

ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಹೈದರಾಬಾದ್‌ನ ‘ಪ್ರಗತಿ ಭವನದ (ತೆಲಂಗಾಣ ಮುಖ್ಯಮಂತ್ರಿಯ ಸರ್ಕಾರಿ ನಿವಾಸ) ಸುತ್ತ ಇರುವ ಕಬ್ಬಿಣದ ಬೇಲಿಯನ್ನು ತೆರವುಗೊಳಿಸಲಾಗಿದೆ. ರಾಜ್ಯದ ಏಳಿಗೆಯಲ್ಲಿ ಭಾಗಿಯಾಗಲು ಬಯಸುವ ಎಲ್ಲರನ್ನೂ ಅಲ್ಲಿ ಬರಮಾಡಿಕೊಳ್ಳಲಾಗುವುದು’ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಪ್ರಗತಿ ಭವನವನ್ನು ‘ಜ್ಯೋತಿರಾವ್ ಫುಲೆ ಪ್ರಜಾ ಭವನ’ ಎಂದು ಮರುನಾಮಕರಣ ಮಾಡಿರುವ ರೇವಂತ್ ರೆಡ್ಡಿ, ‘ಪ್ರತಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅಲ್ಲಿ ಪ್ರಜಾ ದರ್ಬಾರ್‌ ನಡೆಸಲಾಗುವುದು. ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಾಗುವುದು’ಎಂದು ಘೋಷಣೆ ಮಾಡಿದ್ದಾರೆ.

ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ನಿನ್ನೆ (ಡಿ.7) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ (ಎಲ್‌ಬಿ) ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು.

ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಇನ್ನುಳಿದಂತೆ ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ದಾಮೋದರ್ ರಾಜನರಸಿಂಹ, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾನ ಅನಸೂಯ, ತುಮ್ಮಲ ನಾಗೇಶ್ವರ್ ರಾವ್, ಕೊಂಡ ಸುರೇಖಾ ಮತ್ತು ಜೂಪಲ್ಲಿ ಕೃಷ್ಣ ರಾವ್ ಸಂಪುಟ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good that Poor ppl are getting benefits and these scheme will make poor ppl still more poor and lasy in future and due to these free bees sure govt need to raise prices in all sectors to get fund for the same which effect poor as well as tax payers

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...