Homeಕರ್ನಾಟಕನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆಯುತ್ತಿದೆ. ಮತ್ತೊಂದೆಡೆ ನಾಳೆ (ಸೋಮವಾರ) 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭವಾಗುತ್ತಿದೆ. ಆದರೂ ಈ ವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿಲ್ಲ. ಸಮರ್ಥ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲದಲ್ಲಿದೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಇಂದು (ಭಾನುವಾರ, ಜು.2) ಮಧ್ಯಾಹ್ನದ ಬಳಿಕ ಬಿಜೆಪಿ ನಾಯಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಬಸವರಾಜ ಬೊಮ್ಮಾಯಿ ಅವರನ್ನು ನಾಯಕರಾಗಿ ಆಯ್ಕೆ ಮಾಡುವ ಸಂಭವ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಮೇಲೆ ಒಲವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಭಲ ಪೈಪೋಟಿ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಈ ಬಗ್ಗೆ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿದ್ದು. ”ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ಹಾಗಾಗಿ, ಭಾನುವಾರ ಸಭೆ ನಡೆಯುವುದು ಅನುಮಾನ. ಸೋಮವಾರ ಬೆಳಿಗ್ಗೆ ಕಲಾಪ ಆರಂಭವಾಗುವುದಕ್ಕೆ ಮುನ್ನ, ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ” ಎಂದು ಹೇಳಿದರು.

ಪಕ್ಷದ ರಾಷ್ಟ್ರೀ ಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ವರಿಷ್ಠರು ಸಂದೇಶ ಕಳುಹಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ಗಂಟೆಗೆ ಅವರು ದೆಹಲಿ ತಲುಪಲಿದ್ದಾರೆ. ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ, ನಾಯಕನ ಆಯ್ಕೆಯ ಸೂತ್ರ ಹೊರಬೀಳಲಿದೆ. ಅದಾದ ಬಳಿಕ, ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರು ದೆಹಲಿ ನಾಯಕರ ಭೇಟಿ ವೇಳೆ, ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದಿಂದ ಯಾರನ್ನು ಕೈಬಿಟ್ಟು, ಮತ್ತೆ ಯಾರನ್ನು ಸೇರ್ಪಡೆ ಮಾಡಬೇಕು ಎಂಬ ವಿಷಯದ ಕುರಿತು ವರಿಷ್ಠರು ಯಡಿಯೂರಪ್ಪನವರ ಜತೆ ಚರ್ಚೆ ನಡೆಸಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ ಯತ್ನಾಳ ತೀವ್ರಯತ್ನ ನಡೆಸಿದ್ದಾರೆ. ಆದರೆ ತಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸಿಕೊಂಡು ಬಂದು, ಸರ್ಕಾರದ ವರ್ಚಸ್ಸು ಕೆಡಲು ಯತ್ನಾಳ ಕಾರಣ ಎಂದು ವಾದಿಸುತ್ತಿರುವ ಯಡಿಯೂರಪ್ಪ ಅವರು, ಯತ್ನಾಳ ಆಯ್ಕೆಗೆ ಸುತರಾಂ ಒಪ್ಪುವುದಿಲ್ಲ. ಹೀಗಾಗಿ, ಬಸವರಾಜ ಬೊಮ್ಮಾಯಿ ಆಯ್ಕೆ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್: ಕಾಂಗ್ರೆಸ್

‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್‌ ಘಟಕ ಶನಿವಾರ ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಬರೆದುಕೊಂಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...