Homeಕರ್ನಾಟಕಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ, ಆಮೇಲೆ ಆಪರೇಶನ್ ಮಾಡಲಿ: ಬಿ.ಎಲ್. ಸಂತೋಷ್‌ಗೆ ಶೆಟ್ಟರ್ ತಿರುಗೇಟು

ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ, ಆಮೇಲೆ ಆಪರೇಶನ್ ಮಾಡಲಿ: ಬಿ.ಎಲ್. ಸಂತೋಷ್‌ಗೆ ಶೆಟ್ಟರ್ ತಿರುಗೇಟು

- Advertisement -
- Advertisement -

ಬಿ. ಎಲ್ ಸಂತೋಷ್ ಅವರು ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ, ಆಮೇಲೆ ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇತ್ತೀಚೆಗೆ ಬಿಎಲ್ ಸಂತೋಷ್ ಅವರು, ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಪಕ್ಷದಲ್ಲಿರುವ ಶಾಸಕರನ್ನು,ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ. ಬಿಜೆಪಿ ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕು” ಎಂದು ತಿರುಗೇಟು ನೀಡಿದ್ದಾರೆ.

”ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಬೆಳಗ್ಗೆಯಿಂದ ಸಾಯಂಕಾಲದ ವರೆಗೂ ಆಪರೇಶನ್ ‌ಮಾಡುವುದೇ ಬಿಜೆಪಿಯ ಕೆಲಸ. ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡೋದು. ನಮ್ಮ ರಾಜ್ಯದಲ್ಲಿಯೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ. ಕಾಂಗ್ರೆಸ್‌ಗೆ 136 ಸೀಟ್ ಬಂದಿದೆ. ರಾಜ್ಯದಲ್ಲಿ ಗಟ್ಟಿ ಮುಟ್ಟಾದ ಸರ್ಕಾರವಿದೆ. ಯಾರು ರಾಜೀನಾಮೆ ಕೊಟ್ಟು ಹೋಗುತ್ತಾರೆ” ಎಂದರು.

”ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಬಾರಿಯೂ ಬಹುಮತ ಬರಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ. ಇದಕ್ಕೆ ಕಾರಣ ಬಿಜೆಪಿ‌ ಕೆಲವೇ ಜನರ ಕೈಯಲ್ಲಿರೋದು. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ಬಿಜೆಪಿಯ ಕೆಲಸವಾಗಿದೆ. ರಾಜ್ಯ ಬಿಜೆಪಿ ನಾಯಕರ ಪರಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ಬಿ.ಎಲ್. ಸಂತೋಷ್ ಅವರ ಬಗ್ಗೆ ದೆಹಲಿಯಲ್ಲಿ ಕೂತ ಬಿಜೆಪಿ ನಾಯಕರು ಯೋಚನೆ ಮಾಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...