Homeಮುಖಪುಟಕೊರೊನಾದ ನಡುವೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಆರಂಭ!

ಕೊರೊನಾದ ನಡುವೆ ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಆರಂಭ!

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ನಡೆಯುವ ಮೊದಲ ಚುನಾವಣೆ ಇದಾಗಿದೆ.

- Advertisement -
- Advertisement -

ಬಿಹಾರದ ಮೂರು ಹಂತದ ವಿಧಾನಸಭಾ ಚುನಾವಣೆಯ ಭಾಗವಾಗಿ ರಾಜ್ಯದ 243 ಸ್ಥಾನಗಳ ಪೈಕಿ ಇಂದು 71 ಸ್ಥಾನಗಳಲ್ಲಿ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ 71 ವಿಧಾನಸಭಾ ವಿಭಾಗಗಳಲ್ಲಿ 1,066 ಅಭ್ಯರ್ಥಿಗಳ ಭವಿಷ್ಯವನ್ನು ಎರಡು ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ನಡೆಯುವ ಮೊದಲ ಚುನಾವಣೆ ಇದಾಗಿದೆ. ಚುನಾವಣಾ ಆಯೋಗವು ಪ್ರಚಾರ ಮತ್ತು ಮತದಾನಕ್ಕಾಗಿ ವಿವರವಾದ ಮಾರ್ಗಸೂಚಿಗಳನ್ನು ನೀಡಿತ್ತು. ಈ ಬಾರಿ ಮತದಾನ ಕೇಂದ್ರದಲ್ಲಿ 1,000 ಮತದಾರರಿಗೆ ಮಾತ್ರ ಅವಕಾಶ ನೀಡಲಾಗುವುದು. ಥರ್ಮಲ್ ಸ್ಕ್ಯಾನರ್‌ಗಳು, ಹ್ಯಾಂಡ್ ಸ್ಯಾನಿಟೈಸರ್, ಸೋಪ್ ಮತ್ತು ನೀರು ಮತದಾರರಿಗೆ ಲಭ್ಯವಾಗಲಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಥವಾ ಕೊರೊನಾ ಸೋಂಕಿತರಿಗೆ ಅಂಚೆ ಮತಪತ್ರ ಸೌಲಭ್ಯವನ್ನು ನೀಡಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಮತದಾನದ ಸಮಯವನ್ನೂ ವಿಸ್ತರಿಸಲಾಗಿದೆ. ಈ ಬಾರಿ ಮತದಾನ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿ ಸಂಜೆ 6 ರವರೆಗೆ ಮುಂದುವರಿಯಲಿದೆ. ಆದಾಗ್ಯೂ, ಪರಿಷ್ಕೃತ ಸಮಯಗಳು ಎಡಪಂಥೀಯ ಉಗ್ರವಾದದಿಂದ ಪ್ರಭಾವಿತ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ.

ಕಾಂಗ್ರೆಸ್, ರಾಷ್ಟ್ರೀಯ ಜನತಾದಳ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ಬಿಹಾರದ ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ಜನತಾದಳ ವಿಧಾನಸಭಾ ಚುನಾವಣೆಯಲ್ಲಿ 144 ಸ್ಥಾನಗಳಿಂದ ಸ್ಪರ್ಧಿಸಲಿದ್ದು, ಕಾಂಗ್ರೆಸ್ 70 ಮತ್ತು ಎಡ ಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಟ್ಟಾಗಿ 29 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಮೈತ್ರಿಕೂಟವು, 10 ಲಕ್ಷ ಉದ್ಯೋಗಗಳನ್ನು ಒದಗಿಸುವುದಾಗಿಯೂ, ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿಯೂ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಜನತಾದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷ ಈ ಮಧ್ಯೆ ಸುಮಾರು 50:50 ಸ್ಥಾನಗಳ ಹಂಚಿಕೆ ಒಪ್ಪಂದವನ್ನು ಘೋಷಿಸಿತ್ತು. ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ನಿತೀಶ್ ಕುಮಾರ್ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ. ಕೇಸರಿ ಪಕ್ಷವು ಉಚಿತ ಕೊರೊನಾ ವೈರಸ್ ಲಸಿಕೆಗಳು ಮತ್ತು 19 ಲಕ್ಷ ಉದ್ಯೋಗಗಳನ್ನು ನೀಡುವ ಭರವಸೆ ನೀಡಿತ್ತು. ಆರೋಗ್ಯ ಬಿಕ್ಕಟ್ಟನ್ನು ರಾಜಕೀಯಗೊಳಿಸಿದ್ದಕ್ಕಾಗಿ ಪಕ್ಷವನ್ನು ತೀವ್ರವಾಗಿ ಟೀಕಿಸಲಾಗಿದೆ.

ಮೊದಲ ಹಂತದ ಮತದಾನದಲ್ಲಿ, ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಮತ್ತು ಆರ್ಜೆಡಿ ಅಭ್ಯರ್ಥಿ ಉದಯ್ ನಾರಾಯಣ್ ಚೌಧರಿ ಅವರು ಇಮಾಮಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಈ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಿದೆ. ಜಮುಯಿಯಲ್ಲಿ, 2018 ರ ಕಾಮನ್ವೆಲ್ತ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ಬಿಜೆಪಿ ಅಭ್ಯರ್ಥಿ ಶ್ರೇಯಾಸಿ, ಆರ್‌ಜೆಡಿ ಶಾಸಕ ವಿಜಯ್ ಪ್ರಕಾಶ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ಮುಂದಿನ ಎರಡು ಹಂತದ ಚುನಾವಣೆಗಳು ನವೆಂಬರ್ 3 ಮತ್ತು ನವೆಂಬರ್ 7 ರಂದು ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...