Homeಮುಖಪುಟ18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

- Advertisement -
- Advertisement -

ಇಂದಿನಿಂದ (ಜೂನ್ 24) 18ನೇ ಲೋಕಸಭೆ ಯ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಅನುಭವ ಹೊಂದಿರುವ ಭರ್ತೃಹರಿ ಮಹತಾಬ್‌ ಅವರನ್ನು ಪ್ರಸ್ತುತ ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ.

ರಾಷ್ಟ್ರಪತಿ ಶಿಷ್ಟಾಚಾರ ಮೀರಿ ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಆರೋಪ ಕೇಳಿ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರ ಹೆಸರನ್ನು ಸೂಚಿಸಲಾಗಿದ್ದರೂ, ಸರ್ಕಾರ ಕಡೆಗಣಿಸಿದೆ ಎಂದು ಹೇಳಲಾಗ್ತಿದೆ. ಈ ಸಂಬಂಧ ಸೃಷ್ಟಿಯಾಗಿರುವ ವಿವಾದವು ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಮತ್ತು ಕೇಂದ್ರದ ನಡೆಯನ್ನು ಟೀಕಿಸಿವೆ.

ಮಹತಾಬ್‌ ಅವರು ಸತತವಾಗಿ ಏಳು ಬಾರಿ ಲೋಕಸಭೆ ಸದಸ್ಯರಾಗಿದ್ದು, ಹಂಗಾಮಿ ಸ್ಪೀಕರ್‌ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಪ್ರತಿಪಾದಿಸಿದ್ದಾರೆ. ಸುರೇಶ್‌ ಅವರು 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದರು ಎಂದೂ ಅವರು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಮಹತಾಬ್‌ ಅವರಿಗೆ ಇಂದು ಬೆಳಿಗ್ಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮಹತಾಬ್‌ ಅವರು ಸಂಸತ್‌ ಭವನ ತಲುಪಿ, ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಆರಂಭಿಸಲಿದ್ದಾರೆ.

ಅಗಲಿದ ಗಣ್ಯರ ಗೌರವ ನಮನ ಸಲ್ಲಿಸುವ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಹಂಗಾಮಿ ಸ್ಪೀಕರ್‌ ಕರೆ ನೀಡಲಿದ್ದಾರೆ.

ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ಗೆ ನೆರವಾಗಲು ಸದಸ್ಯರಾದ ಕೆ. ಸುರೇಶ್‌ (ಕಾಂಗ್ರೆಸ್‌), ಟಿ.ಆರ್‌.ಬಾಲು (ಡಿಎಂಕೆ), ರಾಧಾ ಮೋಹನ್‌ ಸಿಂಗ್‌, ಫಗ್ಗನ್‌ ಸಿಂಗ್‌ ಕುಲಸ್ತೆ (ಇಬ್ಬರೂ ಬಿಜೆಪಿ) ಹಾಗೂ ಸುದೀಪ್‌ ಬಂದ್ಯೋಪಾಧ್ಯಾಯ (ಟಿಎಂಸಿ) ಅವರನ್ನು ರಾಷ್ಟ್ರಪತಿ ನೇಮಿಸಿದ್ದಾರೆ.

ನರೇಂದ್ರ ಮೋದಿಯ ಬಳಿಕ, ಮಂತ್ರಿ ಪರಿಷತ್ತಿನ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.

ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆಯು ಜೂನ್ 28ರಂದು ಪ್ರಾರಂಭವಾಗಲಿದ್ದು, ಜುಲೈ 2 ಅಥವಾ 3ರಂದು ಪ್ರಧಾನಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ನಂತರ ಎರಡೂ ಸದನಗಳನ್ನು ಸಂಕ್ಷಿಪ್ತ ಅವಧಿಗೆ ಮುಂದೂಡಲಾಗುತ್ತದೆ. ಕೇಂದ್ರ ಬಜೆಟ್‌ ಮಂಡನೆಗಾಗಿ ಜುಲೈ 22ರಂದು ಮತ್ತೆ ಸದನದ ಕಲಾಪ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ : ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣ: ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಆರಂಭಿಸಿದ ಸಿಬಿಐ, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...