Homeಮುಖಪುಟಗುರುವಾರ ವರ್ಷದ ಮೊದಲ ಸೂರ್ಯ ಗ್ರಹಣ: ಭಾರತದ ಕೆಲವು ಭಾಗಗಳಲ್ಲಿ ಗೋಚರ

ಗುರುವಾರ ವರ್ಷದ ಮೊದಲ ಸೂರ್ಯ ಗ್ರಹಣ: ಭಾರತದ ಕೆಲವು ಭಾಗಗಳಲ್ಲಿ ಗೋಚರ

- Advertisement -
- Advertisement -

ಸೂರ್ಯಗ್ರಹಣ ನಭೋ ಮಂಡಲದಲ್ಲಿ‌ ನಡೆಯುವ ಅತ್ಯಂತ ಕೌತುಕ ಕ್ಷಣ. ಸೂರ್ಯ, ಚಂದ್ರ ಮತ್ತು ಭೂಮಿ ಒಂದೇ ಸರಳ ರೇಖೆಯಲ್ಲಿ ಬಂದಾಗ ನಡೆಯುವ ಈ ಕೌತುಕವನ್ನು ನೋಡಲು ಜಗತ್ತಿನಲ್ಲಿ ಅನೇಕರು ಕಾಯುತ್ತಿರುತ್ತಾರೆ. 2021 ನೇ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 10 ಗುರುವಾರ ಸಂಭವಿಸಲಿದೆ.‌‌ ಆದರೆ ಭಾರತದ ಹೆಚ್ಚಿನ ಭಾಗಗಳಲ್ಲಿ ಸೂರ್ಯ ಗ್ರಹಣ ಗೋಚರವಾಗುವುದಿಲ್ಲ. ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಮಾತ್ರ ಈ ಸೂರ್ಯಗ್ರಹಣ ಬರಿಗಣ್ಣಿಗೆ ಕಾಣಿಸಲಿದೆ.

ಸೂರ್ಯಸ್ತದ ಸಮಯದಲ್ಲಿ ಈ ಸೂರ್ಯಗ್ರಹಣ ಕಾಣಿಸಲಿದೆ. ಕೇವಲ ಕೆಲವೇ ನಿಮಿಷಗಳಷ್ಟು ಕಾಲ ಸೂರ್ಯಗ್ರಹಣ ಗೋಚರವಾಗಲಿದ್ದು ಸೂರ್ಯನ ಸುತ್ತ ಪ್ರಕಾಶಮಾನವಾದ ಬೆಳಕಿನ ವೃತ್ತವೊಂದು ಕಾಣಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಭಾರತೀಯ ಕಾಲಮಾನ 11:42 ಗಂಟೆಯಿಂದ ಭಾಗಶಃ ಗ್ರಹಣ ಕಾಣಿಸಲಿದ್ದು ನಂತರ 3:30 ಗಂಟೆಯ ಹೊತ್ತಿಗೆ ಹೆಚ್ಚಿನ ಸೂರ್ಯಗ್ರಹಣ ಆರಂಭವಾಗಲಿದೆ. 3:30 ಗಂಟೆಯಿಂದ 4:52 ಗಂಟೆಯ ವರೆಗೆ ಖಂಡ ಸೂರ್ಯಗ್ರಹಣ ಮುಂದುವರೆಯಲಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಸಂಜೆ 6:41 ಗಂಟೆಯ ಹೊತ್ತಿಗೆ ಭಾಗಶಃ ಗ್ರಹಣ ಅಂತ್ಯವಾಗಲಿದೆ.

ಖಗೋಳ ಶಾಸ್ತ್ರದ‌ ಸಂಶೋಧಕರು ಮತ್ತು ಆಸಕ್ತರಿಗೆ ಈ ಸೂರ್ಯಗ್ರಹಣ ಅತ್ಯಂತ ಉತ್ತಮ ಅವಕಾಶವಾಗಿರಲಿದೆ ಎಂದು ಎಂಪಿ ಬಿರ್ಲಾ ಖಗೋಳಶಾಸ್ತ್ರ ಕೇಂದ್ರದ ನಿರ್ದೇಶಕ ದೇವಿ ಪ್ರಸಾದ್ ದುರೈ ತಿಳಿಸಿದ್ದಾರೆ.


ಇದನ್ನೂಓದಿ : ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...