Homeಅಂತರಾಷ್ಟ್ರೀಯಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಇಂದು ಭಾರತದಿಂದ ಕಣಕ್ಕಿಳಿಯುವ ಹನ್ನೊಂದರ ಬಳಗದ ವಿವರ ಇಲ್ಲಿದೆ.

- Advertisement -
- Advertisement -

ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲೇ ಭಾರತ ಗೆಲುವಿನೊಂದಿಗೆ ಸರಣಿ ಆರಂಭಿಸುವ ಗುರಿಯನ್ನು ಹೊಂದಿದೆ. ಆದರೆ, ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ದೀಪಕ್‌ ಚಹರ್‌ ಅನುಪಸ್ಥಿತಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ನಾಯಕ ರೋಹಿತ್‌ ಶರ್ಮಾ ಯಾರಿಗೆಲ್ಲಾ ಸ್ಥಾನ ನೀಡಲಿದ್ದಾರೆ? ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಈಗಾಗಲೇ ವೆಸ್ಟ್‌ ಇಂಡೀಸ್‌ ವಿರುದ್ಧ ತವರಿನಲ್ಲಿ ನಡೆದ ಏಕದಿನ ಮತ್ತು ಟಿ20 ಸರಣಿಯಲ್ಲಿ ಕ್ಲೀನ್‌ ಸ್ವೀಪ್ ಸಾಧಿಸಿದೆ. ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಸರಣಿಯ ಮೇಲೂ ಸಾಕಷ್ಟು ನಿರೀಕ್ಷೆಗಳು ಇವೆ. ಆದರೆ, ವಿಂಡೀಸ್‌ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಆಟಗಾರರ ಅಲಭ್ಯತೆಯಲ್ಲಿ ಶ್ರೀಲಂಕಾ ವಿರುದ್ಧ ಬಿಸಿಸಿಐ ಆಯ್ಕೆ ಸಮಿತಿ ಹೊಸ ಯುವಕರ ತಂಡವನ್ನು ಘೋಷಿಸಿದ್ದು, ಯುವಕರ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿವೆ.

ಹೀಗಿರಲಿದೆ ಭಾರತದ ಹನ್ನೊಂದರ ಬಳಗ

ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ನಾಯಕ ರೋಹಿತ್‌ ಶರ್ಮಾ ಮತ್ತು ಇಶಾನ್ ಕಿಶನ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ಋತುರಾಜ್ ಗಾಯಕ್ವಾ‌ಡ್ ತಂಡದಲ್ಲಿ ಅವಕಾಶ ಪಡೆದರೆ ರೋಹಿತ್‌ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್‌, ದೀಪಲ್ ಹೂಡಾ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬಲಿದ್ದಾರೆ.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್‌ ಬುಮ್ರಾ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತುಂಬಲಿದೆ. ಬುಮ್ರಾ ಜೊತೆಗೆ ಭುವನೇಶ್ವರ್‌ ಕುಮಾರ್‌, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್ ಮತ್ತು ರವಿ ಬಿಷ್ಣೋಯ್ ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ:ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ:…

ಗೆಲುವಿನ ಭರವಸೆಯಲ್ಲಿ ಶ್ರೀಲಂಕಾ

ಸತತ ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡ ಸರಣಿ ಗೆಲುವಿನ ಹುಡುಕಾಟದಲ್ಲಿದೆ. ಕಳೆದ ವಾರ ಮುಕ್ತಾಯವಾದ ಆಸ್ಟ್ರೇಲಿಯಾ ಪ್ರವಾಸದಲ್ಲಿ 3-2 ಅಂತರದಲ್ಲಿ ಟಿ20 ಸರಣಿಯನ್ನು ಶ್ರೀಲಂಕಾ ಸೋತಿತ್ತು. ಆದರೆ, ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ತಂಡದಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಾಗಲು ಕಾರಣವಾಗಿದೆ. ಆದರೆ, ತಂಡದ ಬ್ಯಾಟಿಂಗ್ ವಿಭಾಗದ ಕಳಪೆ ಪ್ರದರ್ಶನ ಶ್ರೀಲಂಕಾ ನಾಯಕ ದಾಸುನ್ ಶನಕ ತಲೆ ನೋವಿಗೆ ಕಾರಣವಾಗಿದೆ.

 

ತಂಡಗಳು ಹೀಗಿದೆ

ಭಾರತದ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕಾ (ಉಪನಾಯಕ), ದಿನೇಶ್ ಚಂಡಿಮಲ್, ದನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಕುಮಾರ, ಭಿರುರನ್, ಬಿನುರ ಫೆರ್ನಾಂಡೋ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಆಶಿಯನ್ ಡೇನಿಯಲ್.


ಇದನ್ನೂ ಓದಿ; ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

0
ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಹೂಡಿರುವ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಫೆಬ್ರವರಿ 29ಕ್ಕೆ ನಿಗದಿಪಡಿಸಿದೆ. ಶಾಹಿ ಈದ್ಗಾ ಇಂತೇಜಾಮಿಯಾ ಸಮಿತಿಯು ಕತ್ರ...