Homeಅಂತರಾಷ್ಟ್ರೀಯನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

- Advertisement -
- Advertisement -

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ.

ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.

ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಹೆಗಲಿಗೆ ಬಿದ್ದಿದೆ.

ಭಾರತದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಹಳೆಯ ವಿದ್ಯಾರ್ಥಿಯಾಗಿರುವ ಕರ್ಕಿ, ಅಧ್ಯಕ್ಷ ಪೌಡೆಲ್, ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ‘ಜೆನ್‌ ಝೀ’ ಎಂದು ಕರೆಯಲ್ಪಡುವ ಯುವ ಪ್ರತಿಭಟನಾಕಾರರ ಪ್ರತಿನಿಧಿಗಳ ಸಮಾಲೋಚನೆಯ ನಂತರ ಅಂತಿಮವಾಗಿ ಆಯ್ಕೆಯಾದ ಮೊದಲು ನಾಲ್ವರು ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದರು.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ಮುಖ್ಯಸ್ಥ ಕುಲ್ಮನ್ ಘಿಸಿಂಗ್, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಮತ್ತು ಧರಣ್ ಮೇಯರ್ ಹರ್ಕಾ ಸಂಪಂಗ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದ ಇತರ ನಾಯಕರು.

ನೇಪಾಳದಲ್ಲಿ ಆರಂಭದಲ್ಲಿ, ಸರ್ಕಾರದ ಸಾಮಾಜಿಕ ಮಾಧ್ಯಮ ನಿಷೇಧ ಆದೇಶದ ವಿರುದ್ದ ಭುಗಿಲೆದ್ದ ಯುವಜನರ ಪ್ರತಿಭಟನೆ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು. ‘ಜೆನ್‌ ಝೀ’ ಯುವಜನರು, ವಿದ್ಯಾರ್ಥಿಗಳು ಸಂಸತ್ ಭವನ, ಪ್ರಧಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದರು.

ಕೆಲ ಸಚಿವರನ್ನು ಪ್ರತಿಭಟನಾಕಾರರು ಅಟ್ಟಾಡಿಸಿ ಥಳಿಸಿದ್ದರು. ಈ ನಡುವೆ ತನ್ನ ಹುದ್ದೆಗೆ ರಾಜೀನಾಮೆ ಕೊಟ್ಟ ಪ್ರಧಾನಿ ಕೆ.ಪಿ ಶರ್ಮಾ ಓಲಿ, ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ಯುವಜನರ ಪ್ರತಿಭಟನೆ ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ದ ಪ್ರಾರಂಭಗೊಂಡರೂ, ಬಳಿಕ ಅದು ಪಡೆದುಕೊಂಡ ಸ್ವರೂಪ ರಾಜಕಾರಣಿಗಳ ಮಿತಿ ಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಸೇರಿದಂತೆ ಜನ ವಿರೋಧಿ ನಡೆಗಳ ವಿರುದ್ದ ಆಕ್ರೋಶದ ಕಟ್ಟೆ ಒಡೆದಿರುವುದಾಗಿ ಎಂದು ವರದಿಗಳು ಹೇಳಿವೆ.

ನಾಲ್ಕೈದು ದಿನಗಳ ಹಿಂಸಾತ್ಮಕ ಪ್ರತಿಭಟನೆಯಿಂದ ನೇಪಾಳದಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಸುಮಾರು 20ರಷ್ಟು ಜನರು ಸಾವಿಗೀಡಾಗಿದ್ದಾರೆ. ದೇಶವನ್ನು ಹೊಸದಾಗಿ ಕಟ್ಟುವ ಜವಾಬ್ದಾರಿ ಮಧ್ಯಂತರ ಸರ್ಕಾರ ಮೇಲಿದೆ.

ಪ್ರಸ್ತುತ ಪ್ರತಿಭಟನೆಗಳು ಕಡಿಮೆಯಾಗಿವೆ. ಪರಿಸ್ಥಿತಿಯ ಸೇನೆಯ ನಿಯಂತ್ರಣಕ್ಕೆ ಬಂದಿದೆ.

ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಯಾರು?

ಜುಲೈ 2016ರಲ್ಲಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಸುಶೀಲಾ ಕರ್ಕಿ ಅವರು ಇತಿಹಾಸ ನಿರ್ಮಿಸಿದ್ದರು. ಆದಾಗ್ಯೂ, ಜನಪ್ರತಿನಿಧಿಗಳು ಪಕ್ಷಪಾತದ ತೀರ್ಪುಗಳನ್ನು ನೀಡಿದ್ದಾರೆ ಮತ್ತು ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಪದಚ್ಯುತಿ ನಿರ್ಣಯ ಮಂಡಿಸಿದ ನಂತರ ಅವರ ಅಧಿಕಾರಾವಧಿಯು ಒಂದು ವರ್ಷದೊಳಗೆ ಕೊನೆಗೊಂಡಿತ್ತು.

ನೇಪಾಳ ಸುಪ್ರೀಂ ಕೋರ್ಟ್ ಪೊಲೀಸ್ ಮುಖ್ಯಸ್ಥರ ನೇಮಕಾತಿಗಳ ಕುರಿತ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ನಂತರ ಕರ್ಕಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹಿರಿತನವನ್ನು ಅನ್ಯಾಯವಾಗಿ ನಿರ್ಲಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ತನಿಖೆ ಬಾಕಿ ಇರುವಾಗಲೇ ಕರ್ಕಿ ಅವರನ್ನು ಅಮಾನತುಗೊಳಿಸಲಾಗಿದ್ದರೂ, ಜೂನ್ 2017ರಲ್ಲಿ ಅವರ ನಿವೃತ್ತಿಗೆ ಮೊದಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ಸಾಧ್ಯವಾಗದೆ ಪದಚ್ಯುತಿ ನಿರ್ಣಯ ವಿಫಲಗೊಂಡಿತ್ತು.

ಜೂನ್ 7,1952 ರಂದು ಬಿರಾಟ್‌ನಗರದಲ್ಲಿ ಜನಿಸಿದ ಸುಶೀಲಾ ಕರ್ಕಿ, 1975 ರಲ್ಲಿ ಬಿಎಚ್‌ಯುನಲ್ಲಿ ರಾಜಕೀಯ ವಿಜ್ಞಾನವನ್ನು ಮತ್ತು 1978ರಲ್ಲಿ ತ್ರಿಭುವನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದರು. ಮುಖ್ಯ ನ್ಯಾಯಾಧೀಶರಾಗುವ ಮೊದಲು, ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶೆ, ಹಿರಿಯ ವಕೀಲೆ ಮತ್ತು ಕಾನೂನು ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದರು. ಲಿಂಗ ಸಮಾನತೆಯ ಕುರಿತು ಲೇಖಕಿಯೂ ಆಗಿದ್ದ ಸುಶೀಲಾ ಕರ್ಕಿ, ಮಾನವ ಹಕ್ಕುಗಳು ಮತ್ತು ಮಹಿಳಾ ನ್ಯಾಯಾಂಗ ಸಂಸ್ಥೆಗಳಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು.

ನೇಪಾಳದಲ್ಲಿ ಜೈಲು ಘರ್ಷಣೆ: 15,000ಕ್ಕೂ ಹೆಚ್ಚು ಕೈದಿಗಳ ಪರಾರಿ, ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...