Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...