ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಸ್ಫೋಟ ಸಂಭವಿಸಿದ್ದು, ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ರತ್ನಗಿರಿಯ ಘರ್ಡಾ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ. ರಾಸಾಯನಿಕ ಕಾರ್ಖಾನೆಯೊಳಗೆ ಸಿಲುಕಿಕೊಂಡಿದ್ದ ಸುಮಾರು 40 ರಿಂದ 50 ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡವರನ್ನು ಹತ್ತಿರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ, ತೀವ್ರ ಗಾಯಗಳಾಗಿರುವ ರೋಗಿಗಳನ್ನು ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ | ಲೈವ್ ನೋಡಿ
ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದ ಹಿಂದಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಬಾಯ್ಲರ್ ಸ್ಫೋಟವು ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗುತ್ತಿದೆ.
ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ನಡೆದಿರುವ ಆರನೇ ಸ್ಫೋಟ ಇದಾಗಿದೆ ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ: ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ


