Homeಮುಖಪುಟಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

ಕಾಶ್ಮೀರದಲ್ಲಿ ಹೊಸ ಪಕ್ಷ ಉದಯ: ಐವರಿಂದ ಪತ್ರಿಕಾಗೋಷ್ಟಿ, ಎಲ್ಲರಲ್ಲಿ ಆಶ್ಚರ್ಯ..

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ದಾರಿ ಮತ್ತು ಹೊಸ ನಾಯಕತ್ವವನ್ನು ತೋರಿಸಲು ಹೊಸ ರಾಜಕೀಯ ಪಕ್ಷವನ್ನು ಐವರು ಅಪರಿಚಿತರು ಆರಂಭಿಸಿದ್ದಾರೆ! 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ದೊಡ್ಡ ರಾಜಕೀಯ ಬೆಳವಣಿಗೆ ಇದಾಗಿದ್ದು ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ.

ಐವರು ಪುರುಷರು ತಮ್ಮ ಪಕ್ಷವನ್ನು ಜಮ್ಮು ಕಾಶ್ಮೀರ ರಾಜಕೀಯ ಚಳವಳಿ- I ಎಂದು ಗುರುತಿಸಿದ್ದಾರೆ. “ಭಾರತ”ದೊಂದಿಗೆ ಭದ್ರವಾಗಿ ನಿಲ್ಲುತ್ತೇವೆ ಎಂದು ಘೋಷಿಸಿರುವ ಅವರನ್ನು ವಕ್ತಾರ ಶಾಹಿದ್ ಖಾನ್, ವಕೀಲ ರಾಜಾ ಅಶ್ರಫ್, ಮತ್ತು ಮುಷ್ತಾಕ್ ತಂತರಿ ಎಂದು ಗುರುತಿಸಲಾಗಿದೆ.

ಆಗಸ್ಟ್ 5ರ ನಂತರ ಕಾಶ್ಮೀರದಲ್ಲಿ ನಡೆದ ಮೊದಲ “ಅಧಿಕೃತೇತರ” ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬೇರೆ ಯಾರೂ ಮಾಡದ” ಸಮಯದಲ್ಲಿ ಮಾತನಾಡಲು ಧೈರ್ಯ ಮಾಡುವ ಮೂಲಕ ತಮ್ಮ ಜೀವನವನ್ನು ಅಪಾಯದಲ್ಲಿಟ್ಟಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ.

ತಾವು ಪ್ರಗತಿಪರ ಮನಸ್ಸನ್ನು ಹೊಂದಿದ್ದಾರೆಂದು ಹೇಳಿಕೊಂಡಿರುವ ಅವರು “370ನೇ ವಿಧಿ ರದ್ದತಿ ನಂತರ ಕಾಶ್ಮೀರದ ಬಗ್ಗೆ ಮಾಧ್ಯಮಗಳು ನಕಾರಾತ್ಮಕತೆಯನ್ನು ತೋರಿಸುವುದನ್ನು ಬಿಟ್ಟು ಸಕಾರಾತ್ಮಕತೆಯನ್ನು ತೋರಿಸಬೇಕೆಂದು ಮಾಧ್ಯಮವನ್ನು ಒತ್ತಾಯಿಸಿದರು.

ಶಾಹಿದ್ ಖಾನ್ ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಲ್ಲದೇ ನನ್ನನ್ನು ಇಲ್ಲಿರುವ ಅನೇಕರ ಬಲ್ಲರು ಎಂದರು. ಆದರೆ ಹಾಜರಿದ್ದ ವರದಿಗಾರರು ಆತನನ್ನು ತಿಳಿದಿಲ್ಲವೆಂದು ಹೇಳಿದ್ದಾರೆ.

ಸೋಮವಾರದ ಪತ್ರಿಕಾಗೋಷ್ಟಿ ನಡೆಸಲು ಸರ್ಕಾರ ಅವರಿಗೆ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ. ಕಾಶ್ಮೀರದ ಮುಖ್ಯವಾಹಿನಿಯ ಮತ್ತು ಪ್ರತ್ಯೇಕತಾವಾದಿ ನಾಯಕರು ಜೈಲಿನಲ್ಲಿರುವ ಸಮಯದಲ್ಲಿ ಇದು ಹಲವರನ್ನು ಹುಬ್ಬೇರಿಸುವಂತೆ ಮಾಡಿದೆ. ಜೊತೆಗೆ ಹಲವಾರು ಟಿವಿ ಚಾನೆಲ್‌ಗಳ ಸಿಬ್ಬಂದಿಗಳು ಈ ಪತ್ರಿಕಾಗೋಷ್ಟಿಯನ್ನು ನೇರ ಪ್ರಸಾರ ಮಾಡುದ್ದಾರೆ ಮತ್ತು ಅದಕ್ಕೆ ಇನ್ನಿಲ್ಲದ ಪ್ರಾಮುಖ್ಯತೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಅವರು ಯಾರೆಂದು ಪತ್ರಕರ್ತರು ಪದೇ ಪದೇ ಕೇಳಿದಾಗ, ಅವರು “ಸಾಮಾನ್ಯ” ಮತ್ತು “ಸಾಮಾನ್ಯ” ಪುರುಷರು ಎಂದು ಸಿದ್ದಉತ್ತರ ನೀಡಿದ್ದಾರೆ.

“ನಾವು ಯಾರೆಂದು ನೀವು ಕೇಳುತ್ತಿದ್ದೀರಿ. ಅದಕ್ಕಾಗಿಯೇ ನಾವು ಮುಂದೆ ಬರಲು ಬಯಸುವುದಿಲ್ಲ. ಸದ್ಯಕ್ಕೆ ನಾವು ಏನೂ ಅಲ್ಲ…. ನಮ್ಮನ್ನು ಬಲ್ಲವರು ಹೆಚ್ಚು ಇಲ್ಲ. ಮುಂದೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಮತ್ತು ಅನೇಕ ಜನರು ನಮ್ಮ ಬಗ್ಗೆ ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ ಎಂದು ನಮಗೆ ತಿಳಿದಿದೆ” ಖಾನ್ ಹೇಳಿದ್ದಾರೆ.

ನಿಮ್ಮ ಪಕ್ಷವು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವುದನ್ನು ಬೆಂಬಲಿಸುತ್ತದೆಯೇ ಅಥವಾ ಅದನ್ನು ಪುನಃಸ್ಥಾಪಿಸಲು ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ ಅವರ ಬಳಿ ಯಾವುದೇ ಸ್ಪಷ್ಟ ಉತ್ತರಗಳಿಲ್ಲ. “ವಿಶೇಷ ಸ್ಥಾನಮಾನ ಕಳೆದ 60-70 ವರ್ಷಗಳಿಂದ ನಮ್ಮೊಂದಿಗೆ ಇತ್ತು. ಇದನ್ನು ತೆಗೆದುಹಾಕುವಂತೆ ಯಾರೂ ಒತ್ತಾಯಿಸಲಿಲ್ಲ. ನಾವು ಬಹಳಷ್ಟು ಸಂಗತಿಗಳೊಂದಿಗೆ ಬದುಕುತ್ತೇವೆ. ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂಬುದನ್ನು ಕಾಲವೇ ಉತ್ತರಿಸಲಿದೆ”ಎಂದು ಖಾನ್ ಹೇಳಿದ್ದಾರೆ.

ಇವರ ಈ ಪತ್ರಿಕಾಗೋಷ್ಟಿಯು ಉತ್ತರ ಕೊಡುವುದರ ಬದಲು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟಿಸಿದೆ. ಕಾಶ್ಮೀರದ ಎಲ್ಲಾ ರಾಜಕೀಯ ನಾಯಕರು ಗೃಹಬಂಧನದಲ್ಲಿರುವಾಗ ಇವರಿಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ರಾಜಕೀಯ ಪಕ್ಷ ಘೋಷಿಸಲು ಅನುಮತಿ ಕೊಟ್ಟವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಮುಂದೆ ಇದು ಯಾವ ರೀತಿಯ ತಿರುವು ತೆಗೆದುಕೊಳ್ಳುತ್ತದೆ ನೋಡಬೇಕಿದೆ.

ಮಾಹಿತಿ: ದಿ ಟೆಲಿಗ್ರಾಫ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...