Homeಮುಖಪುಟಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಐವರು ವಲಸೆ ಕಾರ್ಮಿಕರನ್ನು ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅವರು ಜನವರಿ 2024ರಲ್ಲಿ ಕಲ್ಪತರು ಪವರ್ ಟ್ರಾನ್ಸ್‌ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ನೈಜರ್‌ಗೆ ವಲಸೆ ಹೋಗಿದ್ದರು. ಅಂದಿನಿಂದ ಮನೆಗೆ ಹಿಂತಿರುಗಿಲ್ಲ ಎನ್ನಲಾಗಿದೆ.

ಕಳೆದ ಶುಕ್ರವಾರ ಮಧ್ಯಾಹ್ನ ಕಾರ್ಮಿಕರ ಅಪಹರಣ ನಡೆದಿದೆ ಎಂದು ವರದಿಯಾಗಿದೆ.ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಬಾಗೋದರ್ ಪೊಲೀಸ್ ಠಾಣೆ ವ್ಯಾಪ್ತಿಯ ಡೊಂಡ್ಲೋ ಪಂಚಾಯತ್‌ನ ಸಂಜಯ್ ಮಹತೋ, ಫಲ್ಜಿತ್ ಮಹತೋ, ರಾಜು ಮಹತೋ,ಚಂದ್ರಿಕಾ ಮಹತೋ ಮತ್ತು ಮುಂಡ್ರೋ ಪಂಚಾಯತ್‌ನ ಉತ್ತಮ್ ಮಹತೋ ಅಪಹರಣಕ್ಕೊಳಗಾದವರಲ್ಲಿ ಸೇರಿದ್ದಾರೆ.

ಇವರೊಂದಿಗೆ ಕೆಲಸ ಮಾಡುತ್ತಿದ್ದ ಇತರ ವಲಸೆ ಕಾರ್ಮಿಕರ ಪ್ರಕಾರ, ಸ್ಥಳೀಯರ ಗುಂಪೊಂದು ಕೆಲಸ ಸ್ಥಳದ ಮೇಲೆ ದಾಳಿ ನಡೆಸಿ, ಸರ್ಕಾರದಿಂದ ನಿಯೋಜಿಸಲ್ಪಟ್ಟ ಹನ್ನೆರಡು ಭದ್ರತಾ ಸಿಬ್ಬಂದಿಯನ್ನು ಕೊಂದು, ಬಂದೂಕು ತೋರಿಸಿ ಒಬ್ಬ ಸ್ಥಳೀಯ ಸೇರಿದಂತೆ ಆರು ಜನರನ್ನು ಕರೆದೊಯ್ದಿದೆ ಎಂದು ವರದಿಯಾಗಿದೆ.

“ನನ್ನ ಪತಿ ಸಂಜಯ್ ಮಹ್ತೋ ಕೆಲಸಕ್ಕೆಂದು ನೈಜರ್‌ಗೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನನಗೆ ಅವರಿಂದ ಕೊನೆಯ ಬಾರಿಗೆ ಕರೆ ಬಂದಿತ್ತು, ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರನ್ನು ಅಪಹರಿಸಲಾಗಿದೆ ಎಂದು ಅವರೊಂದಿಗೆ ಕೆಲಸ ಮಾಡುತ್ತಿರುವ ಇತರರು ನಮಗೆ ತಿಳಿಸಿದ್ದಾರೆ” ಎಂದು ಸಂಜಯ್ ಮಹ್ತೋ ಅವರ ಪತ್ನಿ ಹೇಳಿದ್ದಾರೆ.ನನ್ನ ಪತಿ ಸುರಕ್ಷಿತವಾಗಿ ಮನೆಗೆ ಮರಳಲು ವ್ಯವಸ್ಥೆ ಮಾಡುವಂತೆ ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಫಲ್ಜಿತ್ ಕುಮಾರ್ ಮಹ್ತೊ ಅವರು 2024ರ ಜನವರಿಯಲ್ಲಿ ನೈಜೀರಿಯಾಕ್ಕೆ ಹೋಗಿದ್ದರು. ಏಪ್ರಿಲ್ 25ರಂದು ಬೈಕ್‌ನಲ್ಲಿ ಬಂದ ಕೆಲವರು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ಅವರ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಸಹೋದರ ದಾಮೋದರ್ ಮಹ್ತೊ ಹೇಳಿದ್ಧಾರೆ. ಅವರನ್ನು ಪತ್ತೆಹಚ್ಚಲು ಮತ್ತು ಅವರು ಭಾರತಕ್ಕೆ ಸುರಕ್ಷಿತವಾಗಿ ಮರಳಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಿಕಂದರ್ ಅಲಿ, ಅಪಹರಣಕ್ಕೊಳಗಾದವರು ಕಲ್ಪತರು ಪವರ್ ಟ್ರಾನ್ಸ್ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣ ಕಾರ್ಮಿಕರನ್ನು ಬಿಡುಗಡೆ ಮಾಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದೇವೆ, ಈ ವಿಷಯದಲ್ಲಿ ಸಕಾಲಿಕ ಕ್ರಮ ತೆಗೆದುಕೊಂಡು ಸಂಕಷ್ಟದಲ್ಲಿರುವ ಕಾರ್ಮಿಕರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ವಿನಂತಿಸುತ್ತಿದ್ದೇವೆ” ಎಂದು ಸಿಕಂದರ್ ಅಲಿ ಹೇಳಿದ್ದಾರೆ.

ಈ ವಿಷಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಗಮನಕ್ಕೆ ಬಂದಿದ್ದು, ಅವರು ವಿದೇಶಾಂಗ ಸಚಿವ ಎಸ್ ಜೈಶಕರ್ ಅವರ ಸಹಾಯವನ್ನು ಕೋರಿದ್ದಾರೆ.

ಗೌರವಾನ್ವಿತ ಕೇಂದ್ರ ವಿದೇಶಾಂಗ ಸಚಿವರೇ ನೈಜರ್‌ನಲ್ಲಿ ಅಪಹರಿಸಲ್ಪಟ್ಟಿರುವ ಜಾರ್ಖಂಡ್‌ನ ನಮ್ಮ ವಲಸೆ ಸಹೋದರರಿಗೆ ದಯವಿಟ್ಟು ಸಹಾಯ ಮಾಡುವಂತೆ ವಿನಂತಿಸುತ್ತೇನೆ ಎಂದು ಸಿಎಂ ಹೇಮಂತ್ ಸೊರೇನ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶ| ತೀವ್ರ ಗಾಯಗಳಿಂದ ದಲಿತ ಅತ್ಯಾಚಾರ ಸಂತ್ರಸ್ತೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...