Homeಮುಖಪುಟಭೀಕರ ಅಪಘಾತ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

ಭೀಕರ ಅಪಘಾತ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

- Advertisement -
- Advertisement -

ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಯಮ್ಮಿಗನೂರು ಮಂಡಲದ ಕೋಟೆಕಲ್ ಘಾಟ್ ತಿರುವಿನಲ್ಲಿ ಶನಿವಾರ (ನ.29) ಮುಂಜಾನೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಿನ ಜಾವ 4 ಗಂಟೆಗೆ ಯಮ್ಮಿಗನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಅದೋನಿಯಿಂದ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಳಗಿನ ಜಾವದ ಭಾರೀ ಮಂಜು, ಸರಿಯಾಗಿ ರಸ್ತೆ ಗೋಚರಿಸದರಿವುದು ಮತ್ತು ಬೆಟ್ಟಗಳ ನಡುವಿನ ಕಠಿಣವಾದ ತಿರುವುಗಳಿಂದಾಗಿ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿದೆ ಎಂದು ವರದಿಗಳು ಹೇಳಿವೆ.

ಮೃತರನ್ನು ಕೋಲಾರ ಜಿಲ್ಲೆಯ ಚಿಕ್ಕಹೊಸಳ್ಳಿ ಗ್ರಾಮದ ವೆಂಕಟೇಶಂ (76), ಅವರ ಮಗಳು ಮೀನಾಕ್ಷಿ (32), ಅಳಿಯ ಸತೀಶ್ (34) ಮತ್ತು ಮೊಮ್ಮಕ್ಕಳಾದ ರಿತ್ವಿಕ್ (4) ಮತ್ತು ಬನ್ನಿತ್ (5) ಎಂದು ಗುರುತಿಸಲಾಗಿದೆ.

ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೆಂಕಟೇಶಂ ಅವರ ಪತ್ನಿ ಗಂಗಮ್ಮ ಮತ್ತು ಕಾರು ಚಾಲಕ ಸುರೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಯಮ್ಮಿಗನೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರ ಸ್ಥಿತಿಯೂ ಇನ್ನೂ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ಐವರ ಸಾವಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣದ ಮತ್ತು ಗುಣಮಟ್ಟದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರ ಅಗತ್ಯ ಬೆಂಬಲ ನೀಡಲಿದೆ ಮತ್ತು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಹೇಳಿದ್ದಾರೆ.

ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದಿರುವ ಅವರು, ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಆರ್ & ಬಿ ಸಚಿವ ಬಿ.ಸಿ ಜನಾರ್ದನ ರೆಡ್ಡಿ ಮತ್ತು ಕರ್ನೂಲು ಜಿಲ್ಲಾ ಉಸ್ತುವಾರಿ ಸಚಿವ ನಿಮ್ಮಲ ರಾಮನಾಯ್ಡು ಸ್ಥಳೀಯ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕ್ರಮಗಳನ್ನು ತೀವ್ರಗೊಳಿಸಲು ಮತ್ತು ಮೃತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವಂತೆ ಸೂಚಿಸಿದ್ದಾರೆ.

ಸಚಿವ ಟಿ.ಜಿ ಭರತ್ ಮತ್ತು ಸಚಿವ ಕಿಂಜರಪು ಅಚ್ಚನ್ನಾಯ್ಡು ಅವರು ಜೀವಹಾನಿ, ವಿಶೇಷವಾಗಿ ಮಕ್ಕಳ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಇಂತಹ ಘಟನೆಗಳನ್ನು ತಡೆಗಟ್ಟಲು ರಸ್ತೆ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...