Homeಮುಖಪುಟಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

ಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

- Advertisement -
- Advertisement -

ಉತ್ತರಪ್ರದೇಶ, ಪಂಜಾಬ್, ಉತ್ತರಖಂಡ್, ಗೋವಾ ಮತ್ತು ಮಣಿಪುರ ರಾಜ್ಯಗಳಿಗೆ ಫೆಬ್ರವರಿ 10ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಐದೂ ರಾಜ್ಯಗಳಲ್ಲಿ ಸೆಣಸಾಟಕ್ಕೆ ಕಣ ಸಿದ್ದವಾಗಿದೆ. ರಾಷ್ಟ್ರೀಯ ಮತ್ತು ಸ್ಥಳೀಯ ಪಕ್ಷಗಳು ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿವೆ.

ಪಂಚರಾಜ್ಯ ಚುನಾವಣಾ ಕಣದ ಫೆಬ್ರವರಿ 4ರ ಪ್ರಮುಖ ಅಂಶಗಳು ಹೀಗಿವೆ:

1. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಗೋರಖ್‌ಪುರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಮೇಲೆ ಆದಿತ್ಯನಾಥ್ ಜೊತೆಗೆ ಗೋರಖ್‌ಪುರದಲ್ಲಿ ರೋಡ್ ಶೋ ನಡೆಸಿದ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್ ಶಾ, ಬಿಜೆಪಿಯು ಉತ್ತರಪ್ರದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ 

2. ಮಣಿಪುರದ ವಿಧಾನಸಭಾ ಸ್ಪೀಕರ್ ಯುಮನ್ ಕೆಂಚದ್ ಸಿಂಗ್ ಅವರು ಮಣಿಪುರದ 13-ಸಿಗ್ನಾಮೆಯ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಮಣಿಪುರದ ನಾಲ್ವರು ಸಚಿವರು ಕೂಡ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

3. ನೂರಾರು ರೈತರ ಸಾವಿಗೆ ಕಾರಣವಾದ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಯ ಭರವಸೆ ನೀಡಿ ಸಮಿತಿಯನ್ನೂ ರಚಿಸದ ಬಿಜೆಪಿಗೆ ಈ ಬಾರಿಯ ಮತ ನೀಡದಂತೆ ಉತ್ತರ ಪ್ರದೇಶ ಹಾಗೂ ಚುನಾವಣೆ ನಡೆಯುತ್ತಿರುವ ಎಲ್ಲಾ ರಾಜ್ಯಗಳ ಜನರಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದಕ್ಕಾಗಿ ಕರಪತ್ರವೊಂದನ್ನು ಹೊರಡಿಸಿದ್ದು, ಅದನ್ನು ಸ್ವಯಂಪ್ರೇರಿತರಾಗಿ ಹಂಚುವಂತೆ ಜನರಲ್ಲಿ ರೈತ ಮುಖಂಡರು ಮನವಿ ಮಾಡಿದ್ದಾರೆ.

4. ಪಂಜಾಬ್ ಚುನಾವಣೆಗೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ, ಪಂಜಾಬ್ ಮುಖ್ಯಮಂತ್ರಿ ಚರಣಜಿತ್‌ ಸಿಂಗ್ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದ್ದು, ಶುಕ್ರವಾರ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

5. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಇಂದು ಗೋವಾದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ತಮ್ಮ ಅಭ್ಯರ್ಥಿಗಳ ಪರವಾಗಿ ಮನೆ-ಮನೆ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮಂದಿರ, ಮಸೀದಿ, ಚರ್ಚ್‌ಗಳ ಮುಂದೆ ಪ್ರಮಾಣ ವಚನ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಕಲ್ಪ್ ಅಮೋನ್ಕರ್ ತಿಳಿಸಿದ್ದಾರೆ.

6. ಉತ್ತರಪ್ರದೇಶದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಅದರ ಮೈತ್ರಿ ಪಕ್ಷ ಅಪ್ನಾ ದಳ (ಕೆ) ನಡುವೆ ಬಿರುಕು ಹೆಚ್ಚುತ್ತಿದೆ. ಸೀಟು ಹಂಚಿಕೆಯಲ್ಲಿ ಅಪ್ನಾ ದಳ ನಿರೀಕ್ಷಿಸಿದ್ದ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ನಂತರ ಮೈತ್ರಿ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ತಲೆದೂರಿದೆ. ಶುಕ್ರವಾರ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಅಪ್ನಾ ದಳದ ನಾಯಕ ಪಲ್ಲವಿ ಪಟೇಲ್ ನಡುವೆ ಮಾತುಕತೆ ನಡೆಯಲಿದೆ. ನಂತರ, ಅಪ್ನಾ ದಳವು ಎಸ್‌ಪಿ ಜೊತೆ ಉಳಿಯುವುದೇ ಇಲ್ಲವೇ ಎಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

7. “ರೈತ ಆಂದೋಲನ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ಕನಿಷ್ಠ ಬೆಂಬಲ ಬೆಲೆಗಾಗಿ ಸಮಿತಿ ರಚಿಸಲು ಒಕ್ಕೂಟ ಸರ್ಕಾರ ಬದ್ಧವಾಗಿದೆ. ಆದರೆ, ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದಾಗಿ, ಚುನಾವಣೆ ಮುಗಿದ ನಂತರ ಸಮಿತಿಯನ್ನು ರಚಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣೆಯ ನಂತರ ಸಮಿತಿ ರಚಿಸಲಾಗುವುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

8. ಕಾಂಗ್ರೆಸ್ ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುವ ಅಗತ್ಯವೇ ಇರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಜ್ರಿವಾಲ್ ಅವರನ್ನು ‘ಛೋಟಾ ಮೋದಿ’ ಎಂದು ಗುರುವಾರ ಕರೆದಿದ್ದರು. ಈ ಕುರಿತು ಗೋವಾ ಚುನಾವಣಾ ಪ್ರಚಾರದಲ್ಲಿ ಪ್ರತಿಕ್ರಿಯಿಸಿದ ಕೇಜ್ರಿವಾಲ್, “ಅವರು ಹೀಗೆಲ್ಲ ಮಾತನಾಡುವ ಬದಲು ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...