Homeಮುಖಪುಟಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಸಾಧ್ಯತೆಯಿಲ್ಲ: ಮೂಲಗಳು

ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಸಾಧ್ಯತೆಯಿಲ್ಲ: ಮೂಲಗಳು

- Advertisement -
- Advertisement -

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ಚುನಾವಣೆಯನ್ನು ಮುಂದೂಡುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆಗಳ ಅವಧಿ ಮುಗಿಯುವ ಮೊದಲು ಸಾಂವಿಧಾನಿಕ ಆದೇಶದ ಪ್ರಕಾರ ಚುನಾವಣಾ ಆಯೋಗವು ವೇಳಾಪಟ್ಟಿ ನೀಡುವ ಸಾಧ್ಯತೆಯಿದೆ ಎಂದು NDTV ವರದಿ ಮಾಡಿದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

ಇದನ್ನೂ ಓದಿ: ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಮುಂಬರುವ ಚುನಾವಣೆಗಳ ಕುರಿತು ಚುನಾವಣಾ ಆಯೋಗವು ಆರೋಗ್ಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿದೆ. ಚುನಾವಣೆ ನಡೆಯಲಿರುವ ಪಂಚರಾಜ್ಯಗಳ ಲಸಿಕೆ ವ್ಯಾಪ್ತಿ ಮತ್ತು ಓಮಿಕ್ರಾನ್ ಪ್ರಕರಣಗಳ ವಿವರಗಳನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಸಿದ್ಧತೆಗಳ ಮೇಲ್ವಿಚಾರಣೆಗಾಗಿ ಸಿಇಸಿ ಸುಶೀಲ್ ಚಂದ್ರ ಮತ್ತು ಇಬ್ಬರು ಚುನಾವಣಾ ಅಧಿಕಾರಿಗಳನ್ನು ಒಳಗೊಂಡಿರುವ ಚುನಾವಣಾ ಆಯೋಗವು ಡಿಸೆಂಬರ್ 28 ರಿಂದ 30 ರ ನಡುವೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆಯೋಗವು ಈಗಾಗಲೇ ಗೋವಾ, ಪಂಜಾಬ್ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದೆ.

ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಕೋವಿಡ್ ವೇಗವಾಗಿ ಹರಡಲು ಕಾರಣವಾಗಿತ್ತು. ಈಗ ಉತ್ತರ ಪ್ರದೇಶ ರಾಜ್ಯದಲ್ಲಿ ಕೋವಿಡ್ ಪ್ರೊಟೋಕಾಲ್‌ಗಳನ್ನು ಅನುಸರಿಸಿ ಚುನಾವಣಾ ರ್‍ಯಾಲಿಗಳನ್ನು ನಡೆಸುವುದು ಅಸಾಧ್ಯ. ಹಾಗಾಗಿ ರ್‍ಯಾಲಿಗಳನ್ನೇ ರದ್ದುಗೊಳಿಸಿ ಒಂದೆರೆಡು ತಿಂಗಳು ಚುನಾವಣೆ ಮುಂದೂಡಬೇಕೆಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ ಮೂಂದೂಡಿ, ರ್ಯಾಲಿಗಳನ್ನು ರದ್ದುಗೊಳಿಸಿ: ಚುನಾವಣಾ ಆಯೋಗ, ಪ್ರಧಾನಿಗೆ ಹೈಕೋರ್ಟ್ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...