Homeಮುಖಪುಟಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

ಪಂಚರಾಜ್ಯ ಚುನಾವಣೆ: ಕಣದಲ್ಲಿರುವ ಹಲವು ಅಭ್ಯರ್ಥಿಗಳ ಮೇಲೆ ಗಂಭೀರ ಅಪರಾಧ ಆರೋಪ

- Advertisement -
- Advertisement -

ಫೆಬ್ರವರಿ 14ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರಖಂಡ ಮತ್ತು ಗೋವಾ ಹಾಗೂ ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್‍ ಚುನಾವಣಾ ಕಣದಲ್ಲಿರುವ 2,207 ಅಭ್ಯರ್ಥಿಗಳಲ್ಲಿ 491 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ಇವರಲ್ಲಿ ಹಲವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಚುನಾವಣಾ ಆಯೋಗದ ದಾಖಲೆ ಪ್ರಕಾರ ಪಂಜಾಬ್‍ನ 117 ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿರುವ 1285 ಅಭ್ಯರ್ಥಿಗಳ ಪೈಕಿ 312 ಮಂದಿ, ಉತ್ತರಖಂಡದ 70 ಕ್ಷೇತ್ರಗಳಲ್ಲಿ 632 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 106 ಮಂದಿಗೆ ಅಪರಾಧ ಹಿನ್ನೆಲೆ ಇದೆ. ಗೋವಾದ 40 ಸ್ಥಾನಗಳಿಗೆ 301 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈ ಪೈಕಿ 80 ಮಂದಿ ಕ್ರಿಮಿನಲ್ ಹಿನ್ನೆಲೆ ಕುರಿತ ದಾಖಲೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ಪಂಜಾಬ್‍ನ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳ ಪೈಕಿ ಶೇ.13 ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯ ಹಾಗೂ ಉತ್ತರಖಂಡ ಮತ್ತು ಗೋವಾದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇ.10 ರಿಂದ 16ರಷ್ಟು ಮಂದಿ ಗಂಭೀರ ಅಪರಾಧ ಪ್ರಕರಣಗಳ ಆರೋಪ ಹೊತ್ತಿರುವುದು ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿರುವ ಅಫಿಡವಿಟ್ ಪರಿಶೀಲನೆ ವೇಳೆ ತಿಳಿದು ಬಂದಿರುವ ಬಗ್ಗೆ ಪ್ರಿಂಟ್ ವರದಿ ಮಾಡಿದೆ.

ದಾಖಲೆಗಳಲ್ಲಿ ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ, ಅತ್ಯಾಚಾರ, ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಪ್ರಕರಣ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳು, ಅಪಹರಣ ಮತ್ತು ಸುಲಿಗೆಯಂಥ ಪ್ರಕರಣಗಳನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗಿದೆ.

8 ಅಭ್ಯರ್ಥಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳಿದ್ದು, ಇವರಲ್ಲಿ ಪಂಜಾಬ್‍ನ ಮೂವರು, ಉತ್ತರಖಂಡದ ಒಬ್ಬರು, ಗೋವಾದ ನಾಲ್ವರು ಇದ್ದಾರೆ. ಧಾರ್ಮಿಕ ಅಸಂಗತತೆ, ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವಂಥ ಪ್ರಕರಣಗಳನ್ನು ಎದುರಿಸುತ್ತಿರುವ 19 ಅಭ್ಯರ್ಥಿಗಳ ಪೈಕಿ ತಲಾ 9 ಮಂದಿ ಪಂಜಾಬ್ ಮತ್ತು ಉತ್ತರಖಂಡದವರಾಗಿದ್ದು, ಒಬ್ಬರು ಗೋವಾದವರಾಗಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಪಂಜಾಬ್‍ನ ಕ್ರಿಮಿನಲ್ ಹಿನ್ನೆಲೆಯ 312 ಅಭ್ಯರ್ಥಿಗಳ ಪೈಕಿ ಶೇ.12.9ರಷ್ಟು ಮಂದಿ ಗಂಭೀರ ಆರೋಪ ಹೊತ್ತಿದ್ದಾರೆ. ನಾಲ್ವರು ಅಭ್ಯರ್ಥಿಗಳು ಕೊಲೆ ಪ್ರಕರಣ, ಇಬ್ಬರು ಅಪರಾಧಿ ನರಹತ್ಯೆ, 24 ಮಂದಿ ಕೊಲೆ ಯತ್ನ, ಇಬ್ಬರು ಅತ್ಯಾಚಾರ ಪ್ರಕರಣ, ಇಬ್ಬರು ಅಪಹರಣ ಪ್ರಕರಣ, ಐವರು ಮಹಿಳೆಯರ ಮೇಲಿನ ದೌರ್ಜನ್ಯ, ಇಬ್ಬರು ಅಭ್ಯರ್ಥಿಗಳು ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದಾರೆ. 8 ಮಂದಿ ಮೇಲೆ ಮಾದಕ ವಸ್ತು ಸಂಬಂಧಿತ ಪ್ರಕರಣಗಳಿವೆ. ಒಬ್ಬರು ತೆರಿಗೆ ವಂಚನೆ, ಇಬ್ಬರು ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸುತ್ತಿರುವ ಬಗ್ಗೆ ಅಫಿಡವಿಟ್‍ನಲ್ಲಿ ಮಾಹಿತಿ ಇದೆ.

ಉತ್ತರಖಂಡ ರಾಜ್ಯದಲ್ಲಿ ಕ್ರಿಮಿನಲ್ ದಾಖಲೆ ಇರುವ 106 ಅಭ್ಯರ್ಥಿಗಳ ಪೈಕಿ ಶೇ.10.4ರಷ್ಟು ಮಂದಿ ಗಂಭೀರ ಆರೋಪ ಹೊಂದಿದ್ದಾರೆ. ಕೊಲೆ, ಕೊಲೆ ಯತ್ನ, ಅಪರಾಧಿ ನರಹತ್ಯೆ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಒಬ್ಬೊಬ್ಬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ವರು ಮಹಿಳೆ ಗೌರವಕ್ಕೆ ಧಕ್ಕೆ ಪ್ರಕರಣ ಘೋಷಿಸಿದ್ದಾರೆ. ಇಬ್ಬರು ಅಭ್ಯರ್ಥಿಗಳು ಸುಲಿಗೆ ಪ್ರಕರಣ ಎದುರಿಸುತ್ತಿದ್ದಾರೆ. ಒಬ್ಬರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಘೋಷಿಸಿದ್ದಾರೆ.

ಗೋವಾದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ 80 ಅಭ್ಯರ್ಥಿಗಳ ಪೈಕಿ ಶೇ.16.25ರಷ್ಟು ಮಂದಿ ಗಂಭೀರ ಆರೋಪದ ಪ್ರಕರಣ ಎದುರಿಸುತ್ತಿದ್ದು, ಈ ಪೈಕಿ ನಾಲ್ವರು ಕೊಲೆ ಯತ್ನದ ಪ್ರಕರಣಗಳಿರುವ ಬಗ್ಗೆ ಅಫಿಡವಿತ್ನಲ್ಲಿ ಮಾಹಿತಿ ಇದೆ. ಒಬ್ಬರು ಅತ್ಯಾಚಾರ, ಐವರ ವಿರುದ್ಧ ಮಹಿಳೆ ಗೌರವಕ್ಕೆ ಧಕ್ಕೆ, ಮೂವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ CPI(M) 

ಇದೇ ರೀತಿ ಮೂರು ರಾಜ್ಯಗಳಲ್ಲಿ ಹಲವು ಅಭ್ಯರ್ಥಿಗಳು ಬೇರೆ ಬೇರೆ ರೀತಿಯ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ವಂಚನೆ ಮತ್ತು ನಕಲಿ ಪ್ರಕರಣಗಳನ್ನು ಎದುರಿಸುತ್ತಿರುವ ಒಟ್ಟು 48 ಅಭ್ಯರ್ಥಿಗಳಿದ್ದು, ಪಂಜಾಬ್‌ನಲ್ಲಿ 33, ಉತ್ತರಾಖಂಡದಲ್ಲಿ ಏಳು ಮತ್ತು ಗೋವಾದಲ್ಲಿ ಎಂಟು ಜನರಿದ್ದಾರೆ.

ಅಫಿಡವಿಟ್‍ಗಳ ಪ್ರಕಾರ ಮೂರು ರಾಜ್ಯಗಳಲ್ಲಿ ಎಲ್ಲಾ ಪ್ರಮುಖ ಪಕ್ಷಗಳು, ಕ್ರಿಮಿನಲ್ ಹಿನ್ನೆಲೆ ಹೊಂದಿರುವವರನ್ನು ಕಣಕ್ಕಿಳಿಸಿರುವ ಬಗ್ಗೆ ದಾಖಲೆಗಳು ಹೇಳಿವೆ. ಉಳಿದಂತೆ ಉತ್ತರ ಪ್ರದೇಶ ರಾಜ್ಯವು ಏಳು ಹಂತಗಳಲ್ಲಿ ಚುನಾವಣೆ ಎದುರಿಸುತ್ತಿರುವುದರಿಂದ ಅಲ್ಲಿನ ದತ್ತಾಂಶವನ್ನು ಆಯೋಗವು ಕಂತುಗಳಲ್ಲಿ ಪರಿಶೀಲಿಸಲಿದೆ.

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‍ಗಳಲ್ಲಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...