Homeಮುಖಪುಟಪಂಚರಾಜ್ಯ ಚುನಾವಣೆ: ಶನಿವಾರದ ಹೈಲೈಟ್ಸ್‌‌!

ಪಂಚರಾಜ್ಯ ಚುನಾವಣೆ: ಶನಿವಾರದ ಹೈಲೈಟ್ಸ್‌‌!

- Advertisement -
- Advertisement -

ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿವೆ. ಚುನಾವಣೆಗೆ ಸಂಬಂಧಿಸಿದಂತೆ ಶನಿವಾರದಂದು ರಾಜಕೀಯ ವಲಯದಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಅಂಶಗಳು ಇಲ್ಲಿವೆ.

  • ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಗರಾಜ್ ಜಿಲ್ಲೆಯ ಸಿರತು ನಗರದಿಂದ ಸ್ಪರ್ಧಿಸಲಿದ್ದಾರೆ.
  • ಚುನಾವಣೆಯ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ:ಸುಭಾಷ್‌ ಚಂದ್ರ ಬೋಸ್‌ ಜನ್ಮದಿನ ಒಳಗೊಂಡಂತೆ ಗಣರಾಜ್ಯೋತ್ಸವ ಆಚರಣೆ: ವರದಿ

  • ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ತಳ್ಳಿಹಾಕಿದ್ದಾರೆ. ಯಾದವ್ ಅವರು “ಬಹುಜನ ಸಮಾಜ” ಅಥವಾ ದಲಿತ ಸಮುದಾಯದ ಸದಸ್ಯರನ್ನು ಅವಮಾನಿಸಿದ್ದಾರೆ ಎಂದು ಆಜಾದ್ ಆರೋಪಿಸಿದ್ದಾರೆ.
  • ಉತ್ತರ ಪ್ರದೇಶ ಚುನಾವಣೆಗೆ 53 ಅಭ್ಯರ್ಥಿಗಳಿರುವ ಮೊಲದ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಇನ್ನೆರಡು ದಿನದಲ್ಲಿ ಉಳಿದ ಐವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
  • ಈ ಮಧ್ಯೆ, ಚಾರ್ತಾವಾಲ್ ನಗರದಿಂದ ತಮಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಬಿಎಸ್ಪಿ ಪಕ್ಷದ ಹಿರಿಯ ನಾಯಕರು 67 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಬಿಎಸ್ಪಿ ನಾಯಕ ಅರ್ಷದ್ ರಾಣಾ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

  • ಉತ್ತರ ಪ್ರದೇಶದ ಮಹಿಳಾ ಸಂಘಟನೆ ಗುಲಾಬಿ ಗ್ಯಾಂಗ್‌ನ ಸಂಸ್ಥಾಪಕಿ ಸಂಪತ್ ಪಾಲ್ ದೇವಿ ಅವರು ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲಿರುವ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿತ್ತು.
  • ಪಂಜಾಬ್ ಅಸೆಂಬ್ಲಿಯ 117 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ ಕೇವಲ 12 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ವರದಿಯಾಗಿದೆ. ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 1,000 ರೂ. ಪ್ರೋತ್ಸಾಹ ಧನ ನೀಡುವುದಾಗಿ ಪಕ್ಷವು ಭರವಸೆ ನೀಡಿದೆ. ಆದರೆ, ಮಹಿಳೆಯರಿಗೆ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಿಲ್ಲ ಎಂಬುದು ಆಶ್ಚರ್ಯಕರವಾಗಿದೆ.
  • ಪಂಜಾಬ್ ಸಚಿವ ಜೋಗಿಂದರ್ ಮಾನ್ ಅವರು ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಸ್‌ಸಿ ವಿದ್ಯಾರ್ಥಿವೇತನ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಮತ್ತು ಫಗ್ವಾರ ಅವರಿಗೆ ಜಿಲ್ಲಾ ಸ್ಥಾನಮಾನ ನೀಡದಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಮಾನ್ ಅವರು ಪಕ್ಷ ತೊರೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಸುಭಾಷ್‌ ಚಂದ್ರ ಬೋಸ್‌ ಜನ್ಮದಿನ ಒಳಗೊಂಡಂತೆ ಗಣರಾಜ್ಯೋತ್ಸವ ಆಚರಣೆ: ವರದಿ

  • ಪಂಜಾಬ್‌ನಲ್ಲಿ ಕಾಂಗ್ರೆಸ್ ತನ್ನ 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
  • ಮುಖ್ಯವಾಗಿ ಚಮ್ಕೌರ್ ಸಾಹಿಬ್‌ನಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಅಮೃತಸರ ಪೂರ್ವದಿಂದ ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು ಪಕ್ಷವು ಕಣಕ್ಕಿಳಿಸಿದೆ.
  • ಪಂಜಾಬ್‌‌ ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಅವರು ಡೇರಾ ಬಾಬಾ ನಾನಕ್‌ನಿಂದ ಮತ್ತು ಅಮೃತಸರ ಸೆಂಟ್ರಲ್‌ನಿಂದ ಓಂ ಪ್ರಕಾಶ್ ಸೋನಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ. ಈ ಎರಡು ಕ್ಷೇತ್ರ ಕೂಡಾ ಅವರು ಈಗಾಗಲೇ ಪ್ರತಿನಿಧಿಸುತ್ತಿರುವ ಕ್ಷೇತ್ರವಾಗಿದೆ.

ಇದನ್ನೂ ಓದಿ:ಸಂವಿಧಾನ, ಸುಪ್ರೀಂ ಕೋರ್ಟ್ ಮೇಲೆ ನಂಬಿಕೆ ಇಲ್ಲ: ಮತ್ತೆ ನಾಲಿಗೆ ಹರಿಬಿಟ್ಟ ಯತಿ ನರಸಿಂಗಾನಂದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...