ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ ಶನಿವಾರ ಬೆಳಿಗ್ಗೆ ಇಂಫಾಲ್‌ನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯದ ವಕೀಲರ ಸಮುದಾಯವು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ತಲುಪಿದ
ನ್ಯಾಯಮೂರ್ತಿಗಳು ಬೆಳಿಗ್ಗೆ 10.40 ರ ಸುಮಾರಿಗೆ ಚುರಾಚಂದ್‌ಪುರ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್‌ನಿಂದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಕಾನೂನು ಸೇವಾ ಶಿಬಿರಗಳು, ಕಾನೂನು ನೆರವು ಘಟಕಗಳು ಮತ್ತು ತಾತ್ಕಾಲಿಕ ವೈದ್ಯಕೀಯ ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಷ್ಣುಪುರದ ಮೊಯಿರಾಂಗ್ ಕಾಲೇಜಿನಲ್ಲಿರುವ ಪರಿಹಾರ ಶಿಬಿರಕ್ಕೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ನಾವು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ಈಗಷ್ಟೆ ಇಲ್ಲಿಗೆ ಬಂದಿದ್ದು, ಜನರ ಭೇಟಿಗಾಗಿ ಎದುರು ನೋಡುತ್ತಿದ್ದೇವೆ” ಎಂದು ಭೇಟಿ ನೀಡಿದ ನ್ಯಾಯಮೂರ್ತಿಗಳಲ್ಲಿ ಒಬ್ಬರು ವರದಿಗಾರರಿಗೆ ತಿಳಿಸಿದ್ದಾರೆ. ಮಣಿಪುರ ತಲುಪಿದ
ಮೈತೇಯಿ ಸಮುದಾಯಕ್ಕೆ ಸೇರಿದ ನಿಯೋಗದ ಭಾಗವಾಗಿರುವ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್, ಕುಕಿ ಬಹುಸಂಖ್ಯಾತ ಚುರಾಚಂದ್‌ಪುರ ಜಿಲ್ಲೆಗೆ ಭೇಟಿ ನೀಡುವುದಿಲ್ಲ ಎಂದು ವರದಿಯಾಗಿದ್ದು, ಅಲ್ಲಿನ ವಕೀಲರ ಸಂಘದ ಆಕ್ಷೇಪಣೆಯ ನಡುವೆ, ನ್ಯಾಯಮೂರ್ತಿ ಕೋಟೀಶ್ವರ್ ಸಿಂಗ್ ಅವರು ಬಿಷ್ಣುಪುರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್‌ನ ಮೈತೇಯಿ ನ್ಯಾಯಮೂರ್ತಿ ಕುಕಿ-ಝೋ ಪ್ರಾಬಲ್ಯದ ಪ್ರದೇಶಕ್ಕೆ ಭೇಟಿ ನೀಡುವುದನ್ನು ತಡೆಯುವ ತನ್ನ ನಿರ್ದೇಶನವನ್ನು ಹಿಂಪಡೆಯುವಂತೆ ಆಲ್ ಮಣಿಪುರ ಬಾರ್ ಅಸೋಸಿಯೇಷನ್ (AMBA) ತನ್ನ ಚುರಾಚಂದ್‌ಪುರ ಜಿಲ್ಲಾ ಘಟಕಕ್ಕೆ ಒತ್ತಾಯಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಈ ಭೇಟಿ ಐತಿಹಾಸಿಕವಾಗಿದ್ದು, ಈ ರೀತಿಯ ಭೇಟಿ ಮೊದಲನೆಯ ಭಾರಿಗೆ ನಡೆಯುತ್ತಿದೆ ಎಂದು AMBA ಅಧ್ಯಕ್ಷ ಪುಯಮ್ ತೋಮ್ಚಾ ಮೈತೇಯಿ ಪಿಟಿಐಗೆ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಭಾನುವಾರ ಮಣಿಪುರದ ಹೈಕೋರ್ಟ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇ 2023 ರಿಂದ ಇಂಫಾಲ್ ಕಣಿವೆಯ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ಇರುವ ಕುಕಿ-ಝೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ
“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

