Homeಮುಖಪುಟಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

- Advertisement -
- Advertisement -

ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ ಶನಿವಾರ ಬೆಳಿಗ್ಗೆ ಇಂಫಾಲ್‌ನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯದ ವಕೀಲರ ಸಮುದಾಯವು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ತಲುಪಿದ

ನ್ಯಾಯಮೂರ್ತಿಗಳು ಬೆಳಿಗ್ಗೆ 10.40 ರ ಸುಮಾರಿಗೆ ಚುರಾಚಂದ್‌ಪುರ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್‌ನಿಂದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಕಾನೂನು ಸೇವಾ ಶಿಬಿರಗಳು, ಕಾನೂನು ನೆರವು ಘಟಕಗಳು ಮತ್ತು ತಾತ್ಕಾಲಿಕ ವೈದ್ಯಕೀಯ ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಷ್ಣುಪುರದ ಮೊಯಿರಾಂಗ್ ಕಾಲೇಜಿನಲ್ಲಿರುವ ಪರಿಹಾರ ಶಿಬಿರಕ್ಕೆ ಹೋಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ಈಗಷ್ಟೆ ಇಲ್ಲಿಗೆ ಬಂದಿದ್ದು, ಜನರ ಭೇಟಿಗಾಗಿ ಎದುರು ನೋಡುತ್ತಿದ್ದೇವೆ” ಎಂದು ಭೇಟಿ ನೀಡಿದ ನ್ಯಾಯಮೂರ್ತಿಗಳಲ್ಲಿ ಒಬ್ಬರು ವರದಿಗಾರರಿಗೆ ತಿಳಿಸಿದ್ದಾರೆ. ಮಣಿಪುರ ತಲುಪಿದ

ಮೈತೇಯಿ ಸಮುದಾಯಕ್ಕೆ ಸೇರಿದ ನಿಯೋಗದ ಭಾಗವಾಗಿರುವ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್, ಕುಕಿ ಬಹುಸಂಖ್ಯಾತ ಚುರಾಚಂದ್‌ಪುರ ಜಿಲ್ಲೆಗೆ ಭೇಟಿ ನೀಡುವುದಿಲ್ಲ ಎಂದು ವರದಿಯಾಗಿದ್ದು, ಅಲ್ಲಿನ ವಕೀಲರ ಸಂಘದ ಆಕ್ಷೇಪಣೆಯ ನಡುವೆ, ನ್ಯಾಯಮೂರ್ತಿ ಕೋಟೀಶ್ವರ್‌ ಸಿಂಗ್ ಅವರು ಬಿಷ್ಣುಪುರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಮೈತೇಯಿ ನ್ಯಾಯಮೂರ್ತಿ ಕುಕಿ-ಝೋ ಪ್ರಾಬಲ್ಯದ ಪ್ರದೇಶಕ್ಕೆ ಭೇಟಿ ನೀಡುವುದನ್ನು ತಡೆಯುವ ತನ್ನ ನಿರ್ದೇಶನವನ್ನು ಹಿಂಪಡೆಯುವಂತೆ ಆಲ್ ಮಣಿಪುರ ಬಾರ್ ಅಸೋಸಿಯೇಷನ್ ​​(AMBA) ತನ್ನ ಚುರಾಚಂದ್‌ಪುರ ಜಿಲ್ಲಾ ಘಟಕಕ್ಕೆ ಒತ್ತಾಯಿಸಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಈ ಭೇಟಿ ಐತಿಹಾಸಿಕವಾಗಿದ್ದು, ಈ ರೀತಿಯ ಭೇಟಿ ಮೊದಲನೆಯ ಭಾರಿಗೆ ನಡೆಯುತ್ತಿದೆ ಎಂದು AMBA ಅಧ್ಯಕ್ಷ ಪುಯಮ್ ತೋಮ್ಚಾ ಮೈತೇಯಿ ಪಿಟಿಐಗೆ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಭಾನುವಾರ ಮಣಿಪುರದ ಹೈಕೋರ್ಟ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೇ 2023 ರಿಂದ ಇಂಫಾಲ್ ಕಣಿವೆಯ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ಇರುವ ಕುಕಿ-ಝೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...