Homeಮುಖಪುಟಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

- Advertisement -
- Advertisement -

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. 

ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಗಿರ್ಡರ್‌ನ ಮೇಲಿನ ಭಾಗವನ್ನು ಹಿಡಿದಿಡಲು ಎರಡು ಕಂಬಗಳ ನಡುವೆ ಇರಿಸಲಾದ ತಾತ್ಕಾಲಿಕ ಆಧಾರವು ಇದ್ದಕ್ಕಿದ್ದಂತೆ ಜಾರಿಬಿದ್ದು, ಇಡೀ ರಚನೆಯು ಕುಸಿದು ಬಿದ್ದಿದೆ. ಗಿರ್ಡರ್ ಬಳಿ ನಿಂತಿದ್ದ ಕಾರ್ಮಿಕರು ಕೆಳಗೆ ಸಿಲುಕಿಕೊಂಡು ಗಾಯಗೊಂಡಿದ್ದಾರೆ. 

ಗಾಯಾಳುಗಳನ್ನು ತ್ವರಿತವಾಗಿ ರಕ್ಷಿಸಿ 108 ಆಂಬ್ಯುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಲ್ಸಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯುವರಾಜ್‌ಸಿನ್ಹ ಜಡೇಜಾ ಮಾತನಾಡಿ, ಈ ಯೋಜನೆಯ ಭಾಗವಾಗಿ ಕೇವಲ 15 ದಿನಗಳ ಹಿಂದೆ ಗಿರ್ಡರ್ ಅಳವಡಿಸಲಾಗಿದೆ. “ಎರಡು ಕಂಬಗಳ ನಡುವಿನ ಗಾರ್ಡ್‌ರೈಲ್ ಬೆಂಬಲ ಜಾರಿದ ಕಾರಣ ಈ ದುರದೃಷ್ಟಕರ ಅಪಘಾತ ಸಂಭವಿಸಿದೆ” ಎಂದು ಅವರು ತಿಳಿಸಿದ್ದಾರೆ. 

“ಸೇತುವೆ ನಿರ್ಮಾಣದ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ನಾಲ್ವರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಸುರಕ್ಷತಾ ಉಪಕರಣಗಳು ಸ್ಥಳದಲ್ಲಿದ್ದವು. ಸರ್ಕಾರಿ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ರಸ್ತೆ ಮತ್ತು ಕಟ್ಟಡ ಇಲಾಖೆಯ ಅಧಿಕಾರಿ ಜಿಗರ್ ಪಟೇಲ್ ಹೇಳಿದ್ದಾರೆ.

ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಲ್ಸಾದ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ವಿಮಲ್ ಪಟೇಲ್, “ಸ್ಥಳದಲ್ಲಿ 105 ಕಾರ್ಮಿಕರು ಇದ್ದರು. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ” ಎಂದು ಹೇಳಿದ್ದಾರೆ. 

ಹಠಾತ್ ಕುಸಿತವು ಕಾರ್ಮಿಕರು ಮತ್ತು ದಾರಿಹೋಕರಲ್ಲಿ ಭೀತಿಯನ್ನು ಉಂಟುಮಾಡಿತು. ಕೆಲವೇ ನಿಮಿಷಗಳಲ್ಲಿ, ಸ್ಥಳದಲ್ಲಿ ದೊಡ್ಡ ಜನಸಮೂಹ ಜಮಾಯಿಸಿತು. ಮಮ್ಲತ್‌ದಾರ್ ಮತ್ತು ಸ್ಥಳೀಯ ಪೊಲೀಸರು ಸೇರಿದಂತೆ ಆಡಳಿತ ಅಧಿಕಾರಿಗಳು ಶೀಘ್ರದಲ್ಲೇ ಪರಿಹಾರ ಮತ್ತು ತನಿಖಾ ಪ್ರಯತ್ನಗಳ ಮೇಲ್ವಿಚಾರಣೆಗೆ ಆಗಮಿಸಿದರು.

ಸುಮಾರು 20 ಕೋಟಿ ರೂ. ವೆಚ್ಚದ ಹೊಸ ಸೇತುವೆಯನ್ನು ಉಪಗುತ್ತಿಗೆದಾರರೊಬ್ಬರು ನಿರ್ಮಿಸುತ್ತಿದ್ದಾರೆ. ಕಳೆದ ವರ್ಷಗಳ ಹಿಂದೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಟ್ಟಡ ಕುಸಿತಕ್ಕೆ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...