Homeಮುಖಪುಟಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

- Advertisement -
- Advertisement -

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240 ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI), ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಘಟನೆಯು ಸಂಪರ್ಕ ಇಟ್ಟುಕೊಂಡಿದೆ ಎಂದು ಸರ್ಕಾರ ಉಲ್ಲೇಖಿಸಿದ್ದು, ಹಲವಾರು ಕ್ರಿಮಿನಲ್ ಮತ್ತು ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ‘ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆ’ಗೆ ಧಕ್ಕೆ ತರುತ್ತದೆ. ಅಲ್ಲದೆ ಸಂಘಟನೆಯು ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದ ಕದಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದೆ.

ಇದನ್ನೂ ಓದಿ: ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಸಮಾಜದ ಒಂದು ನಿರ್ದಿಷ್ಟ ವರ್ಗವನ್ನು ತೀವ್ರಗಾಮಿಯನ್ನಾಗಿಸಲು PFI ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ. ಅಲ್ಲದೆ ದೇಶದ ಸಾಂವಿಧಾನಿಕ ಅಧಿಕಾರದ ಕಡೆಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರ ಹೇಳಿದೆ.

“ಹೊರಗಿನ ನಿಧಿ ಮತ್ತು ಸೈದ್ಧಾಂತಿಕ ಬೆಂಬಲದೊಂದಿಗೆ, ಇದು ದೇಶದ ಆಂತರಿಕ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ” ಎಂದು ಅಧಿಸೂಚನೆಯಲ್ಲಿ ಸರ್ಕಾರ ಹೇಳಿದೆ.

ಸಾರ್ವಜನಿಕ ಮನಸ್ಸಿನಲ್ಲಿ ಭಯೋತ್ಪಾದನೆಯ ಆಳ್ವಿಕೆಯನ್ನು ಸೃಷ್ಟಿಸಲು ಪಿಎಫ್‌ಐ ಸದಸ್ಯರು ಈ ಹಿಂದೆ ಹಲವಾರು ಅಪರಾಧ ಚಟುವಟಿಕೆಗಳು ಮತ್ತು ಕ್ರೂರ ಕೊಲೆಗಳನ್ನು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಸಂಘಟನೆಯನ್ನು ನಿಷೇಧಿಸಲು ಶಿಫಾರಸು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

15 ರಾಜ್ಯಗಳಾದ್ಯಂತ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿದ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸರ ಸಂಘಟಿತ ಕ್ರಮದಲ್ಲಿ ಸೆಪ್ಟೆಂಬರ್ 22 ರಂದು ಮೊದಲ ಬಾರಿಗೆ ದಾಳಿ ನಡೆಸಿ 100 ಕ್ಕೂ ಹೆಚ್ಚು ಜನರನ್‌ಉ ಬಂಧಿಸಲಾಗಿತ್ತು.

ಇದರ ನಂತರ ಸಂಘಟನೆಯ ವಿರುದ್ಧ ರಾಷ್ಟ್ರವ್ಯಾಪಿ ಎರಡನೇ ಸುತ್ತಿನ ಕಾರ್ಯಾಚರಣೆಯನ್ನು ನಿನ್ನೆ ನಡೆಸಲಾಗಿತ್ತು. ಈವರೆಗೆ ಒಟ್ಟು 247 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಜೊತೆಗೆ, ಅದರ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್(NWF), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್-ಕೇರಳ ಸಂಘಟನೆಗಳನ್ನು ಕೂಡಾ ನಿಷೇಧಿಸಲಾಗಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಬಿಜೆಪಿ ಸರ್ಕಾರ ತಮ್ಮ ವಿರೋಧಿಗಳನ್ನು ಹಣಿಯುವುದಕ್ಕೆ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್ ಹೇಳಿದ್ದಾರೆ.

“ಈ ಹಿಂದೆ ಇಂದಿರಾ ಗಾಂಧಿ ಕೂಡಾ ಹೀಗೆಯೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದರು. ಕಾಂಗ್ರೆಸ್ ಕೂಡಾ ಮಾಡಿತ್ತು, ಅದನ್ನೇ ಬಿಜೆಪಿ ಕೂಡಾ ಮಾಡುತ್ತಿದೆ. ನಿಷೇಧವನ್ನು ಖಂಡಿಸಿ ಪಕ್ಷದ ವತಿಯಿಂದ ನಡೆಸಿದ ಶಾಂತಿಯುತ ಪ್ರತಿಭಟನೆಗೂ ಸರ್ಕಾರ ಅವಕಾಶ ನೀಡದೆ ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ. ಇದು ಅಘೋಷಿತ ತುರ್ತ ಪರಿಸ್ಥಿತಿಯ ಮತ್ತೊಂದು ರೂಪ” ಎಂದು ಭಾಸ್ಕರ್‌ ಪ್ರಸಾದ್ ಅವರು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...