Homeಮುಖಪುಟಐದು ವರ್ಷ ಬಾಲಕಿಯ ಮೇಲೆ ಅತ್ಯಾಚಾರ - ಶಿಕ್ಷಕನ ಬಂಧನ

ಐದು ವರ್ಷ ಬಾಲಕಿಯ ಮೇಲೆ ಅತ್ಯಾಚಾರ – ಶಿಕ್ಷಕನ ಬಂಧನ

- Advertisement -
- Advertisement -

ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ಶಿಕ್ಷಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮೀರತ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಿಕ್ಷಾಮಿತ್ರ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಶಿಕ್ಷಕನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶಾಲೆಗೆ ಪ್ರವೇಶ ಮಾಡಿಕೊಳ್ಳುವ ಸಂಬಂಧ ಸಂತ್ರಸ್ತೆ ಮತ್ತು ಇತರೆ ಕೆಲವು ಬಾಲಕಿಯರನ್ನು ಆರೋಪಿ ಶಿಕ್ಷಕ ಶಾಲೆಗೆ ಕರೆತಂದಿದ್ದನು. ನಂತರ ಇತರರನ್ನು ಮನೆಗೆ ಹೋಗುವಂತೆ ಹೇಳಿ ಸಂತ್ರಸ್ತೆಯನ್ನು ಶಾಲೆಯಲ್ಲೇ ಉಳಿಯುವಂತೆ ಹೇಳಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಬಾಲಕಿ ಹೇಗೋ ಮನೆಗೆ ತಲುಪಿ ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ಪೋಷಕರಿಗೆ ತಿಳಿಸಿದೆ. ಇದರಿಂದ ಕೋಪಗೊಂಡ ಪೋಷಕರು ಸ್ಥಳೀಯರೊಂದಿಗೆ ಶಾಲೆಗೆ ಆಗಮಿಸಿ ಶಿಕ್ಷಕರನ್ನು ಕೋಣೆಗೆ ಕೂಡಿಹಾಕಿ ಬಿಗ ಜಡಿದು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಬಂಧಿಸಲಾಗಿದೆ. ಘಟನೆಯ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮೀರತ್ ಗ್ರಾಮೀಣ ಪೋಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ರಾಜ್ಯದ ಬಿಜೆಪಿ  ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ; ವಿಡಿಯೋ ನೋಡಿ:

ಯಡಿಯೂರಪ್ಪ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಆಕ್ರೋಶ…

Posted by Naanu Gauri on Tuesday, September 22, 2020

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...