ಕಳೆದ ನಾಲ್ಕು ದಿನಗಳ ಹಿಂದೆ ಮಧ್ಯಪ್ರದೇಶದ ನಿವಾರಿ ಜಿಲ್ಲೆಯಲ್ಲಿ 200 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಐದು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸತತ 90 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯ ನಂತರವೂ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಕರ್ತರ ತಂಡವು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬಾಲಕನನ್ನು ಕೊಳವೆ ಬಾವಿಯಿಂದ ಹೊರತೆಗೆದಿದ್ದಾರೆ. ಆದರೆ ಆಸ್ಪತ್ರೆ ತಲುಪುವ ಮೊದಲೇ ಬಾಲಕ ಪ್ರಹ್ಲಾದ್ ಮೃತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.
दुःख की इस घड़ी में, मैं एवं पूरा प्रदेश प्रहलाद के परिवार के साथ खड़ा है और मासूम बेटे की आत्मा की शांति के लिए प्रार्थना कर रहा है।
सरकार द्वारा प्रहलाद के परिवार को ₹5 लाख का मुआवज़ा दिया जा रहा है, एवं उनके खेत में एक नया बोरवेल भी बनाया जाएगा।
— Shivraj Singh Chouhan (@ChouhanShivraj) November 8, 2020
ಇದನ್ನೂ ಓದಿ: ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?
ರೈತ ಹರಿಕೃಷ್ಣನ್ ಕುಶ್ವಾಹ ಅವರ ಮಗ ಪ್ರಹ್ಲಾದ್, ಬುಧವಾರ ಬೆಳಿಗ್ಗೆ ನಿವಾರಿ ಜಿಲ್ಲೆಯ ಸೈತ್ಪುರಾ (ಬರಾಹ್‌ಬುಜುರ್ಗ್) ಗ್ರಾಮದಲ್ಲಿರುವ ತನ್ನ ತಂದೆಯ ಹೊಲದಲ್ಲಿ ಹೊಸದಾಗಿ ತೋಡಿದ್ದ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದನು.
200 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಾಲಕ ಪ್ರಹ್ಲಾದ್, 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿತ್ತು. ಆದರೆ, ಕಳೆದ ಮೂರು ದಿನಗಳಿಂದ ಯಾವುದೇ ಚಲನವಲನ ಕಾಣಿಸುತ್ತಿರಲಿಲ್ಲ ಎಂದು ಜಿಲ್ಲಾಧಿಕಾರಿ ಆಶಿಶ್ ಭಾರ್ಗವ ತಿಳಿಸಿದ್ದಾರೆ.
ಬಾಲಕನ ರಕ್ಷಣೆಗಾಗಿ ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತಿತ್ತು. ಸತತ ಸುಮಾರು 90 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 80 ರಕ್ಷಣಾ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಆದರೂ ಆತನನ್ನು ಉಳಿಸಲಾಗಲಿಲ್ಲ ಎಂದು ಆಶಿಶ್ ಭಾರ್ಗವ ಹೇಳಿದರು.
ದುರಂತದ ಕುರಿತು ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಾಲಕ, ’ಬೋರ್‌ವೆಲ್‌ಗಳನ್ನು ಕೊರೆಸುವ ಎಲ್ಲರಿಗೂ ನಾನು ಪ್ರಾರ್ಥಿಸುತ್ತೇನೆ, ಅವರು ಯಾವುದೇ ಸಮಯದಲ್ಲಿ ಬೋರ್‌ವೆಲ್‌ಗಳನ್ನು ತೆರೆದಿರಬೇಡಿ. ನಿಮ್ಮ ಸುತ್ತಮುತ್ತಲಿನ ಬೋರ್‌ವೆಲ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಿ. ಈ ಹಿಂದೆ ಕೂಡ ಹಲವು ಮುಗ್ದರು ಇಂತಹ ದುರಂತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಎಚ್ಚರಿಸಿದ್ದಾರೆ.


