Homeಮುಖಪುಟಮಧ್ಯಪ್ರದೇಶ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ಮಧ್ಯಪ್ರದೇಶ: 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳ ಹಿಂದೆ ಮಧ್ಯಪ್ರದೇಶದ ನಿವಾರಿ ಜಿಲ್ಲೆಯಲ್ಲಿ 200 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಐದು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸತತ 90 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯ ನಂತರವೂ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಕರ್ತರ ತಂಡವು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬಾಲಕನನ್ನು ಕೊಳವೆ ಬಾವಿಯಿಂದ ಹೊರತೆಗೆದಿದ್ದಾರೆ. ಆದರೆ ಆಸ್ಪತ್ರೆ ತಲುಪುವ ಮೊದಲೇ ಬಾಲಕ ಪ್ರಹ್ಲಾದ್ ಮೃತಪಟ್ಟಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ದುರಂತದ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದ್ದಾರೆ.

ಇದನ್ನೂ ಓದಿ: ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ರೈತ ಹರಿಕೃಷ್ಣನ್ ಕುಶ್ವಾಹ ಅವರ ಮಗ ಪ್ರಹ್ಲಾದ್, ಬುಧವಾರ ಬೆಳಿಗ್ಗೆ ನಿವಾರಿ ಜಿಲ್ಲೆಯ ಸೈತ್ಪುರಾ (ಬರಾಹ್‌ಬುಜುರ್ಗ್) ಗ್ರಾಮದಲ್ಲಿರುವ ತನ್ನ ತಂದೆಯ ಹೊಲದಲ್ಲಿ ಹೊಸದಾಗಿ ತೋಡಿದ್ದ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದನು.

200 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಾಲಕ ಪ್ರಹ್ಲಾದ್, 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿತ್ತು. ಆದರೆ, ಕಳೆದ ಮೂರು ದಿನಗಳಿಂದ ಯಾವುದೇ ಚಲನವಲನ ಕಾಣಿಸುತ್ತಿರಲಿಲ್ಲ ಎಂದು ಜಿಲ್ಲಾಧಿಕಾರಿ ಆಶಿಶ್ ಭಾರ್ಗವ ತಿಳಿಸಿದ್ದಾರೆ.

ಬಾಲಕನ ರಕ್ಷಣೆಗಾಗಿ ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತಿತ್ತು. ಸತತ ಸುಮಾರು 90 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 80 ರಕ್ಷಣಾ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಆದರೂ ಆತನನ್ನು ಉಳಿಸಲಾಗಲಿಲ್ಲ ಎಂದು ಆಶಿಶ್ ಭಾರ್ಗವ ಹೇಳಿದರು.

ದುರಂತದ ಕುರಿತು ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಾಲಕ, ’ಬೋರ್‌ವೆಲ್‌ಗಳನ್ನು ಕೊರೆಸುವ ಎಲ್ಲರಿಗೂ ನಾನು ಪ್ರಾರ್ಥಿಸುತ್ತೇನೆ, ಅವರು ಯಾವುದೇ ಸಮಯದಲ್ಲಿ  ಬೋರ್‌ವೆಲ್‌ಗಳನ್ನು ತೆರೆದಿರಬೇಡಿ. ನಿಮ್ಮ ಸುತ್ತಮುತ್ತಲಿನ ಬೋರ್‌ವೆಲ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಿ. ಈ ಹಿಂದೆ ಕೂಡ ಹಲವು ಮುಗ್ದರು ಇಂತಹ ದುರಂತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಎಚ್ಚರಿಸಿದ್ದಾರೆ.


 

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...