Homeಅಂತರಾಷ್ಟ್ರೀಯನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

- Advertisement -
- Advertisement -

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾದವರ ಪ್ರಾಥಮಿಕ ಪಟ್ಟಿಯಲ್ಲಿ 291 ವಿದೇಶಿ ಪ್ರಜೆಗಳು ಮತ್ತು 93 ನೇಪಾಳಿ ಪ್ರಜೆಗಳು ಸೇರಿದ್ದಾರೆ. ವಿದೇಶಿ ಪ್ರವಾಸಿಗರಲ್ಲಿ ಭಾರತದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, 105 ಭಾರತೀಯರು ನಾಪತ್ತೆಯಾಗಿದ್ದಾರೆ. ಇವರೊಂದಿಗೆ ಇತರ 37 ಜನರನ್ನು ಅನಿವಾಸಿ ಭಾರತೀಯರು (ಎನ್‌ಆರ್‌ಐ) ಎಂದು ಗುರುತಿಸಲಾಗಿದೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ, ನೆದರ್ಲ್ಯಾಂಡ್ಸ್, ಯುನೈಟೆಡ್ ಸ್ಟೇಟ್ಸ್, ಮಲೇಷ್ಯಾ, ಯುನೈಟೆಡ್ ಕಿಂಗ್ಡಮ್ ಮತ್ತು ದಕ್ಷಿಣ ಆಫ್ರಿಕಾದ ಪ್ರಜೆಗಳೂ ಇದ್ದಾರೆ. ಇನ್ನುಳಿದ ಹಲವಾರು ವಿದೇಶಿ ಪ್ರವಾಸಿಗರ ರಾಷ್ಟ್ರೀಯತೆಯ ಖಚಿತವಾಗಬೇಕಿದೆ.

ನೇಪಾಳ ಪ್ರವಾಸೋದ್ಯಮ ಮಂಡಳಿಯು ಈ ಪ್ರಾಥಮಿಕ ಮಾಹಿತಿಯನ್ನು 10 ಟೂರಿಸಂ ಮತ್ತು ಟ್ರಾವೆಲ್ ಏಜೆನ್ಸಿಗಳಿಂದ ಸಂಗ್ರಹಿಸಲಾಗಿದೆ ಎಂದು ತಿಳಿಸಿದೆ. ನಾಪತ್ತೆಯಾದವರ ಪತ್ತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಂಡಳಿ, ಟೂರಿಸ್ಟ್ ಪೊಲೀಸ್ ಮತ್ತು ಇತರ ಪ್ರವಾಸೋದ್ಯಮ ಪಾಲುದಾರರು ಪ್ರಸ್ತುತ ಟ್ರಾವೆಲ್ ಏಜೆನ್ಸಿಗಳು, ಗೈಡ್‌ಗಳು, ಸ್ಥಳೀಯ ಅಧಿಕಾರಿಗಳು ಹಾಗೂ ಭದ್ರತಾ ಸಂಸ್ಥೆಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದೆ.

ಏಜೆನ್ಸಿವಾರು ಪ್ರಾಥಮಿಕ ದಾಖಲೆಗಳ ಪ್ರಕಾರ, ಟ್ರೆಕ್ಕರ್ಸ್ ಸೊಸೈಟಿಯಿಂದ 92 ಪ್ರವಾಸಿಗರು, ಸಾಮ್ರಾಟ್ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ 71, ಲೀಫ್ ಹಾಲಿಡೇಯಿಂದ 55, ಹಿಮಾಲಯನ್ ಗ್ಲೇಸಿಯರ್‌ನಿಂದ 52, ಕೈಲಾಶ್ ಜರ್ನಿಯಿಂದ 31, ಫಿಶ್‌ಟೇಲ್ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ 27, ಆಲ್ಪೈನ್ ಎಕೋ ಟ್ರೆಕ್‌ನಿಂದ 20, ಕಠ್ಮಂಡು ಹಾಲಿಡೇ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ 17, ರಿಚಾ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ 12 ಮತ್ತು ಎಕ್ಸ್‌ಪ್ಲೋರ್ ವೆಕೇಶನ್‌ನಿಂದ ಏಳು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.

ಈ ಪಟ್ಟಿಯು ಕೇವಲ ಪ್ರಾಥಮಿಕವಾಗಿದ್ದು, ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ಪ್ರವಾಸೋದ್ಯಮ ಮಂಡಳಿಯು ಒತ್ತಿಹೇಳಿದೆ. ಹಾಗಾಗಿ ಪರಿಶೀಲನಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಪ್ರವಾಸಿಗರು ಮತ್ತು ಅವರ ಕುಟುಂಬಸ್ಥರು ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ವಿನಂತಿಸಿದೆ.

ಪ್ರವಾಹ ಉಂಟಾದ ಪ್ರದೇಶಗಳಲ್ಲಿರುವ ಪ್ರವಾಸಿಗರು ಧೈರ್ಯದಿಂದ ಇರಲು, ಅಧಿಕೃತ ಅಪ್ಡೇಟ್‌ಗಳನ್ನು ಮತ್ರ ಪರಿಗಣಿಸಲು ಮತ್ತು ಸುರಕ್ಷತಾ ಸೂಚನೆಗಳನ್ನು ಪಾಲಿಸಲು ಸಲಹೆ ನೀಡಲಾಗಿದೆ. ತುರ್ತು ಸಹಾಯದ ಅಗತ್ಯವಿರುವವರು 1234 ಅಥವಾ 1144 ಸಂಖ್ಯೆಯನ್ನು ಸಂಪರ್ಕಿಸಬಹುದು. ಟೂರಿಸ್ಟ್ ಪೊಲೀಸರನ್ನು 9851289445 ಸಂಖ್ಯೆಯ ಮೂಲಕ ಸಂಪರ್ಕಿಸಬಹುದು. ಪ್ರವಾಸಿಗರು ಹತ್ತಿರದ ಪೊಲೀಸ್ ಅಥವಾ ಭದ್ರತಾ ಅಧಿಕಾರಿಗಳು, ಸ್ಥಳೀಯ ಆಡಳಿತ, ಟ್ರಾವೆಲ್ ಏಜೆನ್ಸಿ, ಗೈಡ್ ಅಥವಾ ಟೂರ್ ಆಪರೇಟರ್‌ಗಳನ್ನು ಸಹ ಸಂಪರ್ಕಿಸಬಹುದಾಗಿದೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...