Homeಮುಖಪುಟಡಿ.10ರಿಂದ ಮೈಸೂರು - ಮಂಗಳೂರು ನಡುವೆ ವಿಮಾನ ಸೇವೆ ಆರಂಭ

ಡಿ.10ರಿಂದ ಮೈಸೂರು – ಮಂಗಳೂರು ನಡುವೆ ವಿಮಾನ ಸೇವೆ ಆರಂಭ

ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ವಿಮಾನ ಸೇವೆ ಲಭ್ಯವಿರುತ್ತದೆ

- Advertisement -
- Advertisement -

ರಾಜ್ಯದ ಸಾಂಸ್ಕ್ರತಿಕ ನಗರಿ ಮೈಸೂರು ಹಾಗೂ ಕಡಲನಗರಿ ಮಂಗಳೂರು ನಡುವೆ ಮೊದಲ ಬಾರಿಗೆ ಏರ್‌ ಇಂಡಿಯಾದ ಅಲಯನ್ಸ್ ಸಂಸ್ಥೆ ಡಿಸೆಂಬರ್ 10 ರಿಂದ ವಿಮಾನ ಸೇವೆ ಆರಂಭಿಸಲಿದೆ.

ವಾರದಲ್ಲಿ ನಾಲ್ಕು ದಿನ ಅಂದರೆ ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ವಿಮಾನ ಸೇವೆ ಲಭ್ಯವಿದ್ದು, ಬೆಳಿಗ್ಗೆ 11 ಗಂಟೆ 15 ನಿಮಿಷಕ್ಕೆ ಮೈಸೂರಿನಿಂದ ವಿಮಾನ ಹೊರಟರೆ ಮಧ್ಯಾಹ್ನ 12 ಗಂಟೆ 15 ನಿಮಿಷಕ್ಕೆ ಮಂಗಳೂರು ತಲುಪಲಿದೆ.

ಮತ್ತೆ ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆ 40 ನಿಮಿಷಕ್ಕೆ ಹೊರಟು 1 ಗಂಟೆ 40 ನಿಮಿಷಕ್ಕೆ ಮೈಸೂರಿಗೆ ಬಂದು ತಲುಪಲಿದೆ. ಈ ವಿವರಗಳನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ವಿಮಾನಯಾನವು ಸರ್ಕಾರದ ಎಲ್ಲಾ ಮಾರ್ಗಸೂಚಿಗಳಿಗೆ ಬದ್ಧವಾಗಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ ಎಲ್ಲಾ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು (ಎಸ್‌ಒಪಿ) ಅನುಸರಿಸುತ್ತದೆ . ಜೊತೆಗೆ ಚೆಕ್-ಇನ್, ಬೋರ್ಡಿಂಗ್ ಸಮಯದಲ್ಲಿ ವಿಮಾನದೊಳಗೆ ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪ್ರತಿ ಹಾರಾಟದ ನಂತರ ವಿಮಾನಗಳನ್ನು ಕಟ್ಟುನಿಟ್ಟಾಗಿ ಸೋಂಕುರಹಿತಗೊಳಿಸಲಾಗುತ್ತಿದೆ ಎಂದು ಮಾಹಿತಿ ದೊರೆತಿದೆ.


ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾನ ಮಾಡಿ: ಖರ್ಗೆ, ರಾಹುಲ್‌ ಗಾಂಧಿ ಆಗ್ರಹ

0
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾರರು ಮನೆಯಿಂದ ಹೊರಗೆ ಬಂದು ಮತ ಚಲಾಯಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. ಇದು ಸಾಮಾನ್ಯ...